ಧಾರವಾಡ ಲೋಕಸಭೆ ಕ್ಷೇತ್ರ: ಮತದಾರರು, ವಿಧಾನಸಭಾ ಕ್ಷೇತ್ರ ವಿವರ

ಧಾರವಾಡ, ಮಾರ್ಚ್ 20: ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜಿಲ್ಲಾಡಳಿತ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಏಣಿಕೆ ನಡೆಯಲಿದೆ.

ಜಿಲ್ಲಾ ಚುನಾವಣಾಧಿಕಾರಿ, ಧಾರವಾಡ ಜಲ್ಲಾಧಿಕಾರಿ ದಿವ್ಯ ಪ್ರಭು ಚುನಾವಣೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ್ದಾರೆ. ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಮೇ 7ರಂದು ಮತದಾನ ನಡೆಯಲಿದೆ.

Lok Eabha Election 2024 Dharwad Seat Voters And Assembly Seat

ಧಾರವಾಡ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಧಾರವಾಡ ಜಿಲ್ಲೆಯ 7 ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಸೇರಿ ಒಟ್ಟು 8 ವಿಧಾನಸಭಾ ಮತಕ್ಷೇತ್ರಗಳಿವೆ. ಚುನಾವಣೆಗಾಗಿ ಒಟ್ಟು 2295 ಸಿಯು, 3,284 ಬಿ.ಯು, 2410 ವಿ.ವಿ.ಪ್ಯಾಟ್ ಹೊಂದಿರುವ ವಿದ್ಯುನ್ಮಾನ ಮತ ಯಂತ್ರಗಳನ್ನು ಸಿದ್ದಗೊಳಿಸಲಾಗಿದೆ. ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 1982 ಪಿ.ಆರ್.ಒ, 1982 ಎಪಿಆರ್ ಒ ಮತ್ತು 4163 ಜನ ಪಿಓಗಳನ್ನು ಹಾಗೂ 800 ಜನ ಮೈಕ್ರೋ ಆಬ್ಸರ್ವರ್, ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಲಾಗುತ್ತದೆ.

ಮತದಾರರ ವಿವರ: ಈ ಬಾರಿಯ ಚುನಾವಣೆಯಲ್ಲಿ 8,99,246 ಪುರುಷ, 8,92,043 ಮಹಿಳಾ ಹಾಗೂ 97 ಇತರೆ ಸೇರಿದಂತೆ ಒಟ್ಟು 17,91,386 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಅಕ್ಟೋಬರ್ 27, 2023ಕ್ಕೆ ಪ್ರಕಟಿಸಿರುವ ಕರಡು ಮತದಾರ ಪಟ್ಟಿಯಲ್ಲಿ 20,629 ಯುವ ಮತದಾರರಿದ್ದರು. ಸದ್ಯ ಪ್ರಕಟಿಸಲಾದ ಅಂತಿಮ ಮತದಾರಪಟ್ಟಿಯಲ್ಲಿ 31,412 ಯುವ ಮತದಾರರಿದ್ದಾರೆ. 20,474 ವಿಕಲಚೇತನ ಮತದಾರರು ಹಾಗೂ 85 ವಯಸ್ಸಿನ ಮತ್ತು 85 ವಯಸ್ಸು ದಾಟಿರುವ 15,833 ಮತದಾರರು ಕ್ಷೇತ್ರದ ವ್ಯಾಪ್ತಿಯಲ್ಲಿ ಇದ್ದಾರೆ.

ಮತದಾನಕ್ಕಾಗಿ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಧಾರವಾಡ ಜಿಲ್ಲೆಯ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ 1652 ಮತ್ತು ಶಿಗ್ಗಾಂವ್ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 241 ಮತಗಟ್ಟೆಗಳು ಸೇರಿದಂತೆ ಒಟ್ಟು 1893 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 2014ರ ಚುನಾವಣೆಯಲ್ಲಿ ಶೇ. 65.99 ರಷ್ಟು, 2019ರಲ್ಲಿ ಶೇ. 70.29 ರಷ್ಟು ಮತದಾನವಾಗಿತ್ತು.

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನವಲಗುಂದ, ಕುಂದಗೋಳ, ಧಾರವಾಡ, ಹುಬ್ಬಳ್ಳಿ-ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಕೇಂದ್ರ, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಕಲಘಟಗಿ, ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಗಳಿವೆ. ಚುನಾವಣೆಗೆ ಸಂಬಂಧಿಸಿದ ದೂರುಗಳ ನಿರ್ವಹಣೆಗಾಗಿಯೇ 1950 ಸಹಾಯವಾಣಿ ಮತ್ತು ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ನಿರ್ವಹಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಚುನಾವಣೆ ಮುಕ್ತಾಯವಾಗುವ ತನಕ ಅಕ್ರಮಗಳನ್ನು ತಡೆಯಲು ಧಾರವಾಡ ಜಿಲ್ಲಾ ಗಡಿಯಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಪೊಲೀಸ್, ಕಂದಾಯ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 24 ಚೆಕ್‌ಪೋಸ್ಟ್‌ಗಳಿದ್ದು, ಗಸ್ತು, ನಿರಂತರ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ.

ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಓಡಾಟಕ್ಕೆ ತೊಂದರೆ ಆಗದಂತೆ ವಿವಿಧ ಅನುಮತಿಗಳ ತ್ವರಿತ ವಿಲೇವಾರಿಗಾಗಿ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪ್ರಚಾರಕ್ಕಾಗಿ ಕಡ್ಡಾಯವಾಗಿ ಮಾಧ್ಯಮ ಪ್ರಮಾಣೀಕರಣ ಪಡೆಯತಕ್ಕದ್ದು, ಪತ್ರಿಕೆಗಳಲ್ಲಿ ಪ್ರಕಟವಾಗುವ ನ್ಯೂಸ್‌ಗಳ ಮೇಲೆ ಸಹ ನಿಗಾವಹಿಸಲಾಗುತ್ತದೆ. ಚುನಾವಣಾ ಕಾರಣಕ್ಕಾಗಿ ಪ್ರಸಾರ ಮಾಡಲು ಸಿದ್ಧಪಡಿಸಿದ ಜಾಹೀರಾತು ಪ್ರಸಾರಕ್ಕೆ ಯೋಗ್ಯವೇ ಅಥವಾ ಇಲ್ಲವೇ ಎಂದು ಎಂ.ಸಿ.ಎಂ.ಸಿ ತಂಡ ಪರಿಶೀಲನೆ ಮಾಡಲಿದೆ. ಪ್ರಚಾರದ ಕರಪತ್ರದಲ್ಲಿ ಕಡ್ಡಾಯವಾಗಿ ಪ್ರಿಂಟರ್ ಹೆಸರು, ವಿಳಾಸ ಹಾಗೂ ಸಂಖ್ಯೆ ನಮೂದಿಸತಕ್ಕದ್ದು ಎಂದು ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+