ಕುಂದಗೋಳ ಚುನಾವಣೆ : ಜಮೀರ್ ಸಂಧಾನ ಸಕ್ಸಸ್, 9 ನಾಮಪತ್ರ ವಾಪಸ್

Recommended Video

      ಕುಂದಗೋಳ ಉಪಚುನಾವಣೆ ಹಿನ್ನೆಲೆ 9 ನಾಯಕರನ್ನ ಸಮಾಧಾನ ಪಡಿಸುವಲ್ಲಿ ಯಶಸ್ವಿಯಾದ ಜಮೀರ್

      ಧಾರವಾಡ, ಮೇ 02 : ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಎದುರಾಗಿದ್ದ ಸಂಕಷ್ಟ ದೂರವಾಗಿದೆ. 9 ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಗುರುವಾರ ವಾಪಸ್ ಪಡೆದರು. ಮಮೇ 19ರಂದು ಮತದಾನ ನಡೆಯಲಿದೆ.

      ಕುಂದಗೋಳ ಉಪ ಚುನಾವಣೆಗೆ ನಾಮಪತ್ರವನ್ನು ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಸಚಿವ ಜಮೀರ್ ಅಹಮದ್ ಖಾನ್ ಮತ್ತು ಮಾಜಿ ಸಚಿವ ವಿನಯ್ ಕುಲಕರ್ಣಿ ಜೊತೆಗೆ ಆಗಮಿಸಿದ ನಾಯಕರು ನಾಮಪತ್ರಗಳನ್ನು ವಾಪಸ್ ಪಡೆದರು.

      ಕಾಂಗ್ರೆಸ್‌ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದ ಸುರೇಶ್ ಸವಣೂರ, ಎಚ್‌.ಎಲ್.ನದಾಫ್, ಚಂದ್ರಶೇಖರ್ ಜುಟ್ಟಲ್, ಜೆ.ಡಿ.ಘೋರ್ಪಡೆ, ವಿಶ್ವನಾಥ ಕುಬಿಹಾಳ ಮುಂತಾದ ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು.

      Kundgol by elections : 9 rebels withdraws the nominations

      ಗುರುವಾರ ಸಚಿವ ಜಮೀರ್ ಅಹಮದ್ ಖಾನ್ ಮತ್ತು ವಿನಯ್ ಕುಲಕರ್ಣಿ ಅವರು ಪಕ್ಷೇತರ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸಿದರು. ಎಲ್ಲಾ ಅಸಮಾಧಾನವನ್ನು ಬಗೆಹರಿಸುವ ಭರವಸೆ ನೀಡಿದರು. ಆದ್ದರಿಂದ, ಎಲ್ಲರೂ ನಾಮಪತ್ರ ವಾಪಸ್ ಪಡೆದರು.

      ಕುಂದಗೋಳ ತಹಶೀಲ್ದಾರ್ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್ ಅಹಮದ್ ಖಾನ್ ಅವರು, 'ಎಲ್ಲರೂ ಯಾವುದೇ ಷರತ್ತು ಇಲ್ಲದೇ ನಾಮಪತ್ರ ವಾಪಸ್ ಪಡೆದಿದ್ದಾರೆ. ಅವರೆಲ್ಲರೂ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು' ಎಂದು ಹೇಳಿದರು.

      'ಎಲ್ಲರೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಕೆಲವೊಂದು ಅಸಮಾಧಾನದ ಕಾರಣ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಷರತ್ತು ಹಾಕದೇ ಎಲ್ಲರೂ ನಾಮಪತ್ರ ವಾಪಸ್ ಪಡೆದಿದ್ದಾರೆ. ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ' ಎಂದರು.

      B.Z.Zameer Ahmed

      ರಾಜಕೀಯ ನಿವೃತ್ತಿ ಘೋಷಣೆ : ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿವಾನಂದ ಬೆಂತೂರ್ ಅವರು ನಾಮಪತ್ರ ವಾಪಸ್ ಪಡೆದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. 'ಕಾಂಗ್ರೆಸ್‌ನ ಕುಸುಮಾ ಶಿವಳ್ಳಿ ಸೇರಿದಂತೆ ಯಾರಿಗೂ ನಾನು ಬೆಂಬಲ ನೀಡುವುದಿಲ್ಲ. ನನಗೆ ಬೆಂಬಲ ನೀಡಿದವರು ಕೊನೆ ಕ್ಷಣದಲ್ಲಿ ನನಗೆ ಕೈ ಕೊಟ್ಟರು' ಎಂದರು.

      ಕುಂದಗೋಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಐ.ಚಿಕ್ಕನಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ಅವರು ಕಣದಲ್ಲಿದ್ದಾರೆ. ಮೇ 19ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+