ಧಾರವಾಡ: ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವ ಮಹದೇವಪ್ಪ

ಧಾರವಾಡ, ನವೆಂಬರ್‌ 08: ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹದೇವಪ್ಪ, ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ ವಿಚಾರಿಸಿ, ವಿದ್ಯಾರ್ಥಿಗಳಿಂದ ಅಹವಾಲು ಕೂಡ ಸ್ವೀಕರಿಸಿದರು.

Minister Mahadevappa Getting Shoe By Bodyguard

ಹಾಸ್ಟೆಲ್‌ಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿದ ನಂತರ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಸಚಿವ ಮಹಾದೇವಪ್ಪ ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಪ್ರಸಂಗ ನಡೆದಿದೆ.

ಬಿಜೆಪಿಯವರು ಮೀಸಲಾತಿಯನ್ನು ಚಾಕಲೇಟ್‌ ಹಂಚಿದಂತೆ ಹಂಚಿ ಹೋದರು-ಸಚಿವ ಎಚ್.ಸಿ ಮಹದೇವಪ್ಪ

ಹುಬ್ಬಳ್ಳಿ: ಮೀಸಲಾತಿ ವಿಚಾರದಲ್ಲಿ ಭಾರತೀಯ ಜನತಾ ಪಕ್ಷದವರು ಎಲ್ಲ ವರ್ಗದವರಿಗೆ ಮೀಸಲಾತಿ ಕೊಡಲಾಗುವುದು ಎಂದು ಹೇಳಿ ಚಾಕಲೇಟ್ ಹಂಚಿಕೆ ಮಾಡಿದ ಹಾಗೆ ಬಿಜೆಪಿಯವರು ಮಾಡಿ ಹೋದರು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಸಿ.ಮಹದೇವಪ್ಪ ಗಂಭೀರವಾಗಿ ಆರೋಪ ಮಾಡಿದ್ದಾರೆ.

Minister Mahadevappa Getting Shoe By Bodyguard

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಡಾ.ಸದಾಶಿವ ಆಯೋಗ ಜಾರಿ ವಿಚಾರ ಕುರಿತು ಮಾತನಾಡಿದ ಅವರು, ಡಾ. ಸದಾಶಿವ ಆಯೋಗ ವರದಿ ಜಾರಿ ಮಾಡುವುದು ನಮ್ಮ ಆದ್ಯ ಕರ್ತವ್ಯ. ಡಾ.ಸದಾಶಿವ ವರದಿ ಜಾರಿ ಮಾಡುವುದು 2-3 ದಶಕಗಳ ಕಾಲದ್ದು ಈಗಿನದು ಅಲ್ಲ. ಭಾರತೀಯ ಜನತಾ ಪಕ್ಷದವರು ಡಾ. ಸದಾಶಿವ ಆಯೋಗ ವರದಿ ತಿರಸ್ಕಾರ ಮಾಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಕಾಟಾಚಾರಕ್ಕೆ ಮೀಸಲಾತಿ ಜಾರಿ ಮಾಡಿದ್ದಾರೆ.

ನಾವು ಚುನಾವಣಾ ಸಂದರ್ಭದಲ್ಲಿ ಮಾತು ಕೊಟ್ಟಿದ್ದೇವೆ. ಈ ಕುರಿತು ಚಿತ್ರದುರ್ಗದ ಸಮಾವೇಶದಲ್ಲಿ ಡಾ.‌ಸದಾಶಿವ ಆಯೋಗ ವರದಿ ಯಥಾವತ್ತಾಗಿ ಜಾರಿ ಮಾಡುತ್ತೇವೆ ಅಂತಾ ಮಾತುಕೊಟ್ಟಿದ್ದೇವು. ಮೀಸಲಾತಿ ಜಾರಿಗೆ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ ಅಂತಾ ಹೇಳಿದ್ದವು. ಮೀಸಲಾತಿ ಜಾರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಏಳು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ಆಗಿದ್ದು, ಮೀಸಲಾತಿ ಜಾರಿ ವಿಚಾರದಲ್ಲಿ ಕಾನೂನು ಸಲಹೆ ಅಗತ್ಯವಾಗಿದ್ದು ಕಾನೂನು, ಸಂವಿಧಾನದ ವ್ಯಾಪ್ತಿಯಲ್ಲಿ ಚರ್ಚೆ ಆಗಬೇಕು ಎಂದರು.

ಈ ಕುರಿತು ಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು, ಕಾನೂನು ತಜ್ಞರು ಹಿರಿಯರ ಜೊತೆಗೆ ಚರ್ಚೆ ಮಾಡಬೇಕಾಗಿದೆ. ಯಾವುದೇ ರೀತಿಯ ಕಾನೂನು ತೊಡಕುಗಳು ಆಗದಂತೆ ನೋಡಿಕೊಳ್ಳಬೇಕು. ಕಾನೂನು, ಸಂವಿಧಾನ ಇದ್ದು. ನಾವು ಮಾತು ಕೊಟ್ಟಿದ್ದೇವು. ಕಾಂಗ್ರೆಸ್ ಈ ಕುರಿತು ಓಪನ್ ಮೈಂಡ್ ಇದೆ. ಯಾವುದೇ ರೀತಿಯ ಅನುಮಾನ ಬೇಡ. ಸದಾಶಿವ ಆಯೋಗ ವರದಿ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿದರು.

ಡಾ. ಸದಾಶಿವ ಆಯೋಗ ಜಾರಿಯಲ್ಲಿ ಶಾಸಕರ ಮನೆ ಮುಂದೆ ಒತ್ತಾಯ ಮಾಡಿ ಪ್ರತಿಭಟನೆಗೆ ಸಚಿವ ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮುನಿಯಪ್ಪನವರು ನಮ್ಮ ಹಿರಿಯ ನಾಯಕರು ಅವರು ಯಾವ ಆಧಾರದ ಮೇಲೆ ಹಾಗೂ ಯಾವ ಸಂದರ್ಭದಲ್ಲಿ ಹೇಳಿದ್ದಾರೆ. ಗೊತಿಲ್ಲ ನೋಡೋಣ ಆ ಕುರಿತು ಮಾತನಾಡುವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+