ಲಾರಿ ಮಾಲೀಕರ ಸಂಘದಿಂದ ಮುಷ್ಕರ: ತರಕಾರಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಫಿಕ್ಸ್!
ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ಬೆಲೆ ಏರಿಕೆ ಮುಂದುವರಿದಿದೆ. ಇದರ ನಡುವೆ ಅಗತ್ಯ ವಸ್ತುಗಳು, ತರಕಾರಿ ಹಾಗೂ ದವಸ ಧಾನ್ಯಗಳ ಬೆಲೆಯೂ ಹೆಚ್ಚಳವಾಗುವ ಆತಂಕ ಎದುರಾಗಿದೆ. ಈಗಾಗಲೇ ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಸರಣಿಯಾಗಿ ವಿವಿಧ ವಸ್ತುಗಳ ಹಾಗೂ ಸೇವೆಗಳ ಬೆಲೆ ಏರಿಕೆಯನ್ನು ಮಾಡಿದೆ. ಡೀಸೆಲ್ ಹಾಗೂ ಪೆಟ್ರೋಲ್ ಸುಂಕ ಎರಡು ಬಾರಿ ಹೆಚ್ಚಳವಾಗಿದೆ. ಒಂದು ಬಾರಿ ಡೀಸೆಲ್ ಬೆಲೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹೆಚ್ಚಳ ಮಾಡಿದರೆ, ಮತ್ತೊಮ್ಮೆ ಕೇಂದ್ರ ಬಿಜೆಪಿ ಸರ್ಕಾರವು ಡೀಸೆಲ್ ಹಾಗೂ ಪೆಟ್ರೋಲ್ ಎರಡರ ಬೆಲೆಯನ್ನೂ ಹೆಚ್ಚಳ ಮಾಡಿದೆ. ಇದರ ನಡುವೆ ಇದೀಗ ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಏ.14ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.
ಕಳೆದ ಆರು ತಿಂಗಳಲ್ಲಿ 5 ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿರುವ ಸರ್ಕಾರದ ನಿರ್ಧಾರ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಏ.14ರ ರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಲಾರಿ ಮಾಲೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ತಿಳಿಸಿದ್ದಾರೆ. ಇದು ಜನ ಸಾಮಾನ್ಯರಿಗೆ ಶಾಕ್ ಕೊಟ್ಟಂತೆ ಆಗಿದೆ.

ಈ ಸಂಬಂಧ ಮಾತನಾಡಿರುವ ಅವರು, ರಾಜ್ಯ ಸರ್ಕಾರ ಅಕ್ಷರಶಃ ಲೂಟಿಗೆ ಇಳಿದಿದೆ. ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹಿಸುತ್ತಿದೆ. ಝಳಕಿ, ಅತ್ತಿಬೆಲೆ ಆರ್‌ಟಿಒ ಚೆಕ್ ಪೋಸ್ಟ್‌ಗಳಲ್ಲಿ ಕೋಟ್ಯಂತರ ಹಣವನ್ನು ಸರ್ಕಾರದ ಪರವಾಗಿ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಲಾರಿಗಳ ಸಂಚಾರದಿಂದ ಶೇ 35ರಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ಆದರೂ ಸಹ ಲಾರಿ ಮಾಲೀಕರ ಮತ್ತು ಚಾಲಕರ ಹಿತ ಕಾಪಾಡಲು ಮುಂದೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಸ್ತೆಗಳಿಗೆ ಬಣ್ಣ ಬಳಿದು ಟೋಲ್ ಸಂಗ್ರಹವನ್ನು ಸ್ಥಳೀಯ ಪುಢಾರಿಗಳಿಗೆ ವಹಿಸಿದ್ದಾರೆ. 18 ರಸ್ತೆಗಳಿಗೆ ದರ ವಿಧಿಸಿದ್ದಾರೆ. ಅಲ್ಲದೇ ಕಮರ್ಶಿಯಲ್ ಟ್ಯಾಕ್ಸ್ ಚೆಕ್ ಪೋಸ್ಟ್‌ಗಳು 1028 ಕಡೆ ಇವೆ. ಗಡಿ ಠಾಣೆಗಳು ಲಾರಿ ಮಾಲೀಕರ ರಕ್ತ ಹೀರುತ್ತಿವೆ. ಈ ಅನ್ಯಾಯ, ದೌರ್ಜನ್ಯ ತಡೆಯಬೇಕಾದ ಸರ್ಕಾರ ಮತ್ತೆ ತೈಲ ಬೆಲೆ ಏರಿಸುವ ಮೂಲಕ ಬರೆ ಎಳೆದಿದೆ ಎಂದು ದೂರಿದರು.
