ಚುನಾವಣೆ: ಕೋಡಿಮಠಶ್ರೀ ಭವಿಷ್ಯದಲ್ಲಿ ಬದಲಾವಣೆ
ಧಾರವಾಡ, ಏ.5: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋಡಿಮಠ ಶ್ರೀ ಮತ್ತೊಂದು ಭವಿಷ್ಯ ಹೇಳಿದ್ದಾರೆ. ಈ ಹಿಂದೆ ಯಾವುದೇ ಪಕ್ಷದ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದಿಲ್ಲವಾದರೂ ಮೋದಿ ನೇತೃತ್ವದ ಬಿಜೆಪಿ ಪಕ್ಷವು ಇತರೆ ಪಕ್ಷಗಳ ನೆರವಿನೊಂದಿಗೆ ಕೇಂದ್ರದಲ್ಲಿ ನೂತನ ಸರಕಾರ ಸ್ಥಾಪಿಸಲಿದೆ ಎಂದು ಹೇಳಿದ್ದಕ್ಕೆ ಈ ಬಾರಿ ತುಸು ಮಾರ್ಪಾಡು ತಂದಿದ್ದಾರೆ.
ಮಾಧ್ಯಮ ಸಂಸ್ಥೆಗಳು ಆಗಾಗ ಚುನಾವಣಾ ಸಮೀಕ್ಷೆಗಳನ್ನು ಪ್ರಕಟಿಸುವಂತೆ ಹಾಸನದ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರೂ ಸಹ ಕಾಲಕಾಲಕ್ಕೆ ಚುನಾವಣಾ ಭವಿಷ್ಯ ನುಡಿಯುತ್ತಿದ್ದಾರೆ. (ಕೋಡಿಮಠ ಶ್ರೀ ಈ ಹಿಂದೆ ನುಡಿದಿರುವ ಭವಿಷ್ಯಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ)
ಈ ಬಾರಿ ಅವರು 'ನಡೆಯುವ ಹಾದಿ ಮೂರು ಕವಲಾಯಿತು. ಮುತ್ತಿನ ಗಿಣಿ ಮುಪ್ಪಾಗಿ ಮುತ್ತಾಯಿತೋ, ಮುದುಕನ ಕಾಲ ಮೇಲೆ ಕಾಗಿ ಕುಳಿತಿತೋ' ಎಂದು ನಿಗೂಢವಾಗಿ/ಮಾರ್ಮಿಕವಾಗಿ ಭವಿಷ್ಯ ಹೇಳಿದ್ದಾರೆ. ಇದರರ್ಥ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲವಂತೆ.

ದೇಶದಲ್ಲಿ ದೊಡ್ಡ ಘಟನೆಯೊಂದು ಸಂಭವಿಸಲಿದ್ದು ಶ್ರೀಮಂತರು ಮತ್ತು ಮಧ್ಯ ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಲಿದ್ದಾರೆ. ಅಲ್ಲದೇ ಬೆಂಕಿಯ ಅವಘಡಗಳೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ನಡೆಯಲಿವೆ. ಈ ವರ್ಷ ಮಳೆ ಬೆಳೆ ಚೆನ್ನಾಗಿ ಆಗಲಿದ್ದು, ರೈತರಿಗೆ ಸುಖ ಸಮೃದ್ಧಿ ಪ್ರಾಪ್ತಿಯಾಗಲಿದೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]












Click it and Unblock the Notifications