ಮದುವೆ ಸಮಾರಂಭಗಳಿಗೆ ಇ-ಪಾಸ್ ಪಡೆಯುವುದು ಹೇಗೆ?

ಧಾರವಾಡ, ಮೇ 06; ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 12ರ ಬೆಳಗ್ಗೆ 6 ಗಂಟೆಯ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಮದುವೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತದ ವತಿಯಿಂದ ಅನುಮತಿ ಪಡೆಯಬೇಕು.

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಅವಧಿಯಲ್ಲಿ ಮದುವೆ ಸಮಾರಂಭಗಳನ್ನು ಮಾಡುವವರು ಜಿಲ್ಲಾಡಳಿತದ ವೆಬ್‍ಸೈಟ್ ಮೂಲಕ ಇ-ಪಾಸ್ ಪಡೆಯಬಹುದು.

ಆನ್‍ಲೈನ್ ಮೂಲಕ ಇ-ಪಾಸ್ ಪಡೆಯಲು ಮದುವೆ ಆಮಂತ್ರಣ ಪತ್ರಿಕೆ, ಪರವಾನಿಗೆ ಪಡೆಯುವವರ ಗುರುತಿನ ಚೀಟಿ (ಆಧಾರ್ ಕಾರ್ಡ್, ಪಾಸ್‍ಪೋರ್ಟ್, ಡ್ರೈವಿಂಗ್ ಲೈಸನ್ಸ್) ಮುಂತಾದವುಗಳನ್ನು ಅಪ್‍ಲೋಡ್ ಮಾಡಬೇಕು.

 Lock Down How To Get Pass For Marriage Function

ಇ-ಪಾಸ್ ಧಾರವಾಡ ಜಿಲ್ಲೆ ವ್ಯಾಪ್ತಿಯೊಳಗೆ ಮಾತ್ರ ಅನ್ವಯ. ಮದುವೆಗಳಿಗೆ ಕನಿಷ್ಠ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮದುವೆಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು.

ಸಮಾರಂಭದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಪರವಾನಿಗೆ ಪಡೆದ ವ್ಯಕ್ತಿ ಸಂಪೂರ್ಣ ಜವಾಬ್ದಾರ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ (1077) ಸಹ ಆರಂಭಿಸಲಾಗಿದೆ.

ಮದುವೆಗೆ ಅನುಮತಿ ಪಡೆದ ವ್ಯಕ್ತಿಗಳಿಗೆ ಮದುವೆ ಕಾರ್ಯಕ್ರಮದಲ್ಲಿ 50 ಜನರ ಮಿತಿ ನಿರ್ವಹಿಸಲು ಕೈಗಳಿಗೆ ಧರಿಸಲು ಕೈ ಬ್ಯಾಂಡ್‍ಗಳನ್ನು ತಹಶೀಲ್ದಾರ್ ಕಚೇರಿ ಅಥವಾ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ವಲಯ ಸಹಾಯಕ ಆಯುಕ್ತರ ಕಚೇರಿಯಿಂದ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+