ಅವಶ್ಯಕ ವಸ್ತುಗಳು ಸೇರಿದಂತೆ ಎಲ್ಲ ಬಗೆಯ ಲಾರಿ, ಗೂಡ್ಸ್ ಗಾಡಿಗಳು, ಗ್ಯಾಸ್ ಪೂರೈಕೆ ವಾಹನಗಳು 14ರಂದು ಮಧ್ಯರಾತ್ರಿಯಲ್ಲಿ ಎಲ್ಲಿ ಇರುತ್ತವೆಯೋ ಅಲ್ಲಿಂದಲೇ ನಿಂತು ಬಿಡುತ್ತಿವೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು. ಸೆಸ್ ಸಂಗ್ರಹಿಸುವ ಮೂಲಕ ಲಾರಿ ಚಾಲಕರ ಕಲ್ಯಾಣಕ್ಕಾಗಿ ಬರೋಬ್ಬರಿ 300 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿದೆ. ಅವರಿಗೆ ನಿವೃತ್ತಿ ವೇತನ ನೀಡುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಈ ನಿಟ್ಟಿನಲ್ಲಿ ನಿರಂತರ ಒತ್ತಡ ಹೇರಲಾಗುತ್ತಿದೆ ಎಂದು ಅವರು ವಿವರಿಸಿದರು.
ಲಾರಿ ಮಾಲೀಕರ ಸಮಸ್ಯೆಗಳು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಜೆಟ್ ಪೂರ್ವ ಸಭೆಯಲ್ಲಿಯೇ ಗಮನಕ್ಕೆ ತಂದಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಾರಿಗೆ ಇಲಾಖೆ ಅಧಿಕಾರಿಗಳಂತೂ ಯಾರ ಅಂಕೆಗೂ ಸಿಗದೇ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಮಾದರಿ ಅಗತ್ಯ: ಲಾರಿ ಮಾಲೀಕರ ಹಿತ ಕಾಯಲು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಎಲ್ಲಾ ಗಡಿ ಠಾಣೆಗಳು, ಸುಂಕ ವಸೂಲಿ ಕೇಂದ್ರಗಳನ್ನು ಬಂದ್ ಮಾಡಿಸಿದ್ದಾರೆ. ಅಲ್ಲದೇ ರಾಜ್ಯ ಹೆದ್ದಾರಿಗಳಲ್ಲಿ ಟೋಲ್‌ಗಳನ್ನು ರದ್ದು ಮಾಡಿದ್ದಾರೆ. ಅದೇ ಮಾದರಿಯನ್ನು ರಾಜ್ಯದಲ್ಲಿ ತರಬೇಕು ಎಂದು ಒತ್ತಾಯಿಸಿದರು.
ಸಂಘದ ಪದಾಧಿಕಾರಿಗಳಾದ ಲಿಂಗರಾಜ, ಶಿವಣ್ಣ, ವಿಜಯ್ ಮಿಸ್ಕಿನ್, ಗಿರೀಶ ಮಲೆನಾಡು, ಸರ್ಫರಾಜ್, ಮುಕ್ತುಂ ಮದ್ರಾಸ್ ಇದ್ದರು.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications