ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ವಿಶ್ವವಿದ್ಯಾಲಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಕೆಂಡಾಮಂಡಲ

|
Google Oneindia Kannada News

ಧಾರವಾಡ, ಜೂನ 29: ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಲಕ್ಷಾಂತರ ಪದವಿ ವಿದ್ಯಾರ್ಥಿಗಳ ಕೆಂಗಣ್ಣಿಗೆ ಕರ್ನಾಟಕ ವಿಶ್ವವಿದ್ಯಾಲಯದ ನಿರ್ಧಾರ ಗುರಿಯಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಬೇಕಿದ್ದ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಕೊರೊನಾ, ಇನ್ನಿತರ ಕಾರಣಾಂತರಗಳಿಂದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿ ಮುಂದೂಡಲಾಯಿತು. ಆದರೆ, ಈಗ ಸ್ನಾತಕ-ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಬಹು ಆಯ್ಕೆ ಪ್ರಶ್ನೆಗಳ ಮುಖಾಂತರ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

''ಏಪ್ರೀಲ್-ಮೇ ತಿಂಗಳಲ್ಲಿ ಸ್ನಾತಕ-ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಯಬೇಕಿತ್ತು. ಸಾರಿಗೆ ಮುಷ್ಕರ, ಕೊರೊನಾ ಎರಡೇಯ ಅಲೆಯಿಂದಾಗಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿ ಮುಂದೂಡಲಾಗಿತು. ಈಗ ಎರಡು ಸೆಮಿಸ್ಟರ್ ಪರೀಕ್ಷೆಗಳನ್ನು ಏಕಕಾಲಕ್ಕೆ ನಡೆಸಲಾಗುವುದು ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಈ ರೀತಿ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿದಂತಾಗುತ್ತದೆ. ಸರಕಾರ 1-3-5 ಸೆಮಿಸ್ಟರ್ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆ ರದ್ದುಪಡಿಸಬೇಕು,'' ಎಂದು ಕವಿವಿ ಧಾರವಾಡದ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ ವೀರೇಶ ಧೂಪದ ಆಗ್ರಹಿಸಿದ್ದಾರೆ.

ಸ್ನಾತಕ-ಸ್ನಾತಕೋತ್ತರ ವಿದ್ಯಾರ್ಥಿಗಳು ಎಪ್ರಿಲ್‌ನಿಂದ ಇಲ್ಲಿಯವರೆಗೆ ಅಭ್ಯಾಸ ನಡೆಸದೇ ಇರುವುದರಿಂದ ವಿದ್ಯಾರ್ಥಿಗಳು ಓದಿರುವ ಪಠ್ಯಕ್ರಮ, ಅಭ್ಯಾಸ ಮರೆತು ಹೋಗಿದೆ. ಈಗ ಮತ್ತೆ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಪ್ರೊ ಕೆ.ಬಿ ಗುಡಸಿ ಅವರು ಸುದ್ದಿಗಾರರೊಂದಿಗೆ ಹೇಳಿಕೆ ನೀಡಿ ''ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದು ಸರಿಯಾದ ಕ್ರಮವಲ್ಲ. ಈಗಾಗಲೇ ಎರಡು, ನಾಲ್ಕು, ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ನಡೆಸಲಾಗುತ್ತಿದೆ. ಮೊದಲು ಎರಡು, ನಾಲ್ಕು, ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಿ, ಆ ನಂತರ ಎಸ್.ಎಸ್.ಎಲ್.ಸಿ ಮಾದರಿಯಲ್ಲಿ ಸ್ನಾತಕ-ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಬಹು ಆಯ್ಕೆ ಪ್ರಶ್ನೆಗಳ ಮುಖಾಂತರ ನಡೆಸಲು ತೀರ್ಮಾನಿಸಲಾಗಿದೆ,'' ಎಂದಿದ್ದಾರೆ.

