ಧಾರವಾಡ : ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ

ಧಾರವಾಡ, ಮಾ.10 : ತಾಯಿಯೊಬ್ಬಳು ಇಬ್ಬರು ಮಕ್ಕಳನ್ನು ಕೊಂದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ವಿದ್ಯಾಗಿರಿ ಪೊಲೀಸರು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರನ್ನು ಮೈಲಾರಲಿಂಗ ಬಡಾವಣೆ ನಿವಾಸಿ ಗೀತಾ (32) ಎಂದು ಗುರುತಿಸಲಾಗಿದೆ. ಗೀತಾ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಕ್ಕಳಾದ ಮೇಘ (12), ಮನೋಹರ (6) ಅವರ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಕೊಂದು ಹಾಕಿದ್ದಾರೆ.

suicide

ಮಂಗಳವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು ತಕ್ಷಣ ಸ್ಥಳೀಯರು ವಿದ್ಯಾಗಿರಿ ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗೀತಾ ಪತಿ ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ. [ತಾಯಿಯ ಸಾವಿನಿಂದ ಮನನೊಂದ ಯುವಕ ಆತ್ಮಹತ್ಯೆ]

ಕೌಟುಂಬಿಕ ಕಲಹವೇ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಗೀತಾ ಮತ್ತು ಆಕೆಯ ಪತಿಯ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+