Pralhad Joshi: ಪ್ರಧಾನಿ ಮೋದಿ ಬಂದ ನಂತರ ಇಡೀ ರಾಜ್ಯದ ವಾತಾವರಣವೇ ಬದಲಾಗಲಿದೆ: ಕೇಂದ್ರ ಸಚಿವ ಜೋಶಿ ಭವಿಷ್ಯ
ಧಾರವಾಡ, ಏಪ್ರಿಲ್, 27: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 12 ರ್‍ಯಾಲಿಗಳನ್ನು ನಡೆಸಲಿದ್ದಾರೆ. ಹಾಗೂ ಮೋದಿ ಬಂದ ಬಳಿಕ ರಾಜ್ಯದ ವಾತಾರಣರದಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧಾರವಾಡದಲ್ಲಿ ಹೇಳಿದರು.
ಧಾರವಾಡದ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಪರ ಪ್ರಚಾರ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಬಂದ ಬಳಿಕ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ವಾತಾವರಣ ಬದಲಾಗಲಿದೆ. ಹೀಗಾಗಿ ಕಾಂಗ್ರೆಸ್‌ನವರು ಮೈಕೈ ಪರಚಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ನಿಂದ ಯಾವುದೇ ಅಸ್ತ್ರ ಪ್ರಯೋಗ ಮಾಡಲಿ ಅಥವಾ ಯಾರ ಹೆಸರೇ ಪ್ರಸ್ತಾಪ ಮಾಡಲಿ ರಾಜ್ಯದ ಜನರಿಗೆ ಎಲ್ಲವೂ ಗೊತ್ತಿದೆ. ಜನ ಬಿಜೆಪಿ ಪರವಾಗಿದ್ದಾರೆ ಎಂದರು.

ಕಾಂಗ್ರೆಸ್‌ನವರಿಗೆ ಯಾವುದೇ ಹೆಸರು ಪ್ರಸ್ತಾಪಕ್ಕೆ ಸಿಗದೇ ಇದ್ದಾಗ ಬೇರೆ ಬೇರೆಯವರ ಹೆಸರು ತೆಗೆದುಕೊಂಡು ವಿವಾದ ಮಾಡುತ್ತಾರೆ. ಸಂತೋಷ ಜಿ ಮತ್ತು ಬೇರೆ ಬೇರೆಯವರ ಹೆಸರು ತೆಗೆದುಕೊಳ್ಳುವ ಅಗತ್ಯ ಇಲ್ಲ. ಪಕ್ಷದ ವಿದ್ಯಮಾನಗಳು ನಮ್ಮ ಪಕ್ಷದಲ್ಲೇ ನಡೆಯುತ್ತವೆ. ಯಾವುದೇ ಒಬ್ಬ ವ್ಯಕ್ತಿಯ ಮೇಲೆ ಇರುವುದಿಲ್ಲ ಎಂದರು.
ಕಾಂಗ್ರೆಸ್ ಲಿಂಗಾಯತರನ್ನು ಹೇಗೆ ನಡೆಸಿಕೊಂಡಿದೆ ಎನ್ನುವುದರ ಮೇಲೆ ವೀರೇಂದ್ರ ಪಾಟೀಲರಿಗೆ ಹೇಗೆ ಅವಮಾನ ಮಾಡಿದ್ದರು, ನಿಜಲಿಂಗಪ್ಪನವರಿಗೆ ಇಂದಿರಾ ಗಾಂಧಿ ಹೇಗೆ ಅಪಮಾನ ಮಾಡಿದ್ದರು ಎಂಬುದು ಇತಿಹಾಸ. ಹೀಗಾಗಿ ಕಾಂಗ್ರೆಸ್ ಏನೇ ಲಿಂಗಾಯತ ಅಸ್ತ್ರ ಪ್ರಯೋಗಿಸಿದರೂ ಜನ ಒಪ್ಪುವುದಿಲ್ಲ. ಜನ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆದೇಶದಂತೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಬರಲಿದೆ. ಮೋದಿಜಿ, ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಇತ್ತೀಚೆಗಷ್ಟೇ ಹೇಳಿದ್ದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ನಾಯಕರು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದರಿಂದ ಇಡೀ ರಾಜ್ಯದ ಚಿತ್ರಣವೇ ಬದಲಾಗಿದೆ. ನೂರಕ್ಕೆ ನೂರು ನಾವು ಈ ಬಾರಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯುದರಿಂದ ರಾಜ್ಯದಲ್ಲಿ ಆಳ್ವಿಕೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಳ್ಳು ಭರವಸೆ ಕೊಡುವುದನ್ನು ಬಿಡಬೇಕು. ಯಾಕೆಂದರೆ ಈ ಬಾರಿ ನೀವು ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿನೇ ಅಧಿಕಾರಕ್ಕೆ ಬರುತ್ತದೆ. ನಾವೇನು ಭರವಸೆ ಕೊಟ್ಟಿದ್ದೇವೆ ಅದನ್ನು ನಾವು ಈಡೇರಿಸು ಕೆಲಸ ಮಾಡುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯನೋ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದಿದ್ದರು.
ಕಾರ್ಯಕರ್ತರನ್ನು ಮತ್ತು ಪ್ರತಿ ಭೂತ್‌ನಲ್ಲಿ ಬಲಿಷ್ಠಗೋಳಿಸಬೇಕು. ಇನ್ನೂ 10 ದಿನ ಕಾರ್ಯಕರ್ತರು ಕೆಲಸ ಮಾಡಿದರೆ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದ್ದರು.












Click it and Unblock the Notifications