ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಂದಗೋಳ ಉಪ ಚುನಾವಣೆ : ಮತದಾರರ ಪಟ್ಟಿಗೆ ಹೆಸರು ಸೇರಿಸಿ

|
Google Oneindia Kannada News

ಧಾರವಾಡ, ಏಪ್ರಿಲ್ 16 : ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 19ರಂದು ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಮತದಾರರ ಪಟ್ಟಿಗೆ ಏಪ್ರಿಲ್ 19ರ ತನಕ ಹೆಸರು ಸೇರಿಸಬಹುದಾಗಿದೆ.

ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಅವರು ಈ ಕುರಿತು ಮಾಹಿತಿ ನೀಡಿದರು. ಕುಂದಗೋಳ ಶಾಸಕ, ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರು ಮಾರ್ಚ್ 22ರಂದು ವಿಧಿವಶರಾದ ಕಾರಣ ಉಪ ಚುನಾವಣೆ ಎದುರಾಗಿದೆ. ಏಪ್ರಿಲ್ 22ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

ಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ

ಧಾರವಾಡದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೀಪಾ ಚೋಳನ್ ಅವರು, 'ಕುಂದಗೋಳ ಕ್ಷೇತ್ರದಲ್ಲಿ 97,457 ಪುರುಷ, 91820 ಮಹಿಳಾ, 4 ಇತರ ಮತದಾರರು ಇದ್ದಾರೆ. ಒಟ್ಟು 1,89,281 ಮತದಾರರಿದ್ದಾರೆ. ಏಪ್ರಿಲ್ 19ರ ತನಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿದೆ' ಎಂದರು.

ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಪರಿಚಯಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಪರಿಚಯ

Kundagol by election : Enrol name for voters list

ಚುನಾವಣಾ ಅಧಿಸೂಚನೆ : ಕುಂದಗೋಳ ಉಪ ಚುನಾವಣೆಗೆ ಏಪ್ರಿಲ್ 22ರಂದು ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 29ರ ತನಕ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಏಪ್ರಿಲ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 2 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ. ಮೇ 19ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ 214 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

English summary
Dharwad district Kundagol assembly constituency by election will be held on May 19, 2019. People can enroll their name to voters list till April 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X