Karnataka University students outrage against conducting Exam

ಹಾಗಿದ್ದರೆ ಹೋದ ವರ್ಷ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಪ್ರಥಮ ವರ್ಷ, ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿದ್ದು ಏಕೆ? ಆವಾಗಲೂ ಈ ನಿಯಮ ಅನ್ವಯಿಸಲಿಲ್ಲವೇ? ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಇಲಾಖೆಯ ಆತುರದ ನಿರ್ಧಾರದಿಂದ ವಿದ್ಯಾರ್ಥಿಗಳ ಮೇಲೆ ಪರೀಕ್ಷೆ ಬರೆಯಲು ಒತ್ತಡ ಹೇರಲಾಗುತ್ತಿದೆ. ಸರಕಾರ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರವಿದೆ. ಮಹಾರಾಷ್ಟ್ರ ಮಾದರಿಯಲ್ಲಿ ಪರೀಕ್ಷೆಗಳನ್ನು ರದ್ದುಪಡಿಸಬೇಕು.

ಕೇಂದ್ರ ಸರ್ಕಾರ ನೀತಿ ನಿಯಮಕ್ಕೆ ತಲೆಕೆಡಿಸಿಕೊಳ್ಳದೇ ಪದವಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಬೇಕು. ಹಲವು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಹೋರಾಟ ನಡೆಸಿ ಪ್ರತಿಭಟಿಸಿದರು ಕೂಡ ಸರಕಾರ ಮಾತ್ರ ಕಣ್ಣು ತೆರೆದಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ರಾಜ್ಯ ಸರಕಾರ ಚೆಲ್ಲಾಟವಾಡುತ್ತಿದೆ. ಮೊದಲ ಹಂತದಲ್ಲಿ 2-4-6 ಸೆಮಿಸ್ಟರ್ ಪರೀಕ್ಷೆ ನಡೆಸಿ, ಎರಡೇಯ ಹಂತದಲ್ಲಿ 1-3-5 ಸೇಮಿಸ್ಟರ್ ಪರೀಕ್ಷೆಯನ್ನು ನಡೆಸಲಿದೆ. ಏಕಕಾಲಕ್ಕೆ ಎರಡು ಪರೀಕ್ಷೆಯನ್ನು ಒಂದೇ ತಿಂಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳನ್ನು ಬರೆಯಬೇಕು.

Recommended Video

ಕೇನ್ ವಿಲಿಯಂ ಸನ್ ಅವರು ಭಾರತದ ಬಗ್ಗೆ ಫೈನಲ್ ನಂತರ ಹೇಳಿದ್ದೇನು | Oneindia Kannada

ಈ ಥರ ಏಕಕಾಲಕ್ಕೆ ಪರೀಕ್ಷೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಹೇಗಾಗಿಬಾರದು. ಉನ್ನತ್ತ ಶಿಕ್ಷಣ ಇಲಾಖೆ, ಕರ್ನಾಟಕ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯ ಸರಕಾರ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಒತ್ತಡ ಹೇರುತ್ತಿದೆ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಪದವಿ ಪರೀಕ್ಷೆ ಮುಗಿದಿದೆ ಎಂಬ ಕಾರಣಕೋಸ್ಕರ ಈ ತರ ನಿಯಮವನ್ನು ರಾಜ್ಯ ಸರಕಾರ ಕರ್ನಾಟಕ ವಿಶ್ವವಿದ್ಯಾಲಯ ಮೇಲೆ ಒತ್ತಡ ಹೇರುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಏನೇ ಇರಲಿ ರಾಜ್ಯ ಸರಕಾರ 1-3-5 ಸೆಮಿಸ್ಟರ್ ಪರೀಕ್ಷೆ ರದ್ದುಪಡಿಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಲು ಮುಂದಾಗಬೇಕು ಎಂಬುದು ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳ ಆಶಯವಾಗಿದೆ.

English summary
Karnataka University students Condemn varsity decision to conduct Exam amid of covid 19 pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X