ಹುಬ್ಬಳ್ಳಿಯಲ್ಲಿ ಯುವಜನೋತ್ಸವ 2023: ಹೊರರಾಜ್ಯಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸ್ವಾಗತ
ಧಾರವಾಡ, ಜನವರಿ, 09: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಜನವರಿ 12 ರಿಂದ 16ರವರೆಗೂ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಜರುಗುವ ಕಾರ್ಯಕ್ರಮಗಳಿಗೆ ಶಾಸಕ ಅಮೃತ ದೇಸಾಯಿ ಅವರನ್ನು ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಈ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಈಗಾಗಲೇ ವಿವಿಧ ರಾಜ್ಯಗಳಿಂದ ಯುವಕರು ಆಗಮಿಸಿದ್ದು, ಅವರು ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ಈಗಾಗಲೇ ಶಾಸಕ ಅಮೃತ ದೇಸಾಯಿ ಅವರು, ಯುವ ಜನೋತ್ಸವಕ್ಕೆ ಬಂದಿರುವ ಯುವಕರನ್ನು ಭೇಟಿ ಮಾಡಿ ಸ್ವಾಗತಿಸಿದರು.
ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿರುವವರಿಗೆ ವಸತಿ, ಊಟ ಹಾಗೂ ಕಾರ್ಯಕ್ರಮದ ವ್ಯವಸ್ಥೆಯ ಕುರಿತು ಅಧಿಕಾರಿಗಳ ಜೊತೆ ಶಾಸಕರು ಚರ್ಚೆ ಮಾಡಿದರು.
5 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ
ಐದು ದಿನಗಳ ಕಾಲ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಯುವಕರು, ಪ್ರೇಕ್ಷಕರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಯ ಕುರಿತು ಮಾಹಿತಿ ಪಡೆದು ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಅತಿಥಿಗಳನ್ನ ಸ್ವಾಗತಿಸಲು ವಿಶೇಷ ಸಿದ್ಧತೆ
ಕರ್ನಾಟಕದ ಭವ್ಯ ಪರಂಪರೆಯನ್ನು ಮತ್ತು ಉತ್ತರ ಕರ್ನಾಟಕದ ವಿಶೇಷತೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾಡಳಿತವು ಅತಿಥಿಗಳನ್ನು ಸ್ವಾಗತಿಸಲು ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಇದರ ಜವಾಬ್ದಾರಿ ನಿರ್ವಹಿಸುತ್ತಿರುವ ಹುಡಾ ಆಯುಕ್ತ ಡಾ.ಸಂತೋಷಕುಮಾರ್ ಬಿರಾದಾರ ನೇತೃತ್ವದ ಹುಡಾ ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿರುವ ಸ್ವಾಗತ ಸಮಿತಿಯು ಕಳೆದ ಒಂದು ವಾರದಿಂದ ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ ಹಾಗೂ ಗಿರೀಶ ಪದಕಿ ನಿರಂತರವಾಗಿ ಮಾರ್ಗದರ್ಶನ ಮಾಡುತ್ತಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications