ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಬಹಿರಂಗ ಎಚ್ಚರಿಕೆ ಕೊಟ್ಟ ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ, ಅಕ್ಟೋಬರ್‌ 31: ಹುಬ್ಬಳ್ಳಿ- ಧಾರವಾಡ ಮಹಾನಗರ ಕಾಂಗ್ರೆಸ್‌ ಸಮಿತಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಕಾಂಗ್ರೆಸ್‌ ಶಾಸಕ ಪ್ರಸಾದ್ ಅಬ್ಬಯ್ಯ ಗರಂ ಆದ ಬೆನ್ನಲ್ಲೇ ಧಾರವಾಡ ಜಿಲ್ಲಾ ಕಾಂಗ್ರೆಸ್‌ ಪಕ್ಷದ ವಿರೋಧಿಗಳ ನಿದ್ದೆಗೆಡಿಸಿದೆ.

ಒಂದು ಕಡೆ ರಾಜ್ಯ ನಾಯಕರ ನಡುವೆ ಬಂಡಾಯ, ಇತ್ತ ಸ್ಥಳೀಯವಾಗಿಯೂ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್‌ನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ಕೆಲ ಬ್ಲಾಕ್ ಸಮಿತಿಯ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ನಾಯಕರ ವಿರುದ್ಧ ಪರೋಕ್ಷವಾಗಿ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಅಬ್ಬಯ್ಯ ಅಸಮಾಧಾನ‌ ವ್ಯಕ್ತಪಡಿಸಿದ್ದಾರೆ.

MLA Prasad Abbayya Give An Open Warning To Those Doing Anti-Party Activities

ರಾಹುಲ್ ಗಾಂಧಿ 2024 ಹಾಗೂ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಬೆನ್ನಲ್ಲೇ ಸಾಕಷ್ಟು ಆಕ್ರೋಶಕ್ಕೆ ಸಹ ಕಾರಣವಾಗಿದೆ.

ಪದಾಧಿಕಾರಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ನಂತರ ಒಂದು ಕಡೆ ಭಿನ್ನಮತ ಸ್ಫೋಟಆಗಿದ್ದು ಇನ್ನೊಂದು ಕಡೆ ಶಾಸಕರ ನಡೆ ಕುರಿತು ಸಹ ಕಾರ್ಯಕರ್ತರಲ್ಲಿ ಒಳೊಳಗೆ ಆಕ್ರೋಶಕ್ಕೆ ಕಾರಣವಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ನಾನು ಬಿಡುವುದಿಲ್ಲ ಎಂದು ನೇರವಾಗಿ ಎಚ್ಚರಿಕೆ ನೀಡಿದ ಶಾಸಕ ಅಬ್ಬಯ್ಯಾ ಅಬ್ಬಯ್ಯ. ಪಕ್ಷದಲ್ಲಿ ಇದ್ದು ದ್ರೋಹ‌ ಮಾಡಿದವರನ್ನು ನಾನು ಕ್ಷಮಿಸುವುದಿಲ್ಲ. ಅವರನ್ನು ನಾನು ಪಕ್ಷದಲ್ಲಿ‌ ಉಳಿಸಿಕೊಳ್ಳುವುದಿಲ್ಲ ಎಂದಿದ್ದು ಮುಂದಿನ ಬೆಳವಣಿಗೆ ಸಹ ಸಾಕಷ್ಟು ಕುತೂಹಲ ಮೂಡಿಸಿದೆ.

ಕೆಲ‌ ಕಾರ್ಪೋರೇಟರ್‌ಗಳು ಭಾರತೀಯ ಜನತಾ ಪಕ್ಷದ ನಾಯಕರ ಸಂಪರ್ಕದಲ್ಲಿರುವ ಹಿನ್ನಲೆಯಲ್ಲಿ ಶಾಸಕ ಅಬ್ಬಯ್ಯ ಗರಂ ಆಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಪಕ್ಷ ವಿರೋಧ ಚಟುವಟಿಕೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ನಮ್ಮ ಪಕ್ಷದಲ್ಲಿದ್ದು ದ್ರೋಹ ಮಾಡಿದರೆ, ಇಲ್ಲೇ ಮುಗಿಸ್ತೀವಿ ಎಂದ ಅಬ್ಬಯ್ಯ, ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿ ಕೆಲವರು ಮೋಸ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಕೆಲವರು ತಿಂದ ಮನೆಗೆ ಎರಡು ಬಗೆದಿದ್ದಾರೆ. ಅಂತವರನ್ನು ಪಕ್ಷದಲ್ಲಿ ಇರೋಕೆ ನಾನು‌ ಬಿಡಲ್ಲ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಬ್ಬಯ್ಯ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+