Get Updates
Get notified of breaking news, exclusive insights, and must-see stories!

ಧಾರವಾಡದಲ್ಲೂ ಜನಿವಾರಕ್ಕೆ ಕತ್ತರಿ: ಸಚಿವ ಸಂತೋಷ ಲಾಡ್ ಹೇಳಿದ್ದೇನು?

ಧಾರವಾಡ, ಏಪ್ರಿಲ್‌ 21: ಧಾರವಾಡ ಜಿಲ್ಲೆಯ ಇಲ್ಲಿಯ ಹುರಕಡ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಿಸಿಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ ಲಾಡ್, ನಾವು ಆಧುನಿಕ ಯುಗದಲ್ಲಿದ್ದೇವೆ. ಇದೊಂದು ಗಂಭೀರ ವಿಷಯ. ಯಾರು ಜನಿವಾರ ಕತ್ತರಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸ್‌ ಇಲಾಖೆ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತದೆ. ಜಿಲ್ಲಾಡಳಿತಕ್ಕೂ ಈಗಾಗಲೇ ಸೂಚಿಸಲಾಗಿದೆ ಎಂದರು.

Minister Santosh Lad React On Scissors For Janivara In Dharwad

ಜನಿವಾರ ಕತ್ತರಿಸಿದ ವಿಷಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆಯನ್ನೇ ನೀಡುತ್ತಿಲ್ಲ ಎನ್ನುವ ಶಾಸಕ ಅರವಿಂದ ಬೆಲ್ಲದ್‌ ಆರೋಪಕ್ಕೆ ಉತ್ತರ ನೀಡಿದ ಸಚಿವ ಸಂತೋಷ್‌ ಲಾಡ್, ಅರವಿಂದ ಬೆಲ್ಲದ್‌ ಅವರೇ ಹೋಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಬಗ್ಗೆ ಪ್ರತಿಕ್ರಿಯೆ ಕೇಳಲಿ. ಖಂಡಿತಾ ಸಿಎಂ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಜನಿವಾರ ತೆರವಿಗೆ ಆಗ್ರಹ: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

ಹುಬ್ಬಳ್ಳಿ: ಕಳೆದ ಕೆಲ ದಿನಗಳ ಹಿಂದೆ ನಡೆದ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜು ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಹುಬ್ಬಳ್ಳಿ ಧಾರವಾಡ ರಾಜ್ಯ ರಸ್ತೆ ತಡೆದು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಲಾಯಿತು.

Minister Santosh Lad React On Scissors For Janivara In Dharwad

ಹುಬ್ಬಳ್ಳಿಯ ಬಿವಿಬಿ ಕಾಲೇಜು ಬಳಿ ನೂರಾರು ವಿದ್ಯಾರ್ಥಿಗಳು ಒಂದು ಗಂಟೆಗಳ ಕಾಲ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ ಧಾರವಾಡ ರಸ್ತೆ ತಡೆದು, ರಾಜ್ಯ ಸರ್ಕಾರ ಒಂದು ಜಾತಿ ಹಾಗೂ ಒಂದು ಧರ್ಮ ಪರವಾಗಿ ಇದೆ ಎಂದು ಕಿಡಿಕಾರಿದರು.

Take a Poll

ರಸ್ತೆ ತಡೆ ಮಾಡಿ ಘೋಷಣೆ ಕೂಗಿ ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವ ರೀತಿ ವರ್ತಿಸುತ್ತಿದೆ. ಕೆಲ ಸಮುದಾಯಗಳನ್ನು ಟಾರ್ಗೆಟ್ ಮಾಡುತ್ತಿದೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪ ಮಾಡಿದರು. ಅಲ್ಲದೇ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ನಿರತ ಎಬಿವಿಪಿ ಸದಸ್ಯರು ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಈ ಪ್ರಕರಣದಲ್ಲಿ ತಪ್ಪಿತಸ್ಥರ ಮೇಲೆ ಕೂಡ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+