Get Updates
Get notified of breaking news, exclusive insights, and must-see stories!

Dharwad: ಗ್ಯಾರೆಂಟಿ ಫಲಾನುಭವಿಗಳ ಬೃಹತ್ ಜಾಗೃತಿ ಸಮಾವೇಶ, ದಿನಾಂಕ, ಪೂರ್ಣ ವಿವರ

ಧಾರವಾಡ, ಫೆಬ್ರವರಿ 04: ರಾಜ್ಯ ಸರ್ಕಾರ ಐದು ಪ್ರಮುಖ ಯೋಜನೆಗಳು ರಾಷ್ಟ್ರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳೆಂದು ಪ್ರಸಿದ್ದಿಯಾಗಿದ್ದು, ಪ್ರತಿ ಕುಟುಂಬವು ಪಂಚ ಯೋಜನೆಗಳ ಫಲಾನುಭವಿಗಳಾಗಬೇಕು. ಸರ್ಕಾರದ ಪ್ರಮುಖ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಯೋಜನಾ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಭಾನುವಾರ ಬೆಳಗ್ಗೆ ಧಾರವಾಡ ಸಕ್ರ್ಯೂಟ್ ಹೌಸ್‌ ನಲ್ಲಿ ಯೋಜನಾ ಫಲಾನುಭವಿಗಳ ಸಮಾವೇಶದ ಪೂರ್ವಭಾವಿ ಸಿದ್ಧತೆಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು.

Karnataka Govt Five Guarantees Scheme Awareness Conference on Feb 5th: Santosh Lad said

ಫೆಬ್ರುವರಿ 5 ರಂದು ಸಂಜೆ 5 ಗಂಟೆಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗಿದೆ. ಧಾರವಾಡ ಪಶ್ಚಿಮ, ಧಾರವಾಡ ಗ್ರಾಮೀಣ ಮತಕ್ಷೇತ್ರದ ಹಾಗೂ ಅಳ್ನಾವರ ತಾಲೂಕಿನ ಫಲಾನುಭವಿಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

21 ಸಾವಿರ ಫಲಾನುಭವಿ ಭಾಗಿ

ಫಲಾನುಭವಿಗಳ ಧಾರವಾಡ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಂಟು ಸಾವಿರ, ಆಹಾರ ಮತ್ತು ನಾಗರಿಕ ಇಲಾಖೆಯ 10 ಸಾವಿರ, ಹೆಸ್ಕಾಂ ಪರವಾಗಿ 1,500, ಸಹಕಾರಿ ಮತ್ತು ಕೆಎಂಎಫ್ ಇಲಾಖೆಯ ಒಂದು ಸಾವಿರ ಮತ್ತು ಕಾರ್ಮಿಕ ಇಲಾಖೆಯ ಒಂದು ಸಾವಿರ ಜನ ಸೇರಿ ವಿವಿಧ ಇಲಾಖೆಗಳ ಅಂದಾಜು 21 ಸಾವಿರ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯ 82 ಸ್ಥಳಗಳ ಫಲಾನುಭವಿಗಳ

ಗ್ರಾಮೀಣ ಭಾಗದ 141 ವಿವಿಧ ಗ್ರಾಮಗಳ ಸ್ಥಳಗಳಿಂದ ಮತ್ತು ಧಾರವಾಡ ನಗರದ 82 ಸ್ಥಳಗಳಿಂದ ಆಗಮಿಸುತ್ತಿದ್ದಾರೆ. ಅವರ ಬರುವಿಕೆಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸುಮಾರು 223 ಬಸ್‌ಗಳನ್ನು ನಿಯೋಜಿಸಲಾಗಿದೆ. ಅಂದಾಜು 303 ಟ್ರಿಪ್‌ಗಳಲ್ಲಿ ಫಲಾನುಭವಿಗಳು ಸಮಾವೇಶಕ್ಕೆ ಆಗಮಿಸಲಿದ್ದಾರೆ.

Karnataka Govt Five Guarantees Scheme Awareness Conference on Feb 5th: Santosh Lad said

ಕೆಸಿಡಿ ಮೈದಾನದಲ್ಲಿ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಹಾಕಲಾಗುತ್ತಿದೆ. ಎಲ್ಲರಿಗೂ ಕುಳಿತುಕೊಳ್ಳಲು ಆಸನ, ಕುಡಿಯುವ ನೀರು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಬಸ್, ವಾಹನಗಳ ನಿಲುಗಡೆಗೆ ಕೆಸಿಡಿ ಮೈದಾನ ಸಮೀಪದ ವಿವಿಧ ಸ್ಥಳಗಳಲ್ಲಿ ಅವಕಾಶ ಮಾಡಲಾಗಿದೆ. ಸುಗಮ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಸರ್ಕಾರಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು, ಸಾರ್ವಜನಿಕರಲ್ಲಿ ಯೋಜನೆಗಳ ಕುರಿತು ಅರಿವು ಮೂಡಿಸುವುದು ಮುಖ್ಯ. ಸರ್ಕಾರ ನಿರ್ದೇಶನದಂತೆ ಧಾರವಾಡ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಯೋಜನಾ ಫಲಾನುಭವಿಗಳ ಸಮಾವೇಶ ಸಂಘಟಿಸಲಾಗುತ್ತಿದೆ.

ಅಧಿಕಾರಿಗಳು ಮತ್ತು ಕ್ಷೇತ್ರ ಮಟ್ಟದ ಸಿಬ್ಬಂದಿಗಳು ಸಕ್ರಿಯವಾಗಿ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು. ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಲು ಇಂತಹ ಜಾಗೃತಿ ಕಾರ್ಯಕ್ರಮಗಳು ಸಹಾಯಕವಾಗುತ್ತವೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸ್ಥಳೀಯ ಇಲಾಖಾ ಅಧಿಕಾರಿಗಳು, ಮುಖಂಡರು ಮತ್ತಿರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+