ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ ಸಾಹಿತ್ಯ ಸಮ್ಮೇಳನ ಜನವರಿಗೆ ಮುಂದೂಡಿಕೆ

|
Google Oneindia Kannada News

Recommended Video

ಧಾರವಾಡ ಸಾಹಿತ್ಯ ಸಮ್ಮೇಳನ ಜನವರಿಗೆ ಮುಂದೂಡಿಕೆ | Oneindia Kannada

ಧಾರವಾಡ, ಅಕ್ಟೋಬರ್ 24: ಧಾರವಾಡದಲ್ಲಿ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ 84ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಗೆ ಮುಂದೂಡಲಾಗಿದೆ. ಡಿ.7ರಿಂದ ಮೂರು ದಿನಗಳ ಕಾಲ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು.

84ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕಂಬಾರ ಆಯ್ಕೆ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕಂಬಾರ ಆಯ್ಕೆ

ಈ ಕುರಿತು ಮಾಹಿತಿ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ ಮನು ಬಳಿಗಾರ್, ಸಮ್ಮೇಳನದ ಸಿದ್ಧತೆಗೆ ಸಮಯಾವಕಾಶ ಕಡಿಮೆ ಇದೆ, ಆದ್ದರಿಂದ ಒಂದು ತಿಂಗಳ ಕಾಲ ಸಮ್ಮೇಳನವನ್ನು ಮುಂದೂಡಲಾಗಿದೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಅ.17ರಂದು ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅವಧಿ 5 ವರ್ಷಕ್ಕೆ ವಿಸ್ತರಣೆ ಇಲ್ಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅವಧಿ 5 ವರ್ಷಕ್ಕೆ ವಿಸ್ತರಣೆ ಇಲ್ಲ

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಸರ್ವಾಧ್ಯಕ್ಷ ಚಂದ್ರಶೇಖರ ಕಂಬಾರ ಅವರಿಗೂ ಈ ಕುರಿತು ಮಾಹಿತಿ ನೀಡಿ ಸಮ್ಮತಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಕಳೆದ ಬಾರಿ ಮೈಸೂರಿನಲ್ಲಿ ನಡೆದ ಸಮ್ಮೇಳನಕ್ಕೆ ಸುಮಾರು ಒಂದೂವರೆ ಲಕ್ಷ ಮಂದಿ ಆಗಮಿಸಿದ್ದರು. ಈ ಬಾರಿಯೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಧಾರವಾಡದ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

84ನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಧ್ಯಕ್ಷ ಸ್ಥಾನಕ್ಕೆ ವೀಣಾ ಶಾಂತೇಶ್ವರ ಹೆಸರು 84ನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಧ್ಯಕ್ಷ ಸ್ಥಾನಕ್ಕೆ ವೀಣಾ ಶಾಂತೇಶ್ವರ ಹೆಸರು

Kannada Sahitya Sammelan postponed to January

ಈ ಬಾರಿಯ ಗೋಷ್ಠಿಯಲ್ಲಿ ಉತ್ತರ ಕರ್ನಾಟಕಸ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಾಗುತ್ತದೆ. ಜತೆಗೆ ಮಹದಾಯಿ, ಕೃಷ್ಣ ಸೇರಿದಂತೆ ನೀರಾವರಿ ಸಮಸ್ಯೆಗಳು, ಗಡಿ ಸಮಸ್ಯೆಗಳು ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಚರ್ಚೆಯಾಗಲಿವೆ. ದಲಿತ ಅಸ್ಮಿತೆ, ಕನ್ನಡ ಚಲನಚಿತ್ರ ಮತ್ತು ಕಿರುತೆರೆ, ವೈಚಾರಿಕತೆ ಮತ್ತು ಅಸಹಿಷ್ಣುತೆ, ಮರು ಓದು ಪ್ರಾಚೀನ ಸಾಹಿತ್ಯ, ಕನ್ನಡ ಶಾಲೆಗಳ ಅಳಿವು-ಉಳಿವು ಹೀಗೆ ಒಟ್ಟು 20 ವಿಷಯಗಳ ಕುರಿತು ಬೇರೆ ಬೇರೆ ಆಯಾಮಗಳಲ್ಲಿ ಚರ್ಚೆಗಳು ನಡೆಯಲಿವೆ ಎಂದು ಮನು ಬಳಿಗಾರ್ ತಿಳಿಸಿದ್ದಾರೆ.

English summary
Considering the more time needed to preparations Akhil Bharat Kannada Sahitya Sammelan was rescheduled fromJanuary 6 to 8 at Dharwad which was earlier fixed in December.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X