84ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕಂಬಾರ ಆಯ್ಕೆ
ಧಾರವಾಡ, ಸೆ.27: 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ ಆಯ್ಕೆಯಾಗಿದ್ದಾರೆ.
ಧಾರವಾಡದಲ್ಲಿ ಡಿಸೆಂಬರ್ 7,8,9ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ, ಈ ಕುರಿತು ಗದಗದಲ್ಲಿ ನಡೆದ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ಗದಗ ನಗರದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಹಿಂದೆ 1918,1940,1957ರ ಸಮ್ಮೇಳನ ಧಾರವಾಡದಲ್ಲಿ ನಡೆದಿತ್ತು, 1957ರಲ್ಲಿ ಕುವೆಂಪು ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಚಂದ್ರಶೇಖರ ಕಂಬಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.












Click it and Unblock the Notifications