ಬೆಳಗಾವಿ ಅಧಿವೇಶನಕ್ಕೂ ಮುನ್ನ ಜೆಡಿಎಸ್ ಪಾದಯಾತ್ರೆ
ಧಾರವಾಡ, ಜೂ. 17 : ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಯ ಹಾಗೂ ಕಬ್ಬು ಬೆಳೆಗಾರರ ಸಮಸ್ಯೆ ಬಗಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಧಾರವಾಡದಿಂದ ಬೆಳಗಾವಿ ತನಕ ಪಾದಯಾತ್ರೆ ಹಮ್ಮಿಕೊಂಡಿದೆ. ಜೂನ್ 25ರಿಂದ 28ರ ತನಕ ಪಾದಯಾತ್ರೆ ನಡೆಯಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದ್ದು, ಜೂನ್ 29ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುತ್ತದೆ. [ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ]

ಜೂನ್ 25ರಂದು ಧಾರವಾಡದಲ್ಲಿ ಪಾದಯಾತ್ರೆ ಆರಂಭವಾಗಲಿದ್ದು, ಜೆಡಿಎಸ್ ಶಾಸಕರು, ವಿಧಾನಪರಿಷತ್ ಸದಸ್ಯರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 80 ಕಿ.ಮೀ.ಗಳ ಪಾದಯಾತ್ರೆ ಜೂನ್ 28ರಂದು ಬೆಳಗಾವಿಯಲ್ಲಿ ಮುಕ್ತಾಯಗೊಳ್ಳಲಿದೆ. [ಉತ್ತರ ಕರ್ನಾಟಕ ಪತ್ಯೇಕ ರಾಜ್ಯ, ಇದು ಕತ್ತಿ ಬೇಡಿಕೆಯಲ್ಲ!]
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜೂನ್ 29ರಿಂದ ಜುಲೈ 10ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜೆಡಿಎಸ್ ನಿರ್ಧರಿಸಿದೆ.
ಜೆಡಿಎಸ್ ಪಕ್ಷದ ಬೇಡಿಕೆಗಳು
* ಕಳಸಾ ಬಂಡೂರಿ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವುದು
* ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸುವುದು
* ಅಕಾಲಿಕ ಮಳೆಯಿಂದ ಉಂಟಾದ ಬೆಳೆಹಾನಿಗೆ ಪರಿಹಾರ ನೀಡುವುದು
* ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವುದು












Click it and Unblock the Notifications