ಪರಿಷತ್ ಚುನಾವಣೆ; ಮತದಾನ ಮಾಡಿದ ಕೋವಿಡ್ ಸೋಂಕಿತರು
ಧಾರವಾಡ, ಅಕ್ಟೋಬರ್ 28 : ವಿಧಾನ ಪರಿಷತ್ ಚುನಾವಣೆಯಲ್ಲಿ ಕೋವಿಡ್ ಸೋಂಕಿತರು ಸಹ ತಮ್ಮ ಹಕ್ಕನ್ನು ಚಲಾಯಿಸಿದರು. ಮತದಾನದ ಕೊನೆಯ ಒಂದು ಗಂಟೆಯಲ್ಲಿ ಕೋವಿಡ್ ಸೋಂಕಿತರು ಮತ ಹಾಕಲು ಅವಕಾಶವನ್ನು ಮಾಡಿಕೊಡಲಾಗಿತ್ತು.
ಬುಧವಾರ ನಾಲ್ವರು ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ನಡೆಯಿತು. ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಿರು.
ಶಿಕ್ಷಕರ ಕ್ಷೇತ್ರದ ಚುನಾವಣೆ: ರಾಮನಗರದಲ್ಲಿ ಶೇ.90ರಷ್ಟು ಮತದಾನ
ಧಾರವಾಡದ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50ರಲ್ಲಿ ಜಿಲ್ಲಾಧಿಕಾರಿ ನಿತೇಶ್. ಕೆ. ಪಾಟೀಲ ಹಾಗೂ ಉಪ ವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ ಬಿ. ಅವರ ಮಾರ್ಗದರ್ಶನದಲ್ಲಿ ಇಬ್ಬರು ಕೋವಿಡ್ ಸೋಂಕಿತರು ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದರು.
ಚುನಾವಣೆ; ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ. 73.32ರಷ್ಟು ಮತದಾನ
ಒಬ್ಬರು ಹೋಂ ಐಸೋಲೇಷನ್ನಲ್ಲಿದ್ದರು. ಮತ್ತೊಬ್ಬರು ಕೋವಿಡ್ ಕೇರ್ ಸೆಂಟರ್ನಿಂದ ಆಗಮಿಸಿ ಮತದಾನ ಮಾಡಿದರು. ಸೋಂಕಿತರು ಮತಗಟ್ಟೆಗೆ ಬಂದು ಹೋಗಲು ವ್ಯವಸ್ಥೆ ಮಾಡಲಾಗಿತ್ತು. ಮತದಾನದ ನಂತರ ಮತಗಟ್ಟೆಯನ್ನು ಪುನಃ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು.
ಕರ್ನಾಟಕ; 3146 ಹೊಸ ಕೋವಿಡ್ ಪ್ರಕರಣಗಳು ದಾಖಲು
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯಿಂದ ತಪಾಸಣೆ ನಡೆಸಲಾಯಿತು. ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ಸೀಲ್ಡ್ ಬಳಕೆ ಮಾಡಲಾಗಿದೆ. ಕಡ್ಡಾಯವಾಗಿ ಸಾಮಾಜಿಕ ಅಂತರದ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು.
ಶೇ 70ರಷ್ಟು ಮತದಾನ: ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿವೆ. ಬುಧವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ. 70.11 ರಷ್ಟು ಮತದಾನವಾಗಿದೆ. ಹಿಂದಿನ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗಳಿಗೆ ಹೋಲಿಕೆ ಮಾಡಿದರೆ ಅತಿ ಹೆಚ್ಚು ಮತದಾನವಾಗಿದೆ.