ಕಳಸಾ -ಬಂಡೂರಿ ಯೋಜನೆ : ನವಲಗುಂದ ಉದ್ವಿಗ್ನ

ಹುಬ್ಬಳ್ಳಿ, ಆಗಸ್ಟ್ 25 : ಕಳಸಾ-ಬಂಡೂರಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಬೇಕೆಂಬ ಬೇಡಿಕೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂಬ ಸುದ್ದಿ ತಿಳಿದ ಜನರು ರಸ್ತೆಗೆ ಇಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಗದಗ, ನವಲಗುಂದ, ನರಗುಂದಲ್ಲಿ ರಾತ್ರಿಯಿಂದ ಪ್ರತಿಭಟನೆ ನಡೆಯುತ್ತಿದೆ.

ಸೋಮವಾರ ರಾತ್ರಿ ನವಲಗುಂದದಲ್ಲಿ 2 ಬಸ್ಸುಗಳಿಗೆ ಬೆಂಕಿ ಹಚ್ಚಿ, 10 ಬಸ್ಸುಗಳಿಗೆ ಕಲ್ಲು ತೂರಿ ಜನರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಗುಂದದಲ್ಲಿ ಬಂದ್ ಆಚರಣೆ ಮಾಡಲಾಗಿದೆ. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. [ಮೋದಿ ಭೇಟಿ ಮಾಡಿದ ಸರ್ವಪಕ್ಷ ನಿಯೋಗ]

bus

ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ವಪಕ್ಷ ನಿಯೋಗಕ್ಕೆ ಪ್ರಧಾನಿ ಮೋದಿ ಸಕಾರಾತ್ಮಕ ಸ್ಪಂದನೆ ನೀಡಿಲ್ಲ ಎಂಬ ಸುದ್ದಿ ತಿಳಿದ ನಂತರ ನವಲಗುಂದ ತಾಲೂಕಿನ ಯಮನೂರ ಗ್ರಾಮದ ರೈತರು ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗಳನ್ನು ತಡೆದರು, 10ಕ್ಕೂ ಹೆಚ್ಚು ಬಸ್ಸುಗಳಿಗೆ ಕಲ್ಲು ತೂರಿದರು.[ಕೇಳುವವರೇ ಗತಿಯಿಲ್ಲದ ಕಳಸ ಭಂಡೂರಿ!]

ಗದಗ ಬಂದ್‌ಗೆ ಕರೆ : ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಇಂದು ವಿವಿಧ ಸಂಘಟನೆಗಳು ಗದಗ ಬಂದ್‌ಗೆ ಕರೆ ನೀಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಗದಗ, ನವಲಗುಂದ, ನರಗುಂದದಲ್ಲಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ.

ಧಾರವಾಡದಲ್ಲಿ ಭಜನೆ ಮಾಡಿದ ರೈತರು : ಸೋಮವಾರ ರಾತ್ರಿ ಹೆಬ್ಬಳ್ಳಿ ಗ್ರಾಮದ ರೈತರು ಸುಮಾರು 6 ತಾಸು ಧಾರವಾಡ ಹಾಗೂ ನವಲಗುಂದ ಹೆದ್ದಾರಿ ರಸ್ತೆ ಬಂದ್ ಮಾಡಿ, ಭಜನೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಇಂದು ಧಾರವಾಡದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಏನಿದು ಯೋಜನೆ : ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಕುಡಿಯುವ ನೀರಿನ ಅಭಾವ ನೀಗಿಸಲು ಕಳಸಾ-ಬಂಡೂರಿ ನಾಲೆಗಳನ್ನು ಮಲಪ್ರಭೆಗೆ ಜೋಡಿಸುವ ಯೋಜನೆ ಇದಾಗಿದೆ. ಗೋವಾ ಸರ್ಕಾರ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು, ವಿವಾದ ನ್ಯಾಯಾಧೀಕರಣದ ಮುಂದಿದೆ. ಯೋಜನೆ ಜಾರಿಯಾಗಲೇಬೇಕು ಎಂದು ಒತ್ತಾಯಿಸಿ ಸುಮಾರು ಒಂದು ತಿಂಗಳಿನಿಂದ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+