ತವರಿಗೆ ಹೋರಾಟಗಾರರು: ನವಲಗುಂದದಲ್ಲಿ ನಿಷೇಧಾಜ್ಞೆ
ನವಲಗುಂದ, ಆಗಸ್ಟ್, 13: ಜೈಲಿನಿಂದ ಮಹದಾಯಿ ಹೋರಾಟಗಾರರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ನವಲಗುಂದದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರ ಮನವಿ ಮೇರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ ಎಂದು ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಚಿತ್ರದುರ್ಗ ಮತ್ತು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ 186 ರೈತರು ತವರಿಗೆ ಆಗಮಿಸುತ್ತಿದ್ದಾರೆ. ಯಾವುದೇ ಗೊಂದಲಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.












Click it and Unblock the Notifications