ಶೀಘ್ರದಲ್ಲೇ ಕೆಎಸ್ಆರ್‌ಟಿಸಿ ನೌಕರರ ವರ್ಗಾವಣೆ

ಹುಬ್ಬಳ್ಳಿ, ಅಕ್ಟೋಬರ್ 15 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ನಿಗಮಗಳ ನೌಕರರನ್ನು ಮತ್ತೊಂದು ನಿಗಮಕ್ಕೆ ವರ್ಗಾವಣೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬುಧವಾರ ಹುಬ್ಬಳ್ಳಿಯಲ್ಲಿ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, 'ಈ ಮೊದಲು ಒಂದು ನಿಗಮದಿಂದ ಮತ್ತೊಂದು ನಿಗಮಕ್ಕೆ ಸಾರಿಗೆ ಸಂಸ್ಥೆಯ ನೌಕರರನ್ನು ವರ್ಗಾವಣೆ ಮಾಡುತ್ತಿರಲಿಲ್ಲ. ಈಗ ವರ್ಗಾವಣೆ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ' ಎಂದು ಹೇಳಿದರು. [ksrtc ಯಿಂದ ದಸರಾ ಪ್ಯಾಕೇಜ್]

ramalinga reddy

'ಹಲವು ಜಿಲ್ಲೆಗಳಲ್ಲಿ ಚಾಲನಾ ತರಬೇತಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಮಳವಳ್ಳಿ, ಮಾಲೂರು, ಸಿಂಗನಾಯಕನಹಳ್ಳಿಯಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಮಂಗಳೂರು ಮತ್ತು ಹೊಳಲ್ಕೆರೆಯಲ್ಲಿ ಈ ರೀತಿ ಕಟ್ಟಡಗಳನ್ನು ಶೀಘ್ರದಲ್ಲೇ ಆರಂಭಿಸುವ ಉದ್ದೇಶವಿದೆ' ಎಂದು ಸಚಿವರು ತಿಳಿಸಿದರು. [ಕೆಎಸ್ಆರ್ ಟಿಸಿ ಬಯೋ ಬಸ್ ಉಪಯೋಗಗಳು]

ವರ್ಗಾವಣೆ ಉದ್ದೇಶ ಪೂರ್ವಕವಲ್ಲ : 'ಪ್ರಾಮಾಣಿಕ ಅಧಿಕಾರಿ ವಿನೂತ್ ಪ್ರಿಯಾ ಅವರ ವರ್ಗಾವಣೆ ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳಕ್ಕೆ ಪ್ರಾಮಾಣಿಕ ಅಧಿಕಾರಿ ಬೇಕು ಎಂಬ ಉದ್ದೇಶದಿಂದ ಅವರನ್ನು ವರ್ಗಾವಣೆ ಮಾಡಲಾಗಿತ್ತು' ಎಂದು ಅವರು ತಿಳಿಸಿದ್ದಾರೆ. [ಬಸವೇಶ್ವರ ಬಸ್ ನಿಲ್ದಾಣದಿಂದ ಮೈಸೂರಿಗೆ ಬಸ್ ಸೇವೆ]

'ವಿನೂತ್ ಪ್ರಿಯಾ ಅವರು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯಾದ ನಂತರ ಅಲ್ಲಿನ ಭ್ರಷ್ಟಾಚಾರಗಳನ್ನು ತಡೆಗಟ್ಟಿದ್ದರು. ಅವರ ವರ್ಗಾವಣೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ನಾನೇ ಸ್ವತಃ ಮನವರಿಕೆ ಮಾಡಿ ವರ್ಗಾವಣೆ ರದ್ದುಗೊಳಿಸಿದ್ದೇನೆ' ಎಂದು ಸಚಿವರು ಹೇಳಿದರು.

ಭ್ರಷ್ಟಾಚಾರ ನಡೆದಿಲ್ಲ : 'ಕೆಎಸ್ಆರ್‌ಟಿಸಿಗೆ ಸಂಸ್ಥೆಗೆ ಚಾಲಕರನ್ನು ಆಯ್ಕೆ ಮಾಡಿಕೊಳ್ಳುವಾಗ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಅಕ್ರಮ ನಡೆದಿರುವುದರ ಬಗ್ಗೆ ಮಾಹಿತಿ ಇದ್ದರೆ ಸಾಕ್ಷಿ ಸಮೇತ ತಮಗೆ ವಿವರ ನೀಡಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ' ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+