ಧಾರವಾಡ: ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಟೂರ್ನಿಗೆ ಚಾಲನೆ ನೀಡಿದ ಮಾಜಿ ಕ್ರಿಕೆಟಿಗ ಮೊಹ್ಮದ್ ಅಜರುದ್ದೀನ್

ಧಾರವಾಡ, ಅಕ್ಟೋಬರ್‌, 17: ಧಾರವಾಡ ಜಿಲ್ಲಾ ಟೆನಿಸ್ ಕ್ರೀಡಾಂಗಣದಲ್ಲಿ ಜಿಲ್ಲಾ ಟೆನಿಸ್ ಅಸೋಸಿಯೇಶನ್ ವತಿಯಿಂದ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಪಂದ್ಯಾವಳಿಗೆ ಮಾಜಿ ಕ್ರಿಕೆಟಿಗ ಮೊಹ್ಮದ್ ಅಜರುದ್ದೀನ್ ಚಾಲನೆ ನೀಡಿದರು.

ಇಂದಿನಿಂದ 5 ದಿನಗಳ ಕಾಲ ಈ ಟೆನಿಸ್ ಟೂರ್ನಿಮೆಂಟ್ ನಡೆಯಲಿದ್ದು, ವಿಶ್ವದ ಅಗ್ರಮಾನ್ಯ ಕ್ರೀಡಾಪಟುಗಳು ಈ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಾಜಿ ಕ್ರಿಕೆಟ್ ಆಟಗಾರ ಮೊಹ್ಮದ್ ಅಜರುದ್ದೀನ್ ಅವರು ಟೆನಿಸ್ ಆಡುವ ಮೂಲಕ ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್ ಸಾಥ್ ನೀಡಿದರು.

mohammad-azharuddin

ಈಗ ಕಾಂಗ್ರೆಸ್ ಪರ ವಾತಾವರಣ ಇದೆ

ತೆಲಂಗಾಣದಲ್ಲಿ ಈ ಸಲ ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ಮುಖಂಡ ಮಹಮ್ಮದ್ ಅಜರುದ್ದೀನ್ ಭರವಸೆ ವ್ಯಕ್ತಪಡಿಸಿದರು.

ಧಾರವಾಡದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಯತ್ನ ಹೆಚ್ಚು ವಿಶ್ವಾಸ ಮೂಡಿಸಿದೆ ಹೀಗಾಗಿ ಈ ಬಾರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಡೆದಿದೆ. ದೇಶದಲ್ಲಿ ಸದ್ಯ ಕಾಂಗ್ರೆಸ್ ಪರವಾದ ವಾತಾವರಣ ಇದೆ. ಇದರಲ್ಲಿ ಯಾವುದೇ ಸಂಶಯ ಇಲ್ಲ ಎಂದರು.

ಇನ್ನು ಕರ್ನಾಟಕದ ಗ್ಯಾರಂಟಿ ಯೋಜನೆ ತೆಲಂಗಾಣದಲ್ಲಿ ಮುಂದುವರಿಸಿದ್ದಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಜರುದ್ದೀನ್, ತೆಲಂಗಾಣ ಗ್ಯಾರಂಟಿ ಯೋಜನೆಗೂ ಕರ್ನಾಟಕದ ಯೋಜನೆಗೂ ಎರಡಲ್ಲೂ ಬಹಳಷ್ಟು ವ್ಯತ್ಯಾಸವಿದೆ. ಎರಡನ್ನು ಹೋಲಿಕೆ ಮಾಡಲು ಆಗುವುದಿಲ್ಲ. ಕರ್ನಾಟಕದಲ್ಲಿ ಒಳ್ಳೆ ಯೋಜನೆ ಕೊಟ್ಟಿದ್ದಾರೆ. ಹೀಗಾಗಿ ಇಲ್ಲಿನ ಜನ ಕಾಂಗ್ರೆಸ್‌ಗೆ ಅವಕಾಶ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಅಭಿವೃದ್ಧಿ ಕಾರ್ಯಗಳು ಚೆನ್ನಾಗಿ ಆಗುತ್ತಿವೆ ಎಂದರು.

ವಿಶ್ವಕಪ್ ಕ್ರಿಕೆಟ್ ಹಿನ್ನೆಲೆ ವಿಚಾರ ಸಂಬಂಧ ಮಾತನಾಡಿದ ಭಾರತ ತಂಡದ ಮಾಜಿ ನಾಯಕ ಅಜರುದ್ದೀನ್, ಭಾರತ ತಂಡವೇ ವಿಶ್ವಕಪ್ ಗೆಲ್ಲುತ್ತದೆ. ನಮ್ಮದು ಒಳ್ಳೆಯ ತಂಡ ಇದೆ. ಅನುಭವಿ ಕ್ಯಾಪ್ಟನ್ ಇದ್ದಾರೆ. ಹೀಗಾಗಿ ಈ ಬಾರಿ ನಮ್ಮ ತಂಡವೇ ವಿಶ್ವಕಪ್ ಗೆಲ್ಲಲಿದೆ ಎಂದರು. ಇದೇ ವೇಳೆ ಪಾಕ್ ಆಟಗಾರರು ಡ್ರೆಸಿಂಗ್ ರೂಂಗೆ ಹೋಗುವಾಗ ಜೈ ಶ್ರೀರಾಮ್ ಎಂದ ವಿಚಾರ ಸಂಬಂಧ ಕೇಳಿದೆ ಪ್ರಶ್ನೆಗೆ ಉತ್ತರಿದ ಅವರು, ಈ ತರಹದ ಘಟನೆಗಳು ಪುನರಾವರ್ತನೆ ಆಗುತ್ತಲೇ ಇವೆ. ಇಂತಹ ವಿಚಾರಗಳಿಗೆ ನಾನು ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ ಎಂದರು.

ಈ ವೇಳೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಮತ್ತಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+