ಧಾರವಾಡದಲ್ಲಿ ಲಾಕ್ ಡೌನ್; ತುರ್ತು ಪಾಸ್ ಪಡೆಯುವುದು ಹೇಗೆ?

ಧಾರವಾಡ, ಜುಲೈ 15 : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಗಟ್ಟಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಂತ್ಯ ಸಂಸ್ಕಾರ ಹಾಗೂ ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ಜನರು ಪಾಸ್‌ಗಳನ್ನು ಪಡೆಯಬೇಕು.

Recommended Video

      IPL 2020 moving to Dubai | Oneindia Kannada

      ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಧಾರವಾಡ ಜಿಲ್ಲೆಯಲ್ಲಿ ಜುಲೈ 15ರ ಬೆಳಗ್ಗೆ 10 ಗಂಟೆಯಿಂದ ಜುಲೈ 24 ರ ರಾತ್ರಿ 8 ಗಂಟೆಯವರೆಗೆ 10 ದಿನಗಳ ಅವಧಿಯವರೆಗೆ ಲಾಕ್‍ ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

      ಲಾಕ್‍ ಡೌನ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು, ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

      Lock Down In Dharwad How To Get Emergency Pass

      ಲಾಕ್‍ ಡೌನ್ ಸಮಯದಲ್ಲಿ ಅನಗತ್ಯವಾಗಿ ಸಂಚಾರ ನಡೆಸುವುದು, ಖಾಸಗಿ ವಾಹನಗಳ ಸಂಚಾರ, ಜಿಲ್ಲೆಯ ಹೊರಗೆ ಪ್ರಯಾಣ ಮತ್ತು ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವುದನ್ನು (ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸದೇ) ಸಂಪೂರ್ಣವಾಗಿ ನಿಷೇಧಿಸಲಾಗಿದೆ.

      ಲಾಕ್‍ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಅಗತ್ಯ ಸೇವೆ, ಸರಕು ಮತ್ತು ವಹಿವಾಟುಗಳಿಗೆ ಸಮಯ ನಿಗದಿ ಮಾಡಲಾಗಿದೆ. ಪ್ರತಿದಿನ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎಲ್ಲಾ ಕಿರಾಣಿ, ದಿನಸಿ, ಹಾಲು, ತರಕಾರಿ, ಹಣ್ಣು, ಮಾಂಸ ಮಾರಾಟಕ್ಕೆ ಅವಕಾಶ ಕೊಡಲಾಗಿದೆ.

      ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರ ಹಾಗೂ ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ. ಜನರು ಸಂಚಾರ ನಡೆಸಲು www.supportdharwad.in ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಿ ಇ-ಪಾಸ್ ಪಡೆಯಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+