Leopard: ಧಾರವಾಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ದಾಳಿಗೆ ಆಕಳ ಕರು ಸಾವು, ಭಯದಲ್ಲಿ ಜನರು
ಧಾರವಾಡ, ಮಾರ್ಚ್ 22: ವಿದ್ಯಾಕಾಶಿ ಧಾರವಾಡ ವ್ಯಾಪ್ತಿಯ ಗ್ರಾಮವೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಆಕಳು ಕರುವಿನ ಮೇಲೆ ದಾಳಿ ನಡೆಸಿದ್ದ ಪರಿಣಾಮ ಕರು ಮೃತಪಟ್ಟಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮಹಿಳೆಯರು, ಮಕ್ಕಳು ಮನೆಯಿಂದ ಹೊರ ಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.
ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಸುತ್ತಮುತ್ತ ಮೂರು ನಾಲ್ಕು ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಿತ್ತು. ಅದರ ಬೆನ್ನಲ್ಲೆ ಇದೀಗ ಜಿಲ್ಲೆಯ ಮನಸೂರು ಗ್ರಾಮದಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದೆ.

ಈ ಮನಸೂರು ಗ್ರಾಮದ ಕರೆಮ್ಮ ದೇವಸ್ಥಾನದ ಬಳಿ ಕಟ್ಟಿದ್ದ ಆಕಳ ಕರುವಿನ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಕರು ಒದ್ದಾಡಿ ಪ್ರಾಣ ಬಿಟ್ಟಿದೆ. ಮೃತಪಟ್ಟ ಈ ಆಕಳ ಕರು ಗ್ರಾಮದ ಕುಬೇರಪ್ಪ ಮಡಿವಾಳರ ಎಂಬ ರೈತನಿಗೆ ಸೇರಿದ್ದಾಗಿದೆ. ಚಿರತೆ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಜನರು ದೇವಸ್ಥಾನದ ಬಳಿ ಜಮಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮನಸೂರು ಗ್ರಾಮ ವ್ಯಾಪ್ತಿಯಲ್ಲಿ ಕೆಲವು ದಿನಗಳಿಂದ ಚಿರತೆ ಓಡಾಡುತ್ತಿರುವು ಖಚಿತವಾಗುತ್ತಿದ್ದಂತೆ ಮನಸೂರು ಗ್ರಾಮ ಸೇರಿದಂತೆ ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದೆ. ಒಬ್ಬರು ಹೊರ ಓಡಾಡಲು ಭಯ ಪಡುತ್ತಿದ್ದಾರೆ. ಧಾರವಾಡ ಹೊರವಲಯದಲ್ಲಿ ಚಿರತೆ ಇರಬಹುದು ಎಂದು ಶಂಕಿಸಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಮನಸೂರು ಗ್ರಾಮಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿಯು, ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕಿದ್ದಾರೆ. ಚಿರತೆ ಸೆರೆಹಿಡಿಯಲು ಉದ್ದೇಶಿತ ಸ್ಥಳಗಳಲ್ಲಿ ಬೋನು ಇಡಲು ನಿರ್ಧರಿಸಿದ್ದಾರೆ. ಗ್ರಾಮಸ್ಥರ ಹಿತ ದೃಷ್ಟಿಯಿಂದ ಗ್ರಾಮದಲ್ಲಿ ರಾತ್ರಿ ಅರಣ್ಯ ಸಿಬ್ಬಂದಿ ಗಸ್ತು ತಿರುಗಲು ನಿರ್ಧರಿಸಿದ್ದಾರೆ.
ಇನ್ನೂ ಗ್ರಾಮಸ್ಥರಿಗೆ ಹೊರ ಓಡಾಡುವಾಗ ಎಚ್ಚರಿಕೆಯಿಂದ ಇರಬೇಕು. ಜೊತೆಗೆ ಚಿರತೆಯ ಚಲನವಲನ ಕಂಡಲ್ಲಿ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ. ಎಲ್ಲಿಯಾದರೂ ಕಂಡಲ್ಲಿ,












Click it and Unblock the Notifications