ಪಕ್ಷಾಂತರ ಎನ್ನುವುದು ರಾಜಕೀಯದ ದೌರ್ಭಾಗ್ಯ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಆಗಸ್ಟ್‌ 27: ಭಾರತೀಯ ಜನತಾ ಪಕ್ಷದ ಯಾವೊಬ್ಬ ಶಾಸಕರು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿ ಭಾನುವಾರ ಉಣಕಲ್‌ನಲ್ಲಿನ ಖಾಸಗಿ ಕಾಲೇಜಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ನಂತರ ಸುದ್ದಿಗಾರರ ಜೊತೆ ಮಾತನಾಡಿದರು ಅವರು, ಭಾರತೀಯ ಜನತಾ ಪಕ್ಷದ ಶಾಸಕರಾಗಲಿ, ಪ್ರಮುಖರಾಗಲಿ ಹಾಗೂ ಎರಡನೇ ವರ್ಗದ ನಾಯಕರು ಕಾಂಗ್ರೆಸ್‌ಗೆ ಹೋಗುತ್ತಿಲ್ಲ. ಅಲ್ಲಿ ಇಲ್ಲಿ ಕೆಲವೊಬ್ಬರು ಹೋಗುತ್ತಿದ್ದಾರೆ. ರಾಜಕೀಯದಲ್ಲಿ ಇದು ಅತ್ಯಂತ ಸಹಜ ಪ್ರಕ್ರಿಯೆ ಆಗಿರುವು ದುರ್ದೈವ ಎಂದು ಕಳವಳ ವ್ಯಕ್ತಪಡಿಸಿದರು.

No One From BJP Has Going To Congress: Central Minister Pralhad Joshi

ಇನ್ನು ರಾಜ್ಯ ಮತ್ತು ದೇಶದಲ್ಲಿ ಭಾರತೀಯ ಜನತಾ ಪಕ್ಷ ಅತ್ಯಂತ ಸದೃಢವಾಗಿದೆ. ಇನ್ನು ಕರ್ನಾಟಕದಲ್ಲಿಯೂ ಈ ಬಾರಿ 25 ಸ್ಥಾನಗಳನ್ನು ಗೆಲ್ಲುತ್ತೇವೆ. ಒಂದೆರಡು ಸ್ಥಾನಗಳು ಆ ಕಡೆ ಈ ಕಡೆ ಆಗಬಹುದು ಅಷ್ಟೇ. ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆದು ಅಧಿಕಾರಕ್ಕೆ ಬಂದಿದ್ದು, ಅದು ಜನತೆಗೆ ಮನವರಿಕೆಯಾಗಿದೆ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕೊಡುತ್ತೇವೆ ಅಂತ ಹೇಳಿ ವಿದ್ಯುತ್ ಇಂದಲೇ ಮುಕ್ತಿ ಮಾಡುತ್ತಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಮತ್ತೊಮ್ಮೆ ನಾವು ಅಧಿಕಾರಕ್ಕೆ ಬರುತ್ತೇವೆ ಇದರಲ್ಲಿ ಯಾವುದೇ ಸಂದೇಹ ಬೇಡ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ್ ಸೇರಿ ಐದು ರಾಜ್ಯಗಳಲ್ಲಿಯೂ ನಾವು ಗೆಲ್ಲುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಹಲವಾರು ಭಾರತೀಯ ಜನತಾ ಪಕ್ಷದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವೈಯಕ್ತಿಕ ಕೆಲಸಗಳಾಗಿ ಅವರು ಭೇಟಿ ನೀಡಿರಬಹುದು. ಅವರು ಸಹ ಅದನ್ನೇ ಹೇಳಿದ್ದಾರೆ ಆದ್ದರಿಂದ ಆಪರೇಷನ್ ಹಸ್ತದ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

No One From BJP Has Going To Congress: Central Minister Pralhad Joshi

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ವಿಚಾರ ಕುರಿತು ಸಹ ಮಾತನಾಡಿದ ಅವರು ಅಮಿತ್ ಶಾ ಕರೆ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದರು. ಇನ್ನು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಶಿವಲೀಲಾ ಕುಲಕರ್ಣಿ ಕೈ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ನನ್ನ ವಿರುದ್ಧ ಯಾರಾದರೂ ಒಬ್ಬರು ಸ್ಪರ್ಧೆ ಮಾಡುತ್ತಾರೆ ಅದರ ಬಗ್ಗೆ ನಾನೇನು ಹೇಳಲಿ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+