ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಪರಿಚಯ

|
Google Oneindia Kannada News

Recommended Video

ಪೌರಾಡಳಿತ ಸಚಿವರಾಗಿದ್ದ ಸಿ ಎಸ್ ಶಿವಳ್ಳಿಯವರ ಕಿರುಪರಿಚಯ | Oneindia Kannada

ಧಾರವಾಡ, ಮಾರ್ಚ್ 22 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರು ವಿಧಿವಶರಾಗಿದ್ದಾರೆ. ಶನಿವಾರ ಯುರಗುಪ್ಪಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಕುರುಬ ಸಮುದಾಯದ ಪ್ರಭಾವಿ ನಾಯಕ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿ (ಸಿ.ಎಸ್.ಶಿವಳ್ಳಿ) ಕುಂದಗೋಳ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ಪಕ್ಷಾತೀತವಾಗಿ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ

ಸಿ.ಎಸ್.ಶಿವಳ್ಳಿ ಅವರ ಕ್ಷೇತ್ರ ಕುಂದಗೋಳದಲ್ಲಿ ಸಂಜೆ 6.30ರಿಂದ 9 ಗಂಟೆಯ ತನಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಹುಟ್ಟೂರು ಯುರಗುಪ್ಪಿಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತದೆ.

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿಗೆ ತೀವ್ರ ಹೃದಯಾಘಾತ, ಆಸ್ಪತ್ರೆಗೆ ದಾಖಲುಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿಗೆ ತೀವ್ರ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಮಾ.23ರ ಶನಿವಾರ ಮಧ್ಯಾಹ್ನ ಯುರಗುಪ್ಪಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಸಚಿವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ. ಧಾರವಾಡದ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಿ.ಎಸ್.ಶಿವಳ್ಳಿ ಪರಿಚಯ

ಸಿ.ಎಸ್.ಶಿವಳ್ಳಿ ಪರಿಚಯ

* ಸಿ.ಎಸ್.ಶಿವಳ್ಳಿ ಅವರ ಪೂರ್ಣ ಹೆಸರು ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿ
* 53 ವರ್ಷ
* ಕುರುಬ ಸಮುದಾಯದ ನಾಯಕರು
* ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಶಾಸಕರು

ಮೂರು ಬಾರಿ ಗೆಲುವು

ಮೂರು ಬಾರಿ ಗೆಲುವು

* ಸಿ.ಎಸ್.ಶಿವಳ್ಳಿ ಅವರು ಬಿಎ ಪದವೀಧರರು
* ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ
* ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಖಾತೆ ಸಚಿವರಾಗಿದ್ದರು

1994ರಲ್ಲಿ ರಾಜಕೀಯ ಪ್ರವೇಶ

1994ರಲ್ಲಿ ರಾಜಕೀಯ ಪ್ರವೇಶ

ಸಿ.ಎಸ್.ಶಿವಳ್ಳಿ ಅವರು 1994ರಲ್ಲಿ ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ) ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಿದರು. ಆದರೆ, ಈ ಚುನಾವಣೆಯಲ್ಲಿ ಅವರು ಸೋಲು ಕಂಡರು. 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದರು.

ಸತತ ಎರಡು ಚುನಾವಣೆ ಗೆಲುವು

ಸತತ ಎರಡು ಚುನಾವಣೆ ಗೆಲುವು

2008ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಅವರು ಸೋಲು ಕಂಡಿದ್ದರು. ಬಳಿಕ 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಗೆದ್ದು ಬಂದಿದ್ದಾರೆ. ಕುಂದಗೋಳದ ರಾಜ್‌ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

English summary
Kundgol constituency Congress MLA and Municipalities minister C.S.Shivalli passed away in a hospital in Hubballi after he suffered from a heart attack on March 22, 2019. Here are the profile of C.S.Shivalli leader of Kuruba community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X