ಹುಟ್ಟುಹಬ್ಬ ಆಚರಿಸದಂತೆ ಅಭಿಮಾನಿಗಳಿಗೆ ಡಿ.ಕೆ.ಶಿವಕುಮಾರ್ ಮನವಿ

Recommended Video

      ಮೇ 15 ಡಿ ಕೆ ಶಿವಕುಮಾರ್ ಹುಟ್ಟುಹಬ್ಬ | ಆದರೆ ಆಚರಣೆ ಇಲ್ಲ

      ಧಾರವಾಡ, ಮೇ 14: ನಾಳೆ (ಮೇ 15) ರಂದು ಸಚಿವ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವಿದೆ, ಆದರೆ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

      ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

      ರಾಜ್ಯದಾದ್ಯಂತ ಬರ ಇರುವ ಕಾರಣ ತಮ್ಮ ಅಭಿಮಾನಿಗಳು ಯಾರೂ ತಮ್ಮ ಹುಟ್ಟುಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಮಾಡಬಾರದು ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

      ಡಿ.ಕೆ.ಶಿವಕುಮಾರ್ ಅವರು ಪ್ರಸ್ತುತ ಉಪಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದು, ಯಾರೂ ಸಹ ಹಾರ, ಸಿಹಿ ಹಿಡಿದು ಹುಬ್ಬಳ್ಳಿಗೆ ಬಾರದಂತೆ ಅಭಿಮಾನಿಗಳಿಗೆ ಹೇಳಿದ್ದಾರೆ. ತಮ್ಮ ಕಟೌಟ್ ಸಹ ಯಾರೂ ಹಾಕಬೇಡಿರೆಂದು ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.

      Karnataka facing drought, do not celebrate my birthday : DK Shivakumar

      ನಾಳೆ ಬೆಳಿಗ್ಗೆ ತಮ್ಮ ಹುಟ್ಟುಹಬ್ಬದ ನಿಮಿತ್ತ ಲಕ್ಷ್ಮೇಸ್ವರ ಸಮೀಪದ ಮುಕ್ತಿ ದೇವಾಲಯಕ್ಕೆ ಭೇಟಿ ನೀಡಿ ನಂತರ ಎಂದಿನಂತೆ ಚುನಾವಣಾ ಪ್ರಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರು ತೊಡಗಿಕೊಳ್ಳಲಿದ್ದಾರೆ. ಆ ಮೂಲಕ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.

      ರಾಜಕೀಯ ನಿಪುಣ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದಾದ್ಯಂತ ಅಭಿಮಾನಿಗಳಿದ್ದು, ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದರು, ಆದರೆ ಈ ಬಾರಿ ಬರ ಇರುವ ಕಾರಣ ಹುಟ್ಟುಹಬ್ಬ ಆಚರಣೆ ಬೇಡವೆಂದು ಡಿ.ಕೆ.ಶಿ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+