ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ: ನಳಿನ್‍ಕುಮಾರ್ ಕಟೀಲ್

ಧಾರವಾಡ, ಅಕ್ಟೋಬರ್ 13: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ದರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಮುಖ್ಯಮಂತ್ರಿಯಾಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.

ಧಾರವಾಡದಲ್ಲಿ ಗುರುವಾರ 'ಜನಸಂಕಲ್ಪ' ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, " ಸಿದ್ದರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಮುಖ್ಯಮಂತ್ರಿಯಾಗಿದ್ದರು, ಆದರೆ ಯಡಿಯೂರಪ್ಪ ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು, ಸೈಕಲ್ ಯಾತ್ರೆಗಳು ಮತ್ತು ಹೋರಾಟಗಳನ್ನು ಇವತ್ತು ಯಾರೂ ಮಾಡಿಲ್ಲ. ಅದು ಯಾವ ನಾಯಕರಿಂದಲೂ ಸಾಧ್ಯವೂ ಇಲ್ಲ" ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಿದ್ದರಾಮಯ್ಯ ತಮ್ಮನ್ನು ಪೊಲಿಟಿಕಲ್ ಜೋಕರ್‌ ಎಂದು ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಇವತ್ತಿನ ಸ್ಥಿತಿಗತಿಗಳನ್ನು ನೋಡಿದಾಗ ಸಿದ್ದರಾಮಯ್ಯರಿಗೆ ಕೇವಲ ಅರಳುಮರಳಲ್ಲ. ಸಿದ್ರಾಮಣ್ಣ ಅಧಿಕಾರ ಕಳಕೊಂಡು ಹುಚ್ಚರಾಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಕೆಟ್ಟ ಕೆಟ್ಟ ಶಬ್ದದಿಂದ ಏಕವಚನದಿಂದ ಮಾತನಾಡಿ ದುರಹಂಕಾರ ತೋರುತ್ತಿದ್ದಾರೆ. ಕಾಂಗ್ರೆಸ್‍ನಲ್ಲಿ ಡಿ.ಕೆ.ಶಿವಕುಮಾರ್ - ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುತ್ತಾರೆಂಬ ಭಯ ಅವರನ್ನು ಕಾಡುತ್ತಿದೆ. ಅಧಿಕಾರ ಕಳಕೊಂಡು ಹುಚ್ಚರಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದರು.

Nalin Kumar Kateel Lashes Out At Siddaramaiah in Dharwad

ರಾಹುಲ್ ಗಾಂಧಿಯವರನ್ನು ಯಡಿಯೂರಪ್ಪ ಬಚ್ಚಾ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಮೋದಿಯನ್ನು ವಿಶ್ವಗುರು ಅಲ್ಲ ಪುಕ್ಕಲು ಗುರು ಎಂದು ಪ್ರಧಾನಿ ಮೋದಿ ವಿರುದ್ಧ ಹಗುರವಾಗಿ ಮಾತನಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಸಂಸದರಷ್ಟೇ, ಕಾಂಗ್ರೆಸ್‌ಗೆ ನಾಯಕರಿರಬಹುದು. ಮೋದಿಯವರು ಈ ದೇಶದ ಪ್ರಧಾನಮಂತ್ರಿ. ಇಂದಿರಾ ಗಾಂಧಿಯವರು ಪ್ರಧಾನಿ ಆಗಿದ್ದಾಗ ಅವರನ್ನು ಬಿಜೆಪಿ ಹಿರಿಯ ಮುಖಂಡ- ವಿರೋಧ ಪಕ್ಷದ ನಾಯಕ ಅಟಲ್ ಬಿಹಾರಿ ವಾಜಪೇಯಿಯವರು ಯಾವತ್ತೂ ಏಕವಚನದಿಂದ ಟೀಕಿಸಿರಲಿಲ್ಲ. ವಿರೋಧ ಪಕ್ಷಗಳ ಮಾದರಿ ನಡವಳಿಕೆಗೆ ಅಟಲ್ ಬಿಹಾರಿ ವಾಜಪೇಯಿ ಅವರು ಮಾದರಿ. ಸಿದ್ರಾಮಣ್ಣನ ವಿರುದ್ಧ ಯಡಿಯೂರಪ್ಪರವರು ಹೇಳಿದ್ದು ಸರಿ ಇದೆ ಎಂದು ಸಮರ್ಥಿಸಿಕೊಂಡರು.

ಶಬ್ದಗಳ ಬಳಕೆ ಮಾಡುವುದನ್ನು ಸಿದ್ರಾಮಣ್ಣ ಕಲಿಯಲಿ. ಅವರು ಗೌರವಯುತವಾಗಿ ನಡೆದರೆ ಎಲ್ಲರೂ ಗೌರವದಿಂದ ನಡೆದುಕೊಳ್ಳುತ್ತಾರೆ. ಅವರು ಬೇಜವಾಬ್ದಾರಿಯಿಂದ ನಡೆದರೆ ಅನಿವಾರ್ಯವಾಗಿ ಬೇಜವಾಬ್ದಾರಿ ಉತ್ತರ ಕೊಡಬೇಕಾಗುತ್ತದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

Nalin Kumar Kateel Lashes Out At Siddaramaiah in Dharwad

ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ " ಸಿದ್ರಾಮಣ್ಣನನ್ನು ಕಂಡರೆ ನಮಗ್ಯಾಕೆ ಭಯ ಇರಬೇಕು? ಡಿಕೆಶಿ, ಪರಮೇಶ್ವರ್, ಖರ್ಗೆಗೆ ಭಯ ಇರಬೇಕು. ಅವರೆಲ್ಲರ ಭಯ ಇವರಿಗೆ, ಇವರ ಭಯ ಅವರಿಗೆ ಇದೆ" ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾಂಗ್ರೆಸ್ ಈಗ ಪಾದಯಾತ್ರೆ ಆರಂಭಿಸಿದೆ. ನಮ್ಮ ಪಕ್ಷ ಬೆಳೆದಿರುವುದೇ ಯಾತ್ರೆಯ ಮುಖಾಂತರ. ಸಿದ್ರಾಮಣ್ಣ ಯಾರ್ಯಾರದೋ ಕಾಲು ಹಿಡಿದು, ಭಿಕ್ಷೆ ಬೇಡಿ ಮುಖ್ಯಮಂತ್ರಿ ಆದವರು. ದೇವೇಗೌಡರ ಕಾಲಿಗೆ ಅಡ್ಡ ಬಿದ್ದು, ಬೆಳೆದವರು. ಮೊದಲು ಅವರ ಕಾಲಡಿಯಲ್ಲಿ ಕುಳಿತು ನಂತರ ಅವರನ್ನೇ ಕಾಲಿನಲ್ಲಿ ತುಳಿದವರು ಎಂದು ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+