ಜೂನ್ 4ರಂದು ಧಾರವಾಡ ಚುನಾವಣಾ ಮತ ಎಣಿಕೆ: ಜಿಲ್ಲಾಧಿಕಾರಿಗಳ ಸೂಚನೆ
ಧಾರವಾಡ, ಜೂನ್ 02: ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆ ಮೇ 7ರಂದು ನಡೆಯಿತು. ಜೂನ್ 04 ರಂದು ನಡೆಯಲಿರುವ ಮತ ಎಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಹೇಗೆಲ್ಲ ನಡೆಯಲಿದೆ ಎಂಬುದರ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ವಿವರಿಸಿದರು.
ಭಾನುವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯದ ಸಿದ್ದತೆ ಮತ್ತು ಮತ ಎಣಿಕಾ ಕೇಂದ್ರದ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು.

ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ 14 ಟೇಬಲ್‌ಗಳಂತೆ ಒಟ್ಟು 112 ಟೇಬಲ್ ಗಳನ್ನು ಮತ ಎಣಿಕೆಗೆ ಸಿದ್ದಗೊಳಿಸಲಾಗಿದೆ. ಅಂದಾಜು 20 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.
ಭಾರತ ಚುನಾವಣಾ ಆಯೋಗದ ಆದೇಶದಂತೆ ಮೊಬೈಲ್ ಹಾಗೂ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸಿಸ್ ಗಳನ್ನು ತರಲು ಅವಕಾಶವಿಲ್ಲ. ಮತ ಎಣಿಕೆ ಕೇಂದ್ರಕ್ಕೆ ಬರುವ ಅಭ್ಯರ್ಥಿಗಳು, ಮತ ಎಣಿಕೆ ಏಜಂಟರು, ಚುನಾವಣಾ ಏಜಂಟರು ಹಾಗೂ ಇತರರು ತಮ್ಮ ಮೊಬೈಲ್ ಗಳನ್ನು ಮತ ಎಣಿಕೆ ಕೇಂದ್ರದ ಹೊರಗೆ ಬಿಟ್ಟು ಬರಬೇಕು.
ಮೊಬೈಲ್ ನಿಷೇಧ, ಇತರೆ ಸೂಚನೆಗಳೇನು?
ಒಂದು ವೇಳೆ ಮರೆತು ತಂದರೂ, ಅವರಿಗೆ ಪಸ್ಟ್ ಗೇಟ್ ದಲ್ಲಿ ಮೊಬೈಲ್ ಸಂಗ್ರಹ ಕೇಂದ್ರ ತೆರೆಯಲಾಗಿದ್ದು, ಅಲ್ಲಿ ಇಟ್ಟು ಚೀಟಿ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಮೊಬೈಲ್ ಹಾಗೂ ಇತರೆ ಡಿವೈಸ್ ಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರಬಾರದೆಂದು ಅವರು ತಿಳಿಸಿದರು.

ಮತ ಎಣಿಕೆ ಕೇಂದ್ರದ ಸುತ್ತೂಲು 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆಯಿಂದ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಏಣಿಕೆ ಕೇಂದ್ರದಲ್ಲಿ ಮತ್ತು ಸುತ್ತಲು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಚುನಾವಣಾ ವೇಳಾಪಟ್ಟಿ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಿದ್ದು, ಏಪ್ರಿಲ್ 19 ರಿಂದ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಮೇ 7 ರಂದು ಮತದಾನ ಜರಗಿದ್ದು, ಜೂನ್ 4 ರಂದು ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕಟ್ಟಡದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಜೂನ್ 6 ಕ್ಕೆ ಪ್ರಸುತ್ತ ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿ ಮುಕ್ತಾಯ ಗೊಳ್ಳುವುದು ಎಂದು ಅವರು ತಿಳಿಸಿದರು.
ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳ ವಿವರ
ಧಾರವಾಡ ಲೋಕಸಭಾ ಮತಕ್ಷೇತ್ರದ 2019 ರ ಲೋಕಸಭಾ ಚುನಾವಣೆಯಲ್ಲಿ 19 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತ್ತು 2024 ರ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಗೆ 17 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದು ಅವರು ವಿವರಿಸಿದರು.
ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ 69-ನವಲಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 71.48 ರಷ್ಟು ಮತದಾನ ವಾಗಿದ್ದರೆ, 2024ರ ಲೋಕಸಭಾ ಚುನಾವಣೆಯಲ್ಲಿ 76.94 ರಷ್ಟು ಮತದಾನವಾಗಿದೆ.
70-ಕುಂದಗೋಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 73.01 ರಷ್ಟು ಮತದಾನ ವಾಗಿದ್ದರೆ, 2024ರ ಲೋಕಸಭಾ ಚುನಾವಣೆಯಲ್ಲಿ 80.22 ರಷ್ಟು ಮತದಾನವಾಗಿದೆ.
71-ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 71.95 ರಷ್ಟು ಮತದಾನ ವಾಗಿದ್ದರೆ, 2024ರ ಲೋಕಸಭಾ ಚುನಾವಣೆಯಲ್ಲಿ 75.75 ರಷ್ಟು ಮತದಾನವಾಗಿದೆ.
75-ಕಲಘಟಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 75.92 ರಷ್ಟು ಮತದಾನ ವಾಗಿದ್ದರೆ, 2024ರ ಲೋಕಸಭಾ ಚುನಾವಣೆಯಲ್ಲಿ 82.27 ರಷ್ಟು ಮತದಾನವಾಗಿದೆ.
ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ಹಾವೇರಿ ಜಿಲ್ಲೆಯ 83-ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 71.64 ರಷ್ಟು ಮತದಾನ ವಾಗಿದ್ದರೆ, 2024ರ ಲೋಕಸಭಾ ಚುನಾವಣೆಯಲ್ಲಿ 77.23 ರಷ್ಟು ಮತದಾನವಾಗಿದೆ.
ಒಟ್ಟಾರೆಯಾಗಿ ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 70.12 ರಷ್ಟು ಮತದಾನ ವಾಗಿದ್ದರೆ, 2024ರ ಲೋಕಸಭಾ ಚುನಾವಣೆಯಲ್ಲಿ 74.37 ರಷ್ಟು ಮತದಾನವಾಗಿದೆ.
ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ
ಜೂನ 4 ರಂದು ಮತ ಎಣಿಕೆ ಕಾರ್ಯ ನಡೆಯುವದರಿಂದ 2024 ಜೂನ್ 3ರ ಸಂಜೆ 6 ಗಂಟೆಯಿಂದ 2024 ಜೂನ್ 5ರ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಲು ಸಿಆರ್.ಪಿ.ಸಿ. 1973 ಕಲಂ 144 ರಡಿ ನಿಷೇದಾಜ್ಞೆ ಆದೇಶವನ್ನು ಈಗಾಗಲೇ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications