ಉತ್ತರ ಕರ್ನಾಟಕದ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಸಿ

Posted By:
Subscribe to Oneindia Kannada

ಧಾರವಾಡ, ಮೇ 30 : ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನೆರವಾಗಲು ಧಾರವಾಡದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜೂನ್ 25 ಮತ್ತು 26ರಿಂದ ಮೇಳ ನಡೆಯಲಿದ್ದು, ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. [ಉತ್ತರ ಕರ್ನಾಟಕದ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಸಿ]

ಧಾರವಾಡ ಜಿಲ್ಲಾಧಿಕಾರಿ ಪಿ.ರಾಜೇಂದ್ರ ಚೋಳನ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಧಾರವಾಡ ಜೆ.ಎಸ್‌.ಎಸ್.ಕ್ಯಾಂಪಸ್‌ನಲ್ಲಿ ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದ್ದು, 400ಕ್ಕೂ ಅಧಿಕ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ' ಎಂದು ಹೇಳಿದ್ದಾರೆ. [ಇಸ್ರೋದಲ್ಲಿ ಕೆಲಸ ಖಾಲಿ ಇದೆ]

dharwad

ಉದ್ಯೋಗ ಮತ್ತು ತರಬೇತಿ ಸಂಸ್ಥೆ, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಇಲಾಖೆ, ಜೆ.ಎಸ್.ಎಸ್, ವೈಶುದೀಪ ಪ್ರತಿಷ್ಠಾನ ಮತ್ತು ಹುಬ್ಬಳ್ಳಿ ವಾಣಿಜ್ಯೋದ್ಯಮಿಗಳ ಸಂಘ ಜಂಟಿಯಾಗಿ ಈ ಮೇಳ ಆಯೋಜಿಸಿವೆ. ಕನಿಷ್ಠ 15 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಗುರಿ ಹೊಂದಲಾಗಿದೆ. [ವಿಜಯಪುರ ಹಾಲು ಉತ್ಪಾದಕರ ಸಂಘದಲ್ಲಿ ಕೆಲಸ ಖಾಲಿ ಇದೆ]

ನೋಂದಣಿ ಮಾಡಿಸಿ : ಈ ಉದ್ಯೋಗ ಮೇಳದಲ್ಲಿ 25 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೇಳದ ದಿನ ನೂಕುನುಗ್ಗಲು ಉಂಟಾಗಬಾರದು ಎಂಬ ಕಾರಣಕ್ಕಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. [ಕರ್ನಾಟಕ : ಉಗ್ರಾಣ ನಿಗಮದಲ್ಲಿ ಕೆಲಸ ಖಾಲಿ ಇದೆ]

ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ vidyasnehi.org ಮತ್ತು jsspitidwd.org

ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದವರು ಜಿಲ್ಲಾಧಿಕಾರಿಗಳ ಕಚೇರಿ, ಅಂಬೇಡ್ಕರ್ ಭವನ, ಜೆಎಸ್‌ಎಸ್, ಟೈಕೂನ್,ಸಿಐಐ ಕಚೇರಿಗೂ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೇಳದಲ್ಲಿ ಪಾಲ್ಗೊಳ್ಳಲು ಟೋಕನ್ ನೀಡಲಾಗುತ್ತದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Please Wait while comments are loading...