ಕಲಘಟಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ಕಚೇರಿಗಳಿಗೆ ಕಂದಾಯ ಸಚಿವ ದಿಢೀರ್ ಭೇಟಿ
ಹುಬ್ಬಳ್ಳಿ, ಸೆಪ್ಟೆಂಬರ್, 14: ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಗುರುವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಧೀಡರ್ ಭೇಟಿ ನೀಡಿ ಸಿಬ್ಬಂದಿ ಕೆಲಸವನ್ನು ಪರಿಶೀಲನೆ ನಡೆಸಿದರು.
ದುಮ್ಮವಾಡ ನಾಡಕಚೇರಿಗೆ ಭೇಡಿ ನೀಡಿದ ಕಂದಾಯ ಸಚಿವರು ಅಲ್ಲಿನ ಅಧಿಕಾರಿ, ಸಿಬ್ಬಂದಿಗಳ ಕಾರ್ಯ ಪರಿಶೀಲನೆ ನಡೆಸಿದರು. ಅಲ್ಲದೆ ವಿವಿಧ ಕಡತ, ದಾಖಲಾತಿ, ಕಂಪ್ಯೂಟರ್ ಎಂಟ್ರಿ ಪರಿಶೀಲಿಸಿ ಮಾಹಿತಿ ಪಡೆದರು. ನಂತರ ಹಿರೇಹೊನಳ್ಳಿ ಹಾಗೂ ಇತರ ಗ್ರಾಮ ಪಂಚಾಯತಿ ಕಾರ್ಯಾಲಯಗಳಿಗೂ ಸಹ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿದರು.

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎನ್ನುವುದು ಸರ್ಕಾರದ ಮಹಾ ಸಂಕಲ್ಪದ ಹಿನ್ನೆಲೆಯಲ್ಲಿ ಈ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ಮಾಡಲಾಗುತಿದೆ. ಜನರು ಸಣ್ಣ ಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವಂತೆ ಆಗಬಾರದು. ಜನರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸರ್ಕಾರವೇ ಮನೆ ಬಾಗಿಲಿಗೆ ಬರಲಿದೆ ಎಂದರು.
ಕಂದಾಯ ಇಲಾಖೆಯ ಪಹಣಿ ಸಮಸ್ಯೆ, ಮಾಶಾಸನ ಸಮಸ್ಯೆ, ಜಾತಿ, ಆದಾಯ ಪ್ರಮಾಣ ಪತ್ರಗಳು ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನು ನೀಡುವಲ್ಲಿ ವಿಳಂಬದಂತಹ ಹತ್ತು ಹಲವು ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಸ್ಥಳದಲ್ಲಿಯೇ ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗಿದೆ.
ಈ ವೇಳೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ತಹಶೀಲ್ದಾರರು, ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಇನ್ನು ಬರಗಾಲ ವಿಚಾರದಲ್ಲಿ ನಮಗೆ ಯಾವ ಕನಫ್ಯೂಸನ್ ಇಲ್ಲ. ರೈತರನ್ನು ಕನಫ್ಯೂಸ್ ಮಾಡಿದ್ದು ಕೇಂದ್ರ ಸರ್ಕಾರ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ನಿನ್ನೆ ಬರಗಾಲ ಘೋಷಣೆ ಮಾಡಿದ್ದೇವೆ. 195 ತಾಲೂಕು ಬರಗಾಲ ಎಂದು ಘೋಷಣೆ ಮಾಡಿದ್ದೇವೆ. ಇದಕ್ಕೆ ಒಂದೂವರೆ ತಿಂಗಳಿಂದ ಕೆಲಸ ಮಾಡಿ ಬರಗಾಲ ಘೋಷಣೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಮಾನದಂಡಗಳಿಗೆ ಕೆಲ ತಾಲೂಕುಗಳು ಬರುತ್ತಿಲ್ಲ ಎಂದರು.
ನಮಗೆ ಸರಿ ಮಾಡೋಕೆ ಯಾವ ಪ್ರತಿಷ್ಠೆ ಇಲ್ಲ. ಕೇಂದ್ರ ಸರ್ಕಾರದ ನಾರ್ಮ್ಸ್ ಪ್ರಕಾರ ನಾವು ಮಾಡಿದ್ದೇವೆ. ಇದೇ ಅಂತಿಮ ಅಲ್ಲ, ತಿಂಗಳ ಕೊನೆಯಲ್ಲಿ ಮತ್ತೊಮ್ಮೆ ಸಮೀಕ್ಷೆ ಮಾಡುತ್ತೇವೆ ಎಂದು ಅವರು ಹೇಳಿದರು.
ಇನ್ನು ಜುಲೈ 1ನೇ ವಾರದಲ್ಲಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಬರಗಾಲ ಘೋಷಣೆ ಮಾಡೋದ ಕಷ್ಟ. ಅಂತಹ ಸವಾಲಿನ ಮಧ್ಯೆಯೂ ನಾವು ಘೋಷಣೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬದಲಾವಣೆ ಮಾಡಬೇಕು. ಕೇಂದ್ರ ಪ್ರತಿಷ್ಠೆ ಬಿಡಬೇಕು ಎಂದು ಬೈರೇಗೌಡ ಆಗ್ರಹಿಸಿದರು.
ಮುಖ್ಯಮಂತ್ರಿಗಳ ಪತ್ರಕ್ಕೆ ಇನ್ನು ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ. ಪ್ರಧಾನಿಗಳು ಕರ್ನಾಟಕದ ಸಮಸ್ಯೆ ಕುರಿತು ಚರ್ಚೆ ಮಾಡುವುದಕ್ಕೆ ಅವಕಾಶ ಕೊಡಬೇಕು ಎಂದ ಅವರು, ಈ ತಿಂಗಳ ಕೊನೆಯಲ್ಲಿ ಬರಗಾಲದ ಮಾನದಂಡ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications