Get Updates
Get notified of breaking news, exclusive insights, and must-see stories!

ಯೋಗೀಶ್​ ಗೌಡ ಕೊಲೆ ಕೇಸ್​: ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ

ಹುಬ್ಬಳ್ಳಿ, ಮೇ 07: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣದ ವಿಚಾರವಾಗಿ ನ್ಯಾಯಾಲಯದ ಆದೇಶದ ಮೇರೆಗೆ ಕ್ಷೇತ್ರದಿಂದ ಹೊರಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅವಕಾಶ ಇಲ್ಲದಾಗಿದೆ.

ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತು. ಈ ಮೂಲಕ ಕಳೆದ ವಿಧಾನಸಭಾ ಚುನಾವಣೆ (2023) ಮತ್ತು ಇಂದಿನ ಲೋಕಸಭಾ ಚುನಾವಣೆ ಸೇರಿ ಎರಡು ಭಾರಿ ಮತದಾನಕ್ಕೆ ಅವಕಾಶ ಇಲ್ಲದಾಗಿದೆ.

No Entry For Vinay Kulkarni to Voting of Dharwad Lok Sabha Election 2024

ಧಾರವಾಡ ಸೇರಿದಂತೆ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಇಂದು (ಮೇ 7) ಮಂಗಳವಾರ ಮತದಾನ ನಡೆಯುತ್ತಿದೆ. ಈ ಪ್ರಯುಕ್ತ ಇಂದು ಒಂದು ದಿನ ಸೀಮಿತವಾಗಿ ಧಾರವಾಡಕ್ಕೆ ಪ್ರವೇಶ ಕೋರಿದ್ದರು. ಆದರೆ ವಿನಯ್ ಕುಲಕರ್ಣಿಯವರಿಗೆ ಸುಪ್ರೀಂಕೋರ್ಟ್ ಸಹ ನಿರ್ಬಂಧ ಹೇರಿತ್ತು.

ಪ್ರಕರಣದಿಂದ ಹೊರ ಬರುವ ಯತ್ನ ವಿಫಲ

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಇವರು ಸೆರೆವಾಸ ಅನುಭವಿಸಿ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ ಕುಲಕರ್ಣಿಗೆ ರಿಲೀಫ್ ಸಿಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಆ ಪ್ರಕರಣದಿಂದ ಹೊರ ಬರಲು ಅವರು ನಡೆಸುತ್ತಿರುವ ಸರ್ವ ಪ್ರಯತ್ನಗಳು ವಿಫಲವಾಗಿದೆ.

2016 ರಲ್ಲಿ ಯೋಗೇಶ್ ಗೌಡ ಹತ್ಯೆ

2016 ರ ಜೂನ್ 15 ರಂದು ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿನ ಜಿಮ್​ನಲ್ಲಿ ಯೋಗೇಶ್ ಗೌಡ ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಕ್ಕೆ ಸಂಬಂಧಿಸದಂತೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.

No Entry For Vinay Kulkarni to Voting of Dharwad Lok Sabha Election 2024

ವಿನಯ್ ಕುಲಕರ್ಣಿಗೆ ಕೋರ್ಟ್ ಶಾಕ್

ಈ ಬಗ್ಗೆ ವಾದ-ಪ್ರತಿವಾದ ನಡೆದು ಬೆಂಗಳೂರು ಹೈಕೋರ್ಟ್​ನ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.

ಅದರ ತೀರ್ಪನ್ನು ಸೋಮವಾರ ಪ್ರಕಟಿಸಲಾಗಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯ ಮೂರು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿತ್ತು. ಇದರಿಂದಾಗಿ ವಿನಯ ಕುಲಕರ್ಣಿಗೆ ದೊಡ್ಡ ಶಾಕ್ ಎದುರಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+