ಕುಂದಗೋಳ ಉಪ ಚುನಾವಣೆ : ಬಿಜೆಪಿಯ ಚಿಕ್ಕನಗೌಡರ್ ಮತದಾನ
ಧಾರವಾಡ, ಮೇ 19 : ಕುಂದಗೋಳ ಉಪ ಚುನಾವಣೆಯ ಮತದಾನ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಅವರು ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಭಾನುವಾರ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಅವರು ಅದರಗುಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು.
ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಬೆಂಬಲಿಗರು ಅದರಗುಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಆರಂಭಕ್ಕೂ ಮುನ್ನ ಪೂಜೆ ಸಲ್ಲಿಸಿದರು. ಮತಗಟ್ಟೆಯ ಬಾಗಿಲಿಗೆ ಅರಿಶಿಣ, ಕುಂಕುವ ಹಚ್ಚಿ ಹೂವಿನ ಹಾರ ಹಾಕಿದರು.
ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ 214 ಮತಗಟ್ಟೆಗಳನ್ನು ತೆರೆಯಲಾಗಿದೆ. ಬೆಳಗ್ಗೆ 9 ಗಂಟೆಯ ತನಕ ಶೇ 9.59 ರಷ್ಟು ಮತದಾನವಾಗಿದೆ. 8 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್-ಜೆಡಿಎಸ್‌ನಿಂದ ಕುಸುಮಾ ಶಿವಳ್ಳಿ ಕಣದಲ್ಲಿದ್ದಾರೆ.

ಈ ಬಾರಿ ಗೆಲುವು ಖಚಿತ
ಮತದಾನ ಮಾಡಿದ ಬಳಿಕ ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಅವರು, 'ಈ ಬಾರಿ ಕುಂದಗೋಳದಲ್ಲಿ ಬಿಜೆಪಿ ಪರ ಅಲೆ ಇದೆ. ಕಳೆದ ಬಾರಿ ನಾನು 634 ಮತಗಳಿಂದ ಸೋತಿದ್ದೆ. ಈ ಬಾರಿ 21 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ' ಎಂದು ಹೇಳಿದರು.

ನೀತಿ ಸಂಹಿತೆ ಉಲ್ಲಂಘನೆ?
ಮತದಾನ ಆರಂಭಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಬೆಂಬಲಿಗರು ಅದರಗುಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಪೂಜೆ ಸಲ್ಲಿಸಿದರು. ಅರಿಶಿಣ, ಕುಂಕುಮ ಹಚ್ಚಿ, ಮತಗಟ್ಟೆಗೆಯ ಬಾಗಿಲಿಗೆ ಹೂವು ಹಾಕಿ ಪೂಜೆ ಮಾಡಿ ಅಭ್ಯರ್ಥಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

214 ಮತಗಟ್ಟೆಗಳು
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ 214 ಮತಗಟ್ಟೆಗಳಲ್ಲಿ ಸ್ಥಾಪನೆ ಮಾಡಲಾಗಿದೆ. ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡರ್, ಜೆಡಿಎಸ್-ಕಾಂಗ್ರೆಸ್‌ನಿಂದ ಕುಸುಮಾ ಶಿವಳ್ಳಿ ಸೇರಿದಂತೆ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾನುವಾರ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ.

ಶಿವಳ್ಳಿ ನಿಧನಿಂದ ತೆರವಾದ ಕ್ಷೇತ್ರ
2018ರ ಚುನಾವಣೆಯಲ್ಲಿ ಸಿ.ಎಸ್.ಶಿವಳ್ಳಿ ಅವರು ಕಾಂಗ್ರೆಸ್‌ನಿಂದ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಅವರ ಅಕಾಲಿಕ ಮರಣದಿಂದ ಉಪ ಚುನಾವಣೆ ಎದರುರಾಗಿದೆ. ಮೇ 23ರಂದು ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಕುಂದಗೋಳ ಕ್ಷೇತ್ರ
ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ತನಕ ಮತದಾನ ನಡೆಯಲಿದೆ. 97527 ಪುರುಷರು, 91910 ಮಹಿಳೆಯರು ಹಾಗೂ 4 ಇತರ ಮತದಾರರು ಸೇರಿ ಒಟ್ಟು 1,89,441 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications