ಧಾರವಾಡ ಜಿಲ್ಲಾ ಕಾಂಗ್ರೆಸ್‌ನಲ್ಲಿ ಮತ್ತೊಂದು ವಿಕೆಟ್ ಪಥನ, ಪಿ.ಎಚ್.ನೀರಲಕೇರಿ ರಾಜೀನಾಮೆ
ಧಾರವಾಡ, ಏಪ್ರಿಲ್, 25: ಧಾರವಾಡ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಎಚ್.ನೀರಲಕೇರಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.
ಪಿ.ಎಚ್.ನೀರಲಕೇರಿ ಅವರಿಗೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು ಅಸಮಾಧಾನಗೊಂಡಿದ್ದರು. ಇದೇ ಟಿಕೆಟ್ ರೇಸ್‌ನಲ್ಲಿದ್ದ ಬಸವರಾಜ ಮಲಕಾರಿಗೂ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಇದೀಗ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ನಡೆಸಿದ್ದಾರೆ. ಇದೀಗ ಪಿ.ಎಚ್.ನೀರಲಕೇರಿ ಕೂಡ ಪಕ್ಷದಿಂದ ಹೊರಬಂದಿದ್ದಾರೆ.

ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಆದ ಅನ್ಯಾಯ ಹಾಗೂ ಧಾರವಾಡ ಕಾಂಗ್ರೆಸ್‌ನ ಕೆಲ ನಾಯಕರ ಹಾಗೂ ರಾಜ್ಯ ಮಟ್ಟದ ನಾಯಕರ ವರ್ತನೆಗಳಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನೀರಲಕೇರಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ರಾಜೀನಾಮೆ ಪ್ರತಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿದ್ದಾರೆ.
ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ಸೇರಿದ್ದ ಶೆಟ್ಟರ್
ಇನ್ನು ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ರಾಜ್ಯ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್‌ಗಾಗಿ ಬಿಜೆಪಿ ಪಾಳಯದಲ್ಲಿ ಬಂಡಾಯದ ಬೆಂಕಿ ಜೋರಾಗಿದ್ದು, ಸಾಲು ಸಾಲು ನಾಯಕರು ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಜಗದೀಶ್ ಶೆಟ್ಟರ್ ಅವರು ಸಹ ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿದ್ದರು.
ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆ ವಿಫಲಾದ ಕಾರಣ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರು. ನಂತರ ಕಾಂಗ್ರೆಸ್ ನಾಯಕರು ನಡೆಸಿದ ಮಾತುಕತೆ ಸಕ್ಸಸ್ ಆಗಿದ್ದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಲಿಂಗಾಯತ ನಾಯಕರ ಜೊತೆಗೆ ಜಗದೀಶ್ ಶೆಟ್ಟರ್ ಚರ್ಚೆ ನಡೆಸಿದ ಬಳಿಕ ಆಪ್ತ ಸಹಾಯಕರ ಮೂಲಕ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.
ಬಿಜೆಪಿಗೆ ರಾಜಿನಾಮೆ ಘೋಷಿಸಿದ್ದ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಶಿರಸಿಗೆ ಆಪ್ತ ಸಹಾಯಕರ ಮೂಲಕ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇನ್ನೂ ರಾಜೀನಾಮೆ ಸಲ್ಲಿಕೆಗೂ ಮುನ್ನ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ, ಖುದ್ದು ಮನವೊಲಿಕೆಗೆ ಯತ್ನಿಸಲಾಯಿತು. ದೂರವಾಣಿ ಮೂಲಕ ಮಾತನಾಡಿದ ಬಳಿಕವೂ, ಒಪ್ಪದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಿನಾಮೆ ಪತ್ರ ಸಲ್ಲಿಸಿದ್ದರು.
ಇನ್ನು ಜಗದೀಶ್ ಶೆಟ್ಟರ್ ಅವರ ರಾಜೀನಾಮೆ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಜಗದೀಶ್ ಶೆಟ್ಟರ್ ಅವರನ್ನು ಕೇಂದ್ರದ ಸಚಿವರನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಹೇಳಿದ್ರೂ ಹಠಮಾಡಿ ಕಾಂಗ್ರೆಸ್ ಸೇರಲು ಹೊರಟಿರೋದು ಅಕ್ಷಮ್ಯ ಅಪರಾಧ. ನಾಡಿನ ಜನ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದರು. ಪಕ್ಷ ತೊರೆಯುತ್ತಿರೋದು ಯಾಕೆ, ನಾವು ಏನು ಕಡಿಮೆ ಮಾಡಿದ್ದೇವೆ? ಎಂದು ಶೆಟ್ಟರ್ ಅವರನ್ನ ಪ್ರಶ್ನಿಸಿದ್ದರು.
ಶೆಟ್ಟರ್ ಅವರನ್ನು ಮಂತ್ರಿ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಯಿತು. ಹಾಗೆಯೆ ಪಕ್ಷ ಎಲ್ಲ ಗೌರವ ಕೊಟ್ಟಿದೆ ಎಂದು ಶೆಟ್ಟರ್ ವಿರುದ್ದ ಅಸಮಾಧಾನ ಹೊರಹಾಕಿದ್ದರು.












Click it and Unblock the Notifications