ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಂದಗೋಳ ಉಪ ಚುನಾವಣೆ : ಬಿಜೆಪಿಯ ಚಿಕ್ಕನಗೌಡರ್ ಮತದಾನ

|
Google Oneindia Kannada News

ಧಾರವಾಡ, ಮೇ 19 : ಕುಂದಗೋಳ ಉಪ ಚುನಾವಣೆಯ ಮತದಾನ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಅವರು ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಭಾನುವಾರ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಅವರು ಅದರಗುಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು.

ಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲ

ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಬೆಂಬಲಿಗರು ಅದರಗುಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಆರಂಭಕ್ಕೂ ಮುನ್ನ ಪೂಜೆ ಸಲ್ಲಿಸಿದರು. ಮತಗಟ್ಟೆಯ ಬಾಗಿಲಿಗೆ ಅರಿಶಿಣ, ಕುಂಕುವ ಹಚ್ಚಿ ಹೂವಿನ ಹಾರ ಹಾಕಿದರು.

ಕುಂದಗೋಳ ಉಪ ಚುನಾವಣೆ 214 ಮತಗಟ್ಟೆ ಸ್ಥಾಪನೆಕುಂದಗೋಳ ಉಪ ಚುನಾವಣೆ 214 ಮತಗಟ್ಟೆ ಸ್ಥಾಪನೆ

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ 214 ಮತಗಟ್ಟೆಗಳನ್ನು ತೆರೆಯಲಾಗಿದೆ. ಬೆಳಗ್ಗೆ 9 ಗಂಟೆಯ ತನಕ ಶೇ 9.59 ರಷ್ಟು ಮತದಾನವಾಗಿದೆ. 8 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ನಿಂದ ಕುಸುಮಾ ಶಿವಳ್ಳಿ ಕಣದಲ್ಲಿದ್ದಾರೆ.

ಈ ಬಾರಿ ಗೆಲುವು ಖಚಿತ

ಈ ಬಾರಿ ಗೆಲುವು ಖಚಿತ

ಮತದಾನ ಮಾಡಿದ ಬಳಿಕ ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಅವರು, 'ಈ ಬಾರಿ ಕುಂದಗೋಳದಲ್ಲಿ ಬಿಜೆಪಿ ಪರ ಅಲೆ ಇದೆ. ಕಳೆದ ಬಾರಿ ನಾನು 634 ಮತಗಳಿಂದ ಸೋತಿದ್ದೆ. ಈ ಬಾರಿ 21 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ' ಎಂದು ಹೇಳಿದರು.

ನೀತಿ ಸಂಹಿತೆ ಉಲ್ಲಂಘನೆ?

ನೀತಿ ಸಂಹಿತೆ ಉಲ್ಲಂಘನೆ?

ಮತದಾನ ಆರಂಭಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಬೆಂಬಲಿಗರು ಅದರಗುಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಪೂಜೆ ಸಲ್ಲಿಸಿದರು. ಅರಿಶಿಣ, ಕುಂಕುಮ ಹಚ್ಚಿ, ಮತಗಟ್ಟೆಗೆಯ ಬಾಗಿಲಿಗೆ ಹೂವು ಹಾಕಿ ಪೂಜೆ ಮಾಡಿ ಅಭ್ಯರ್ಥಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

214 ಮತಗಟ್ಟೆಗಳು

214 ಮತಗಟ್ಟೆಗಳು

ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ 214 ಮತಗಟ್ಟೆಗಳಲ್ಲಿ ಸ್ಥಾಪನೆ ಮಾಡಲಾಗಿದೆ. ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡರ್, ಜೆಡಿಎಸ್‌-ಕಾಂಗ್ರೆಸ್‌ನಿಂದ ಕುಸುಮಾ ಶಿವಳ್ಳಿ ಸೇರಿದಂತೆ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾನುವಾರ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ.

ಶಿವಳ್ಳಿ ನಿಧನಿಂದ ತೆರವಾದ ಕ್ಷೇತ್ರ

ಶಿವಳ್ಳಿ ನಿಧನಿಂದ ತೆರವಾದ ಕ್ಷೇತ್ರ

2018ರ ಚುನಾವಣೆಯಲ್ಲಿ ಸಿ.ಎಸ್.ಶಿವಳ್ಳಿ ಅವರು ಕಾಂಗ್ರೆಸ್‌ನಿಂದ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಅವರ ಅಕಾಲಿಕ ಮರಣದಿಂದ ಉಪ ಚುನಾವಣೆ ಎದರುರಾಗಿದೆ. ಮೇ 23ರಂದು ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಕುಂದಗೋಳ ಕ್ಷೇತ್ರ

ಕುಂದಗೋಳ ಕ್ಷೇತ್ರ

ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ತನಕ ಮತದಾನ ನಡೆಯಲಿದೆ. 97527 ಪುರುಷರು, 91910 ಮಹಿಳೆಯರು ಹಾಗೂ 4 ಇತರ ಮತದಾರರು ಸೇರಿ ಒಟ್ಟು 1,89,441 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.

English summary
S.I.Chikkanna Goudar BJP candidate of Kundgol assembly seat cast his vote on May 19, 2019. Kusuma Shivalli Congress and JD(S) candidate in By election, result will be announced on May 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X