ಕರ್ನಾಟಕ ಚುನಾವಣೆ; ಮನೆಯಿಂದಲೇ ಮತದಾನ ಪ್ರಕ್ರಿಯೆ ಹೇಗೆ?

ಧಾರವಾಡ, ಏಪ್ರಿಲ್‌ 02; ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಈಗಾಗಲೇ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ.

ಚುನಾವಣೆ ದಿನಾಂಕ ಘೋಷಣೆ ಮಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ ಮೊದಲ ಬಾರಿಗೆ ಕರ್ನಾಟಕದ ಚುನಾವಣೆಯಲ್ಲಿ ವಿಕಲಚೇತನರು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಈ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಚುನಾವಣಾಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ ಕೈಗೊಂಡಿದ್ದಾರೆ.

Vote From Home

ಧಾರವಾಡ ಗ್ರಾಮೀಣ ಮತಕ್ಷೇತ್ರ-71ರ ಚುನಾವಣಾ ಅಧಿಕಾರಿ ಅಶೋಕ್ ತೇಲಿ ನಗರದ ಮದಿಹಾಳದಲ್ಲಿರುವ 86 ವರ್ಷ ಮೇಲ್ಪಟ್ಟ ಶಾರದಾಬಾಯಿ ರಂಗನಾಥ ಕುಲಕರ್ಣಿ ಮತ್ತು ಸಂಪೂರ್ಣ ಅಂಗವಿಕಲ 27 ವರ್ಷದ ಚೇತನ್ ಬಿಕ್ಕನ್ನವರ ಮನೆಗೆ ಭೇಟಿ ನೀಡಿ, ಮನೆಯಿಂದಲೇ ಮತ ಹಾಕುವ ಒಪ್ಪಿಗೆ ಪತ್ರ ನೀಡಿ, ಅದರ ಬಗ್ಗೆ ಮಾಹಿತಿ ತಿಳಿಸಿದರು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಈ ಅವಕಾಶವನ್ನು 80 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಹಾಗೂ ವಿಶೇಷ ಚೇತನರಿಗೆ ನೀಡಲಾಗಿದೆ ಎಂದರು.

ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಹಾಗೂ ವಿಶೇಷ ಚೇತನರಿಗೆ ಮತದಾನದ ಹಕ್ಕು ಸಮರ್ಪಕವಾಗಿ ಕಲ್ಪಿಸಲು ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಪ್ರಥಮ ಬಾರಿಗೆ ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ನೀಡಿತ್ತು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಹೇಳಿದರು.

dharwad-news

ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 80 ವರ್ಷ ಮೇಲ್ಪಟ್ಟ 2293 ಪುರುಷ ಹಾಗೂ 2673 ಮಹಿಳಾ ಸೇರಿ ಒಟ್ಟು 4966 ಮತದಾರರಿದ್ದಾರೆ ಮತ್ತು 2128 ಪುರುಷ ಹಾಗೂ 1447 ಮಹಿಳಾ ಸೇರಿ ಒಟ್ಟು 3575 ವಿಶೇಷ ಚೇತನ ಮತದಾರರಿದ್ದಾರೆ. ಈ ಎಲ್ಲ ಮತದಾರರಿಗೆ ಬಿಎಲ್‌ಓಗಳ ಮೂಲಕ 12 ಡಿ ಅರ್ಜಿ ನಮೂನೆಯನ್ನು ತಲುಪಿಸಿ ಅವರು ಮನೆಯಿಂದಲೇ ಮತದಾನ ಮಾಡುವ ಅಥವಾ ಮತಗಟ್ಟೆಗೆ ಬಂದು ಮತ ಹಾಕುವ ಕುರಿತು ಒಪ್ಪಿಗೆ ಪತ್ರವನ್ನು ಪಡೆಯಲಾಗುತ್ತಿದೆ ಎಂದು ವಿವರಣೆ ನೀಡಿದರು.

ಹೇಗೆ ನಡೆಯಲಿದೆ ಪ್ರಕ್ರಿಯೆ?; ಮನೆಯಿಂದಲೇ ಮತದಾನ ಮಾಡುವ ಕುರಿತು ಒಪ್ಪಿಗೆ ನೀಡಿದ ಮತದಾರರಿಗೆ ಭಾರತ ಚುನಾವಣಾ ಆಯೋಗ ನೀಡಿರುವ ನಿಯಮಾವಳಿಯಂತೆ ಸೂಕ್ತ ಭದ್ರತೆಯೊಂದಿಗೆ, ನಿಗದಿಪಡಿಸಿದ ಅಧಿಕಾರಿಗಳ, ರಾಜಕೀಯ ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಗೌಪ್ಯ ಮತದಾನ ಪಡೆಯಲಾಗುತ್ತದೆ ಮತ್ತು ಈ ಎಲ್ಲ ಪ್ರಕ್ರಿಯೆಯನ್ನು ವಿಡಿಯೋಗ್ರಾಫಿ ಮಾಡಿಸಲಾಗುತ್ತದೆ. ಚುನಾವಣಾ ಆಯೋಗ ಪ್ರತಿಯೊಬ್ಬ ಮತದಾರ ತಮ್ಮ ಹಕ್ಕನ್ನು ನ್ಯಾಯೋಚಿತವಾಗಿ ಚಲಾಯಿಸಲು ಅನುವಾಗುವಂತೆ ಈ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿದೆ.

ಪ್ರತಿ ಜಿಲ್ಲಾಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ 80 ವರ್ಷ ಮೇಲ್ಪಟ್ಟ ವಯೋವೃದ್ಧರು ಹಾಗೂ ವಿಶೇಷ ಚೇತನರ ಪಟ್ಟಿಯನ್ನು ಈಗಾಗಲೇ ತಯಾರು ಮಾಡಿದ್ದಾರೆ. ಎಷ್ಟು ಮತದಾರರು ಇದ್ದಾರೆ ಎಂಬ ಮಾಹಿತಿ ಸಂಗ್ರಹ ಮಾಡಲಾಗಿದೆ. ಅವರಿಗೆ ಮತದಾನದ ಹಕ್ಕು ಸಮರ್ಪಕವಾಗಿ ಕಲ್ಪಿಸಲು ಮನೆಯಿಂದಲೇ ಹೇಗೆ ಮತದಾನ ಮಾಡುವುದು ಎಂದು ಅಧಿಕಾರಿಗಳು ಅರಿವು ಮೂಡಿಸಲಿದ್ದಾರೆ.

80 ವರ್ಷ ಮೇಲ್ಪಟ್ಟ ಮತದಾರರು ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ತೀರಾ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ 80 ವರ್ಷ ಮೇಲ್ಪಟ್ಟ ಮತದಾರರು ತಮ್ಮ ಹೆಸರು ಇರುವ ಮತಗಟ್ಟೆಗೆ ಬಂದು ಮತ ಹಾಕುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ-74 ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಭರತ್ .ಎಸ್. ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+