ಎಂ.ಎಂ.ಕಲಬುರ್ಗಿ ಹತ್ಯೆ, ಶಂಕಿತರ ರೇಖಾಚಿತ್ರ ಬಿಡುಗಡೆ

ಧಾರವಾಡ, ಸೆ. 02 : ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತೀವ್ರಗೊಳಿಸಿದ್ದು, ಧಾರವಾಡದಲ್ಲಿನ ಕಲಬುರ್ಗಿ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದೆ.

ಆ.30ರ ಭಾನುವಾರ ಬೆಳಗ್ಗೆ 8.40ರ ಸುಮಾರಿಗೆ ಧಾರವಾಡದ ಕಲ್ಯಾಣ ನಗರದ ನಿವಾದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಮೊದಲು ಧಾರವಾಡ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. [ಕಲಬುರ್ಗಿ ಹತ್ಯೆ : ಮಹತ್ವದ ಸುಳಿವು ಲಭ್ಯ]

dharwad

ಬುಧವಾರ ಹುಬ್ಬಳ್ಳಿ-ಧಾರವಾಡ ಪೊಲೀಸರು ಶಂಕಿತ ಆರೋಪಿಗಳ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಪ್ರಾಥಮಿಕ ತನಿಖೆ, ಸಾಕ್ಷಿಗಳ ಹೇಳಿಕೆ ಮುಂತಾದವುಗಳ ಆಧಾರದ ಮೇಲೆ ರೇಖಾಚಿತ್ರವನ್ನು ರಚಿಸಿ ಬಿಡುಗಡೆ ಮಾಡಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಜನರ ಸಹಕಾರ ಕೋರಿದ್ದಾರೆ. [ಹತ್ಯೆ ಕೇಸ್ : ಕೊಲ್ಹಾಪುರಕ್ಕೆ ಸಿಬಿಐ ತಂಡ]

ಸಂಪರ್ಕಿಸಬೇಕಾದ ಸಂಖ್ಯೆ : ಚಿತ್ರದಲ್ಲಿರುವ ಆರೋಪಿಗಳ ಬಗ್ಗೆ ಸುಳಿವು ಸಿಕ್ಕರೆ ಸಾರ್ವಜನಿಕರು ವಿದ್ಯಾಗಿರಿ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆಗಳು 0836-2233513, 9480802034. ಹುಬ್ಬಳ್ಳಿ ನಗರ ನಿಯಂತ್ರಣ ಕೊಠಡಿ 0836-2233555

ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಬಗ್ಗೆ ಕರ್ನಾಟಕದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಹತ್ಯೆಯ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಿದೆ. ಸರ್ಕಾರ ಈ ಕುರಿತು ಸಿಬಿಐಗೆ ಪತ್ರ ಬರೆದಿದೆ. ಸಿಬಿಐ ತನಿಖೆಗೆ ಒಪ್ಪಿಗೆ ನೀಡಿದರೆ ಪ್ರಕರಣವನ್ನು ಹಸ್ತಾಂತರ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+