• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್ ನಲ್ಲಿ ಸಂಪುಟ ವಿಸ್ತರಣೆ, ಪರಮೇಶ್ವರ್ ಸೇರ್ಪಡೆ

|
Google Oneindia Kannada News

ಹುಬ್ಬಳ್ಳಿ, ಮೇ 22 : ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಜೂನ್ ನಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಗುರುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಸರ್ಕಾರ ಸಹ ಒಂದು ವರ್ಷವನ್ನು ಪೂರ್ಣಗೊಳಿಸಿದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ಸಂಪುಟದಲ್ಲಿ ಹಲವಾರು ಬದಲಾವಣೆಗಳಾಗಲಿವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಕೂಗು ಬಹಳದಿನಗಳಿಂದ ಕೇಳಿಬರುತ್ತಿದೆ. ಪರಮೇಶ್ವರ್ ಸಂಪುಟ ಸೇರುವುದು ಖಚಿತವಾಗಿದೆ. ಆದರೆ, ಸಚಿವರಾಗುತ್ತಾರೋ? ಉಪ ಮುಖ್ಯಮಂತ್ರಿಯಾಗುತ್ತಾರೋ? ಎಂಬುದನ್ನು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿಸಿದರು.

ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಪಕ್ಷ ನಿಷ್ಠರಿಗೆ ಅವಕಾಶ ಮಾಡಿಕೊಡಲಾಗುವುದು. ಜೂನ್ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದ್ದು, ಆಗ ಹಲವಾರು ಬದಲಾವಣೆಗಳಾಗಲಿವೆ ಎಂದರು. [ಪರಮೇಶ್ವರ್ ಡಿಸಿಎಂ ಮಾಡಿ, ಕಾರ್ಯಕರ್ತರ ಗದ್ದಲ]

ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಿ : ಮೈಸೂರು ಕ್ಷೇತ್ರದ ಮಾಜಿ ಸಂಸದ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವಿಶ್ವನಾಥ್ ಬೆಂಬಲಿಗರು ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ ಅವರ ನಿವಾಸದ ಮುಂದೆ ಆಗಮಿಸಿದ ವಿಶ್ವನಾಥ್ ಬೆಂಬಲಿಗರು ಚುನಾವಣೆಯಲ್ಲಿ ಸೋತ ವಿಶ್ವನಾಥ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

English summary
Agriculture minister Krishna Byre Gowda said, KPCC president Dr G. Parameshwar will join CM Siddaramaiah cabinet soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X