ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ: ಯುವಜನೋತ್ಸವಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಅಕ್ಷಯ್‌ ಕುಮಾರ್‌ಗೆ ಆಹ್ವಾನ ಕೊಟ್ಟ ಜೋಶಿ

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ, ಡಿಸೆಂಬರ್‌, 26: ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 12 ರಂದು ಮಧ್ಯಾಹ್ನ 1:30ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟರಿಗೂ ಆಹ್ವಾನ ನೀಡಲಾಗುತ್ತಿದೆ ಎಂದ ಜೋಶಿ, ಸ್ಥಳದಲ್ಲೇ ನಟ ಅಕ್ಷಯಕುಮಾರ್ ಅವರಿಗೆ ಕರೆ ಮಾಡಿ ಯುವ ಜನೋತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಪ್ರಧಾನಮಂತ್ರಿಗಳು ಆಗಮಿಸುತ್ತಿರುವುದರಿಂದ ನೀವೂ ಕಾರ್ಯಕ್ರಮಕ್ಕೆ ಬರಬೇಕು ಎಂದು ಜೋಶಿ ಮನವಿ ಮಾಡಿದರು. ಆದರೆ, ಅಕ್ಷಯ್‌ ಕುಮಾರ್‌ ಅವರು ಲಂಡನ್‌ಗೆ ಹೊರಟಿರುವುದಾಗಿ ಹೇಳಿದ್ದಾರೆ.

ಕೊರೊನಾ ಮಾರ್ಗಸೂಚಿ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸುತ್ತಿದೆ-ಪ್ರಹ್ಲಾದ್‌ ಜೋಶಿಕೊರೊನಾ ಮಾರ್ಗಸೂಚಿ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸುತ್ತಿದೆ-ಪ್ರಹ್ಲಾದ್‌ ಜೋಶಿ

ಧಾರವಾಡಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ

ಪೋಸ್ಟ್ ಕೋವಿಡ್ ನಂತರ ಮೊದಲ ಬಾರಿಗೆ ಮೋದಿ ಅವರು ಧಾರವಾಡಕ್ಕೆ ಆಗಮಿಸಲಿದ್ದಾರೆ. ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕವಿವಿಯಲ್ಲಿ ಇವೆಂಟ್ ನಡೆಯುತ್ತದೆ. ಉದ್ಘಾಟನೆ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮಗೊಂಡಿಲ್ಲ. ಅವಳಿನಗರದ ಎಲ್ಲ ಕಡೆಯೂ ವೇದಿಕೆ ಮಾಡಲಿದ್ದೇವೆ. ಅಲ್ಲದೇ ಐಐಟಿ ಉದ್ಘಾಟನೆ, ಹುಬ್ಬಳ್ಳಿ ರೈಲ್ವೆ ಫ್ಲಾಟ್‌ಫಾರ್ಮ್ ಸೇರಿ ಹಲವು ಉದ್ಘಾಟನಾ ಕಾರ್ಯಕ್ರಮಗಳೂ ಅಂದು ಮೋದಿ ಅವರಿಂದ ನಡೆಯಲಿವೆ ಎಂದು ಜೋಶಿ ಮಾಹಿತಿ ನೀಡಿದರು.

National youth program at dharwad, Pralhad Joshi invited Akshay kumar

ಪ್ರಲ್ಹಾದ್‌ ಜೋಶಿಯಿಂದ ಮೈದಾನಗಳ ಪರಿಶೀಲನೆ

ಧಾರವಾಡದ ವಿವಿಧ ಮೈದಾನಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಧಾರವಾಡದ ಕೆಸಿಡಿ ಮೈದಾನ, ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚೆನ್ನಮ್ಮ ಮೈದಾನ, ಗೋಲ್ಡನ್ ಜ್ಯುಬಿಲಿ ಹಾಲ್ ಸೇರಿದಂತೆ ಹಲವು ಕಡೆ ಭೇಟಿ ನೀಡಿದ ಸಚಿವರು, ನಂತರ ಯಾವ ಜಾಗದಲ್ಲಿ ಯುವ ಜನೋತ್ಸವ ಕಾರ್ಯಕ್ರಮ ಮಾಡಬೇಕು ಎಂಬುದರ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ.

National youth program at dharwad, Pralhad Joshi invited Akshay kumar

ಪ್ರಧಾನಿ ಮೋದಿ ಅವರೇ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಯಾವ ಮೈದಾನದಲ್ಲಿ ಕಾರ್ಯಕ್ರಮ ಮಾಡಿದರೆ ಸೂಕ್ತ ಎಂಬುದರ ಬಗ್ಗೆ ಸಚಿವ ಜೋಶಿ ಅವರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಜೋಶಿ ಅವರೊಂದಿಗೆ ಶಾಸಕರಾದ ಅರವಿಂದ ಬೆಲ್ಲದ್‌, ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೂಡ ವಿವಿಧ ಮೈದಾನಗಳಿಗೆ ಭೇಟಿ ನೀಡಿದ್ದರು.

English summary
National youth program at dharwad From January 12th to 16th, Union minister Pralhad Joshi invited bollywood actor Akshay kumar, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X