ಮಾರ್ಚ್‌ 1ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಘಟಕ ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್‌ 1ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದೆ.

ಧಾರವಾಡ, ಫೆಬ್ರವರಿ 24; ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರ ಬೆಂಬಲಿಸುವ ಜೊತೆಗೆ ಯಶಸ್ವಿಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಎಸ್. ಎಫ್. ಸಿದ್ದನಗೌಡರ ಕರೆ ನೀಡಿದರು.

ಶುಕ್ರವಾರ ಧಾರವಾಡದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿದರು. "ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಿ ಕರೆ ನೀಡಿದ್ದಾರೆ. 8,000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ" ಎಂದರು.

Karnataka Government Employees Strike Fom March 1st

"ರಾಜ್ಯದ 2023-24 ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ದಿನಾಂಕ 01-07-2022 ರಿಂದ ಜಾರಿಗೊಳಿಸಬೇಕಾಗಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ" ಎಂದು ಹೇಳಿದರು.

"ಆಯೋಗದ ಮುಂದೆ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಅಧಿಕಾರಿ/ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಅರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ಬಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಲು ಮುಷ್ಕರ ನಡೆಸುತ್ತಿದೆ" ಎಂದು ಎಸ್. ಎಫ್. ಸಿದ್ದನಗೌಡರ ವಿವರಣೆ ನೀಡಿದರು.

Karnataka Government Employees Strike Fom March 1st

ಸಂಘದ ಪ್ರಮುಖ ಬೇಡಿಕೆಗಳು

* ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 01-07-2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ 40 ಪಿಟ್‍ಮೆಂಟ್ ಸೌಲಭ್ಯವನ್ನು ದಿನಾಂಕ 01-07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.

* ರಾಜ್ಯದ ಎನ್. ಪಿ. ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್. ಪಿ. ಎಸ್. ನೌಕರರನ್ನು ಓ. ಪಿ. ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

ಮುಷ್ಕರಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಭೋದಕೇತರ ನೌಕರರ ಸಂಘ, ಕೃಷಿ ವಿಶ್ವವಿದ್ಯಾಲಯ ಧಾರವಾಡದ ಭೋದಕೇತರ ನೌಕರರ ಸಂಘ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ನೌಕರರ ಸಂಘ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೌಕರರ ಸಂಘ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ ನೌಕರರ ಸಂಘ, ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘಗಳು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+