ಪ್ರಹ್ಲಾದ್ ಜೋಶಿ ಸೇರಿ ಘಟಾನುಘಟಿ ನಾಯಕರ ನಾಮಪತ್ರ ಸಲ್ಲಿಕೆ ಇಂದು: ಅದ್ಧೂರಿ ಮೆರವಣಿಗೆ, ದೇವಸ್ಥಾನ ಭೇಟಿ
ಹುಬ್ಬಳ್ಳಿ, ಏಪ್ರಿಲ್ 15: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಸೋಮವಾರ ಒಳ್ಳೆಯ ಸಮಯ ನೋಡಿಕೊಂಡು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಸಹ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ.
ಧಾರವಾಡ ನಾನು ಇಂದು ಐದನೇ ಭಾರಿಗೆ ಆಯ್ಕೆ ಬಯಸಿ ಇಂದು ಧಾರವಾಡದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕೇಂದ್ರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹೇಳಿದರು.

ಧಾರವಾಡ ಲೋಕಸಭಾ ಚುನಾವಣೆಗೆ ಆಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿಸುವ ಮುನ್ನ ನಗರದ ವಿವಿಧ ಮಠಗಳಿಗೆ ಭೇಟಿ ನೀಡಿದರು. ಪೂಜೆ ಸಲ್ಲಿಸಿ ಭಗವಂತನ ಆರ್ಶಿವಾದ ಪಡೆದು ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದರು.
ಈ ಮೆರವಣಿಗೆ ಹಿಂದಿನ ದಾಖಲೆ ಮುರಿಯಲಿದೆ: ಜೋಶಿ
ಇವತ್ತಿನ ನಾಮಪತ್ರ ಮೆರವಣಿಗೆ ನನ್ನ ಹಿಂದಿನ ಚುನಾವಣೆಯ ಎಲ್ಲ ದಾಖಲೆ ಮುರಿಯುತ್ತದೆ. ಇಂದಿನ ನಾಮಪತ್ರ ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಝಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಧಾರವಾಡದ ಶಿವಾಜಿ ಸರ್ಕಲ್ ನಿಂದ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದೇನೆ. ಮೆರವಣಿಗೆಯಲ್ಲಿ ಸುಮಾರು 30 ಸಾವಿರ ಜನ ಸೇರಲಿದ್ದಾರೆ. ಸ್ವಯಂ ಪ್ರೇರಿತವಾಗಿ ಜನ ಸೇರಲಿದ್ದಾರೆ. ನಾನು ನಾಮ ಪತ್ರ ಸಲ್ಲಿಸೋ ಮುನ್ನ ಮಠಕ್ಕೆ ಭೇಟಿ ಕೊಡೋದು ವಾಡಿಕೆ. ಅದರಂತೆ ಇಂದು ಮಠಕ್ಕೆ ಭೇಟಿ ನೀಡಿದ್ದೇನೆ ಎಂದರು.

ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ
ಬಿಜೆಪಿಯಿಂದ ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಒಳ್ಳೆಯ ಸಮಯದಲ್ಲಿ ಬೆಳಗಾವಿ ಡಿಸಿ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಕೆ. ಇಂದಿನ ನಾಮಪತ್ರಸಲ್ಲಿಕೆ ಇದು ಸಾಂಕೇತಿಕವಾಗಿದ್ದು, ಮುಂದಿನ ಏಪ್ರಿಲ್ 17 ರಂದು ಜಗದೀಶ್ ಶೆಟ್ಟರ್ ಅವರು ಸಹ ಶಕ್ತಿ ಪ್ರದರ್ಶನ ಮಾಡಿ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಇಂದು ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಶುಭ ಮುಹೂರ್ತ ಇರುವುದರಿಂದ ನಾಮಪತ್ರ ಸಾಂಕೇತಿಕವಾಗಿ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ನಂತರ ಇದೇ ಏಪ್ರಿಲ್ 19 ರಂದು ಜನರ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಾಗುವುದು. ಈ ವೇಳೆ ಮಾಜಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಬೈರತಿ ಬಸವರಾಜ ಇತರ ರಾಜ್ಯಮಟ್ಟದ ನಾಯಕರು, ಸ್ಥಳೀಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಮೃಣಾಲ್ ಹೆಬ್ಬಾಳ್ಕರ್ ಶಕ್ತಿ ಪ್ರದರ್ಶನ
ಇಂದು ಬೆಳಗಾವಿ ಲೋಕಸಭೆಯಿಂದ ಮೃಣಾಲ್ ಹೆಬ್ಬಾಳಕರ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಇದಕ್ಕು ಮೊದಲು ಅವರು, ಸುಳೇಭಾವಿ ಮಹಾಲಕ್ಷ್ಮಿ ದೇವಸ್ಥಾನ, ಹಿಂಡಲಗಾ ಗಣಪತಿ ಮಂದಿರದಲ್ಲಿ ಪೂಜೆ ಮಾಡಿ ಆಶಿರ್ವಾದ ಪಡೆಯಲಿದ್ದಾರೆ. ಬೆಳಗಾವಿ ಸಿಪಿಎಡ್ ಮೈದಾನದಿಂದ ಬೃಹತ್ ಕಾರ್ಯಕರ್ತರ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರ ಸ್ಥಳೀಯ ನಾಯಕರು ಪಾಲ್ಗೊಳ್ಳಲಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications