ಧಾರವಾಡದಲ್ಲಿ ಬೆಳಗಾವಿ ಪಾಲಿಕೆ ಸಹಾಯಕ ಆಯುಕ್ತರ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಹುಬ್ಬಳ್ಳಿ, ಆಗಸ್ಟ್, 17: ಭ್ರಷ್ಟರ ಬೇಟೆ ಮುಂದುವರೆಸಿರುವ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಗೆ ಇನ್ನಷ್ಟು ಚುರುಕು ನೀಡಿದ್ದು, ಇಂದು ಬೆಳ್ಳಂಬೆಳಗ್ಗೆಯೇ ಧಾರವಾಡ ಸೇರಿದಂತೆ ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಆದಾಯಕ್ಕೂ ಮೀರಿ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿರುವ ಹಿನ್ನೆಲೆ ಈ ದಾಳಿಯಾಗಿದೆ. ಇನ್ನು ರಾಜ್ಯ ರಾಜಧಾನಿಯಲ್ಲಿ ನಾಲ್ಕು ಎಫ್ಐಆರ್ ಸಂಬಂಧ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ ದಾಳಿಯಾಗಿದೆ. ವಿವಿಧ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹಾಗೆಯೇ ಧಾರವಾಡದಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ಪಾಲಿಕೆ ಸಹಾಯಕ ಆಯುಕ್ತ ಸಂತೋಷ ಆನಿಶೆಟ್ಟರ್ ಅವರ ಧಾರವಾಡದ ಸಪ್ತಾಪುರ ಬಡಾವಣೆಯ ಮಿಚಿಗನ್ ಲೇಔಟ್ನಲ್ಲಿನ ನಿವಾಸದ ಮೇಲೆ ದಾಳಿಯಾಗಿದೆ. ನಿಶೆಟ್ಟರ್ ಈ ಮೊದಲು ಹುಬ್ಬಳ್ಳಿ ಧಾರವಾಡ ಪಾಲಿಕೆಯಲ್ಲಿದ್ದು, ಕೆಲ ವರ್ಷಗಳ ಹಿಂದಯಷ್ಟೇ ಬೆಳಗಾವಿಗೆ ವರ್ಗಾವಣೆ ಆಗಿದ್ದರು.
ಇನ್ನು ಸಂತೋಷ ಆನಿಶೆಟ್ಟರ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಆರಂಭವಾಗಿದ್ದು, ಈ ವೇಳೆ ಅವರ ಧಾರವಾಡದ ನಿವಾಸದಲ್ಲಿ ಚಿನ್ನ, ಬೆಳ್ಳಿ, ಬ್ಯಾಂಕ್ ಬ್ಯಾಲೆನ್ಸ್‌ವುಳ್ಳ ಖಾತೆ ಪುಸ್ತಕ ಹಾಗೂ ಅನೇಕ ಅಕ್ರಮವಾಗಿ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಂತೋಷ್ ಆನಿಶೆಟ್ಟರ್ ಅವರು ಧಾರವಾಡದ ನಿವಾಸದಲ್ಲಿ ಬೆಲೆ ಬಾಳುವ ಬಂಗ್ಲೆ ಹೊಂದಿದ್ದು, ಈ ಹಿಂದೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿದ್ದಾಗ ಸಹ ಸಂಪಾದನೆಗಿಂತ ಹೆಚ್ಚಿಗೆ ಆದಾಯ ಹೊಂದಿದ್ದರು ಎನ್ನುವ ಆರೋಪ ಇತ್ತು. ಇದರಿಂದಾಗಿ ಅವರಮ್ನ ಬೆಳಗಾವಿ ಮಹಾನಗರ ಪಾಲಿಕೆಗೆ ವರ್ಗಾವಣೆ ಮಾಡಲಾಗಿತ್ತು ಎನ್ನಲಾಗಿದೆ.
ಅಲ್ಲದೆ ಈಗ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ವಿವಿಧ ಕಡೆಗಳಲ್ಲಿ ಅಪಾರ ಜಮೀನು ಹಾಗೂ ಇನ್ನಿತರ ಸಂಪತ್ತು ಹೊಂದಿದ್ದಾರೆ ಎಂದು ಲೋಕಾಯುಕ್ತ ದಾಳಿಯಿಂದ ತಿಳಿದುಬಂದಿದೆ. ಇವರ ಅಪಾರ ಸಂಪತ್ತು ನೋಡಿ ಲೋಕಾಯುಕ್ತ ಅಧಿಕಾರಿಗಳು ಶಾಕ್ ಆಗಿದ್ದಾರೆ. ಇನ್ನು ಮನೆಯಲ್ಲಿದ್ದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications