ಕುಂದಗೋಳ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಧಾರವಾಡ, ಏಪ್ರಿಲ್ 26 : ಕರ್ನಾಟಕ ಬಿಜೆಪಿ ಇನ್ನೂ ಅಧಿಕೃತವಾಗಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೆ, ಚಿಕ್ಕನಗೌಡ್ರ ಅವರು ಇಂದು ನಾಮಪತ್ರವನ್ನು ಸಲ್ಲಿಸಿದರು.

ಶುಕ್ರವಾರ ನೂರಾರು ಕಾರ್ಯಕರ್ತರ ಜೊತೆ ಆಗಮಿಸಿದ ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಅವರು ಕುಂದಗೋಳ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು. ಏಪ್ರಿಲ್ 29ರಂದು ಮತ್ತೊಮ್ಮೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಗುರುವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕುಂದಗೋಳ ಕ್ಷೇತ್ರಕ್ಕೆ ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಅವರು ಅಭ್ಯರ್ಥಿ ಎಂದು ತೀರ್ಮಾನಿಸಲಾಗಿದೆ. ಕೇಂದ್ರ ಚುನಾವಣಾ ಸಮಿತಿಗೆ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಸಿ.ಎಸ್.ಶಿವಳ್ಳಿ ಅವರ ನಿಧನದಿಂದಾಗಿ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಮೇ 19ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನ.

ಒಂದೇ ಹೆಸರು ಶಿಫಾರಸು

ಒಂದೇ ಹೆಸರು ಶಿಫಾರಸು

ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಅವರು ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಕೇಂದ್ರ ಚುನಾವಣಾ ಸಮಿತಿಗೆ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದೆ. ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆಯಾಗುವುದು ಬಾಕಿ ಇದೆ. ಶುಕ್ರವಾರ ಒಳ್ಳೆಯ ದಿನ ಎಂದು ಇಂದು ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಯಡಿಯೂರಪ್ಪ ಅವರ ಸಂಬಂಧಿ

ಯಡಿಯೂರಪ್ಪ ಅವರ ಸಂಬಂಧಿ

ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಂಬಂಧಿ. 2018ರ ವಿಧಾನಸಭೆ ಚುನಾವಣೆಯಲ್ಲಿಯೂ ಅವರು ಕುಂದಗೋಳದಿಂದ ಕಣಕ್ಕಿಳಿದು ಸೋತಿದ್ದರು. ಈಗ ಉಪ ಚುನಾವಣೆಯಲ್ಲಿ ಪುನಃ ಅವರಿಗೆ ಟಿಕೆಟ್ ನೀಡಲಾಗಿದೆ.

634 ಮತಗಳ ಸೋಲು

634 ಮತಗಳ ಸೋಲು

2018ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಅವರು 634 ಮತಗಳ ಅಂತರದಿಂದ ಸಿ.ಎಸ್.ಶಿವಳ್ಳಿ ಅವರ ವಿರುದ್ಧ ಸೋಲು ಕಂಡಿದ್ದರು. ಈ ಬಾರಿ ಅವರು ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಸಿ.ಎಸ್.ಶಿವಳ್ಳಿ ಜಯ

ಸಿ.ಎಸ್.ಶಿವಳ್ಳಿ ಜಯ

2018ರ ಚುನಾವಣೆಯಲ್ಲಿ ಕುಂದಗೋಳ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಿ.ಎಸ್.ಶಿವಳ್ಳಿ ಅವರು 64,871 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಅವರು 64,237 ಮತಗಳನ್ನು ಪಡೆದು ಸೋಲು ಕಂಡಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಹಜರತ್ ಎ.ಶೇಕ್ ಅವರು 7,318 ಮತ ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+