ನವಲಗುಂದದಲ್ಲಿ ಮತ್ತೆ ಹೊತ್ತಿಕೊಂಡ ಕಳಸಾ-ಬಂಡೂರಿ ಕಿಚ್ಚು

Posted By:
Subscribe to Oneindia Kannada

ಧಾರವಾಡ, ಡಿಸೆಂಬರ್ 20: ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗಾಗಿ ಆಗ್ರಹಿಸಿ ನಿರಂತರ ಧರಣಿ ಸತ್ಯಾಗ್ರಹ 873 ನೇ ದಿನಕ್ಕೆ ಕಾಲಿಟ್ಟಿದ್ದರೂ ಬೇಡಿಕೆ ಈಡೇರದ ಹಿನ್ನಲೆಯಲ್ಲಿ ಪ್ರಶ್ನಾತೀತ ರೈತ ಹೋರಾಟ ಸಮಿತಿ ಇಂದು (ಬುಧವಾರ) ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣ ಬಂದ್ ಗೆಕರೆ ನೀಡಿದೆ.

ಡಿಸೆಂಬರ್ 15ರೊಳಗೆ ಕಳಸಾ ಬಂಡೂರಿ ಸಮಸ್ಯೆ ಬಗೆಹರಿಸುತ್ತೇನೆ : ಯಡಿಯೂರಪ್ಪ

ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನವಲಗುಂದ ಪಟ್ಟಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಗ್ಗಟ್ಟುಗಳು ಬಾಗಿಲು ಮುಚ್ಚಿವೆ.

Kalasa Banduri issue: call Navalgunda bandh today

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಡಿಸೆಂಬರ್ 15ರೊಳಗೆ ಮಹದಾಯಿ ನದಿ ನೀರು ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ಭರವಸೆ ಈಡೇರಿಸಿಲ್ಲ ಇದರಿಂದ ಕುಪಿತಗೊಂಡ ವಿವಿಧ ಸಂಘನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನವಲಗುಂದ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kalasa Banduri issue: various organizations call Navalgunda bandh today for demand for the Kalasa-Banduri and Mahadayi river project. Hotels, shops closed in Navalgunda, Dharawada district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