ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ

|
Google Oneindia Kannada News

ಧಾರವಾಡ, ಜುಲೈ 26 : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ದಂಪತಿಗಳಿಬ್ಬರು ಮಗಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಮೂವರ ಶವ ಮನೆಯಲ್ಲಿ ಪತ್ತೆಯಾಗಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಭಾರತದಲ್ಲಿ ಸಾವಿರಾರು ಉದ್ಯೋಗ ಸೃಷ್ಟಿಸಲಿರುವ ಅಮೆಜಾನ್ಭಾರತದಲ್ಲಿ ಸಾವಿರಾರು ಉದ್ಯೋಗ ಸೃಷ್ಟಿಸಲಿರುವ ಅಮೆಜಾನ್

ಶವಗಳ ಬಳಿ ಡೆತ್‌ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಧಾರವಾಡ: ಖಾಸಗಿ ಶಾಲೆಯ 8 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ಧಾರವಾಡ: ಖಾಸಗಿ ಶಾಲೆಯ 8 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು

suicide

ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲವು ಕಂಪನಿಗಳು ನೌಕರರ ವೇತನವನ್ನು ಕಡಿತ ಮಾಡಿವೆ.

ಮೈಸೂರಿನಲ್ಲಿ ಕೊವಿಡ್-19 ಭಯದಲ್ಲಿ ಸೋಂಕಿತ ಆತ್ಮಹತ್ಯೆ ಮೈಸೂರಿನಲ್ಲಿ ಕೊವಿಡ್-19 ಭಯದಲ್ಲಿ ಸೋಂಕಿತ ಆತ್ಮಹತ್ಯೆ

ದಂಪತಿಗಳು ಸಹ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದ್ದು, ಪೊಲೀಸರು ಡೆತ್ ನೋಟ್ ಪರಿಶೀಲನೆ ನಡೆಸುತ್ತಿದ್ದಾರೆ.

ಶನಿವಾರ ಧಾರವಾಡದಲ್ಲಿ 183 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3025. ಇದುವರೆಗೂ ಜಿಲ್ಲೆಯಲ್ಲಿ 89 ಜನರು ಮೃತಪಟ್ಟಿದ್ದಾರೆ.

English summary
Three members of a family committed suicide in Dharwad, Karnataka allegedly over fear of job loss due to COVID - 19. A suicide note found near bodies. Police visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X