ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ. ಚೆನ್ನವೀರ ಕಣವಿ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ

|
Google Oneindia Kannada News

ಧಾರವಾಡ, ಜನವರಿ 19; ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಚಿಕಿತ್ಸಾ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ. ಧಾರವಾಡದ ಎಸ್‌. ಡಿ. ಎಮ್. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ಸೋಂಕು ತಗುಲಿದ್ದ ಡಾ. ಚೆನ್ನವೀರ ಕಣವಿ ಜನವರಿ 14 ರಂದು ಎಸ್.ಡಿ.ಎಮ್.ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ಅವರ ಆರೋಗ್ಯದಲ್ಲಿ ಆರೋಗ್ಯದಲ್ಲಿ ತುಸು ಮಟ್ಟಿನ ಏರುಪೇರು ಆಗಿದೆ, ಚಿಕಿತ್ಸೆ ಮುಂದುವರಿದಿದೆ.

ಡಾ. ಚೆನ್ನವೀರ ಕಣವಿ ಆರೋಗ್ಯ ಸ್ಥಿರ, ಚಿಕಿತ್ಸೆ ಮುಂದುವರಿಕೆಡಾ. ಚೆನ್ನವೀರ ಕಣವಿ ಆರೋಗ್ಯ ಸ್ಥಿರ, ಚಿಕಿತ್ಸೆ ಮುಂದುವರಿಕೆ

ಡಾ. ಚೆನ್ನವೀರ ಕಣವಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಧಾರವಾಡ ಜಿಲ್ಲಾಡಳಿತ ಬುಧವಾರ ಈ ಕುರಿತು ಪ್ರತಿಕ್ರಿಯೆ ನೀಡಿದೆ. ಅವರ ಎಲ್ಲಾ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದೆ.

ಧಾರವಾಡ; ಕೋವಿಡ್ ಸೋಂಕಿತೆ ಸಾವು, ವರದಿ ಕೇಳಿದ ಡಿಸಿ ಧಾರವಾಡ; ಕೋವಿಡ್ ಸೋಂಕಿತೆ ಸಾವು, ವರದಿ ಕೇಳಿದ ಡಿಸಿ

Karnataka Govt To Pay Chennaveera Kanavi Treatment Charges

ಧಾರವಾಡ ಜಿಲ್ಲಾಡಳಿತ ಚಿಕಿತ್ಸೆಗೆ ಐಸಿಯು ಬೆಡ್ ಮೀಸಲಿರಿಸಿ, ಉತ್ತಮ ಚಿಕಿತ್ಸೆಗೆ ಕ್ರಮ ಕೈಗೊಂಡಿದೆ ಮತ್ತು ಅವರು ಗುಣಮುಖರಾಗಿ ಮನೆಗೆ ಬರುವವರೆಗೆ ಎಲ್ಲಾ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ. ಈ ಕುರಿತು ಜನವರಿ 15 ರಂದು ಎಸ್. ಡಿ. ಎಮ್. ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಡಾ. ಕಣವಿ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಸಾವಿನ ರಸ್ತೆ ಕುಖ್ಯಾತಿಯ ಹುಬ್ಬಳ್ಳಿ-ಧಾರವಾಡ ಬೈಪಸ್ ಅಗಲೀಕರಣ ಸಾವಿನ ರಸ್ತೆ ಕುಖ್ಯಾತಿಯ ಹುಬ್ಬಳ್ಳಿ-ಧಾರವಾಡ ಬೈಪಸ್ ಅಗಲೀಕರಣ

ಡಾ. ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಅವರ ಆರೋಗ್ಯದ ಕುರಿತು ಕಾಳಜಿ ವಹಿಸಿದ್ದು, ದಿನನಿತ್ಯ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಅಧೀಕ್ಷಕರೊಂದಿಗೆ, ಡಾ.ಕಣವಿ ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು ಜಾಗೃತಿ ವಹಿಸಲಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಹೇಳಿದೆ.

ಆರೋಗ್ಯದಲ್ಲಿ ತುಸು ಏರುಪೇರು; ಡಾ.ಚನ್ನವೀರ ಕಣವಿ ಅವರ ಆರೋಗ್ಯದಲ್ಲಿ ತುಸು ಮಟ್ಟಿನ ಏರುಪೇರು ಉಂಟಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾಡಳಿತ ಹೇಳಿದೆ. ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮಂಗಳವಾರ 8 ಲೀ. ಗೆ ಹೆಚ್ಚಿಸಲಾಗಿದೆ ಎಂದು ಎಸ್. ಡಿ. ಎಂ. ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿತ್ತು.

ಬುಧವಾರ ಬೆಳಗ್ಗೆ ಹೆಲ್ತ್ ಬುಲೆಟಿನ್ ಪ್ರಕಾರ ಡಾ.ಚನ್ನವೀರ ಕಣವಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ. 93 ವರ್ಷದ ಡಾ. ಚೆನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಜನವರಿ 14ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕಿತ್ಸಾ ವೆಚ್ಚ ಭರಿಸಲು ಆಗ್ರಹ; ಡಾ.ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಆಗ್ರಹಿಸಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಈ ಕುರಿತು ಅವರು ಪತ್ರ ಬರೆದಿದ್ದರು. ಡಾ.ಚನ್ನವೀರ ಕಣವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಧಾರವಾಡದ ಎಸ್‌. ಡಿ. ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೌರವದ ಸಂಕೇತವಾಗಿ ಅವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ವಹಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

Recommended Video

ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ | Oneindia Kannada

ಮುಖ್ಯಮಂತ್ರಿಗಳ ಟ್ವೀಟ್; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, 'ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ" ಎಂದು ಹೇಳಿದ್ದರು.

English summary
The Karnataka government to pay Kannada poet Chennaveera Kanavi treatment charges. Chennaveera Kanavi admitted to the hospital on January 14 after tested positive for Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X