ಮಾದರಿ ನೀತಿ ಸಂಹಿತೆ ಜಾರಿ: ಧಾರವಾಡ ಜಿಲ್ಲೆಯಲ್ಲಿ ಕಟ್ಟೆಚ್ಚರ: ವಿವರ ಇಲ್ಲಿದೆ
ಧಾರವಾಡ, ಮಾರ್ಚ್, 30: ರಾಜ್ಯ ವಿಧಾನಸಭಾ ಚನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 29ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಒಟ್ಟು 15,07,414 ಮತದಾರರು ಇದ್ದಾರೆ. 7,57,522 ಪುರುಷ, 7,49,807 ಮಹಿಳಾ ಹಾಗೂ 85 ಜನ ಇತರೆ ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ 26,426 ಯುವ ಮತದಾರರಿದ್ದಾರೆ ಎಂದರು.

21,036 ಜನ ವಿಕಲಚೇತನ ಮತದಾರರು, 32,301 ಜನ 80 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. ಜೊತೆಗೆ 400 ಜನ 100 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 24 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1636 ಮತಗಟ್ಟೆಗಳ ಸ್ಥಾಪನೆಯಾಗಲಿದ್ದು, ಇದರಲ್ಲಿ 944 ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿ, 692 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಇರಲಿವೆ. ಆ ಪೈಕಿ 216 ಸೂಕ್ಷ್ಮ ಹಾಗೂ 162 ಅತೀ ಸೂಕ್ಷ್ಮ ಮತಗಟ್ಟೆಗಳು ಇರಲಿವೆ ಎಂದರು.
ಅಕ್ರಮ ಹಣ ವಶಕ್ಕೆ
ಧಾರವಾಡ ಜಿಲ್ಲೆಯಲ್ಲಿ ಈವರೆಗೂ 80,32,070 ಅಕ್ರಮ ಹಣ ವಶಕ್ಕೆ ಪಡೆಯಲಾಗಿದೆ. 1061.75 ಲೀಟರ್ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. 4.49 ಕೆ.ಜಿ. ಗಾಂಜಾ, 12,562 ಅಕ್ರಮ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಒಬ್ಬ ರಾಜಕೀಯ ಅಭ್ಯರ್ಥಿ 40 ಲಕ್ಷದವರೆಗೆ ಖರ್ಚು ಮಾಡಬಹುದಾಗಿದೆ. ಅಲ್ಲದೇ ರಾಜಕೀಯ ವ್ಯಕ್ತಿಗಳು ನಿಗದಿತ ಸ್ಥಳದಲ್ಲಿ ಬ್ಯಾನರ್, ಹೋಲ್ಡಿಂಗ್ಸ್ ಹಾಕಬೇಕೆಂದರೆ ಪರವಾನಗಿ ಪಡೆಯಬೇಕು ಎಂದು ಸೂಚಿಸಿದರು.

ನಾಮಪತ್ರ ಸಲ್ಲಿಕೆಯ ವಿವರ
ಏಪ್ರಿಲ್ 13 ನಾಮಪತ್ರ ಸಲ್ಲಿಕೆ ಆರಂಭ ಆಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಇನ್ನು ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಜಿಲ್ಲೆಯ ಏಳೂ ಕ್ಷೇತ್ರಗಳ ಮತ ಎಣಿಕೆ ಧಾರವಾಡ ಕೃಷಿ ವಿವಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಧಾರ್ಮಿಕ ಕೇಂದ್ರಗಳನ್ನು ರಾಜಕೀಯ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡುವಂತಿಲ್ಲ. ಅಲ್ಲದೇ ರಾತ್ರಿ 10 ಗಂಟೆ ನಂತರ ಪ್ರಚಾರ ಕೂಡ ಮಾಡುವಂತಿಲ್ಲ ಎಂದರು. ನವಲಗುಂದ ತಾಲೂಕಿನ ನಾಮಪತ್ರಗಳನ್ನು ನವಲಗುಂದ ತಹಶೀಲ್ದಾರ್ ಕಚೇರಿ, ಕುಂದಗೋಳ ತಾಲೂಕಿನ ನಾಮಪತ್ರಗಳನ್ನು ಕುಂದಗೋಳ ತಹಶೀಲ್ದಾರ್ ಕಚೇರಿಯಲ್ಲಿ, ಧಾರವಾಡದ ಕ್ಷೇತ್ರಗಳ ನಾಮಪತ್ರಗಳನ್ನು ಧಾರವಾಡ ತಹಶೀಲ್ದಾರ್ ಕಚೇರಿಯಲ್ಲಿ ಪಡೆಯಲಾಗುತ್ತದೆ.
ಹಾಗೆಯೇ ಹುಬ್ಬಳ್ಳಿ ಪೂರ್ವ ಕ್ಷೇತ್ರದ ನಾಮಪತ್ರಗಳನ್ನು ಹುಬ್ಬಳ್ಳಿ ತಹಶೀಲ್ದಾರ ಕಚೇರಿಯಲ್ಲಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ನಾಮಪತ್ರಗಳನ್ನು ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿಯಲ್ಲಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ನಾಮಪತ್ರಗಳನ್ನು ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ, ಕಲಘಟಗಿ ಕ್ಷೇತ್ರದ ನಾಮಪತ್ರಗಳನ್ನು ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಪಡೆಯಲಾಗುತ್ತದೆ ಎಂದರು.
ಇನ್ನು ಧಾರವಾಡದ ನೆಹರೂ ನಗರದಲ್ಲಿ ಹಮ್ಮಿಕೊಂಡಿದ್ದ ಆಶ್ರಯ ಮನೆ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. 250 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಸಕ ಅರವಿಂದ ಬೆಲ್ಲದ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು.
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕವೂ ಹಕ್ಕುಪತ್ರಗಳನ್ನು ವಿತರಣೆ ಮಾಡುವ ಕೆಲಸ ನಡೆದಿತ್ತು. ವಿಷಯ ತಿಳಿದ ಕೂಡಲೇ ಮಾಧ್ಯಮದವರು ಸ್ಥಳಕ್ಕೆ ಹೋದ ನಂತರ ತರಾತುರಿಯಲ್ಲಿ ಪೆಂಡಾಲ್‌ನ್ನು ಕೀಳಲಾಯಿತು. ಬಿಜೆಪಿ ಕಾರ್ಯಕರ್ತರೇ ಈ ಹಕ್ಕುಪತ್ರಗಳನ್ನು ವಿತರಣೆ ಮಾಡುತ್ತಿದ್ದರು. ಮಾಧ್ಯಮದವರು ಸ್ಥಳಕ್ಕೆ ಹೋಗುವಷ್ಟರಲ್ಲಿ 150 ಜನ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿತ್ತು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications