ಮೋದಿ ನಾಲ್ಕು ಸಮಾವೇಶಕ್ಕೆ ಯಾವುದೇ ಶುಲ್ಕವಿಲ್ಲ

ಹುಬ್ಬಳ್ಳಿ, ಫೆ.1 : ಫೆಬ್ರವರಿಯಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ನಾಲ್ಕು ಸಮಾವೇಶಗಳಿಗೆ ಯಾವುದೇ ಶುಲ್ಕ ನಿಗದಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದಾವಣಗೆರೆಮ ಮಂಗಳೂರು, ಗುಲ್ಬರ್ಗ ಮತ್ತು ಹುಬ್ಬಳ್ಳಿಯಲ್ಲಿ ಸಮಾವೇಶಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಮಾವೇಶಗಳ ಕುರಿತು ಮಾಹಿತಿ ನೀಡಿದರು. ಫೆ.18ರಂದು ಮಧ್ಯಾಹ್ನ 12 ಗಂಟೆಗೆ ಮೋದಿ ದಾವಣಗೆರೆಯಲ್ಲಿ ಮತ್ತು ಸಂಜೆ 4 ಗಂಟೆಗೆ ಮಂಗಳೂರಿನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

Prahlad Joshi

ಫೆ.28ರಂದು ಮಧ್ಯಾಹ್ನ 12 ಗಂಟೆಗೆ ಗುಲ್ಬರ್ಗ ಮತ್ತು ಸಂಜೆ 4 ಗಂಟೆಗೆ ಹುಬ್ಬಳ್ಳಿಯಲ್ಲಿ ನರೇಂದ್ರ ಮೋದಿ ಸಮಾವೇಶಗಳು ನಡೆಯಲಿವೆ ಎಂದು ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು. ಮೋದಿಯವರ ಈ ನಾಲ್ಕು ಸಮಾವೇಶಗಳಿಗೂ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು. [ನರೇಂದ್ರ ಮೋದಿ ಸಮಾವೇಶದ ದಿನಾಂಕ ಬದಲು]

ಪಕ್ಷದ ಲೋಕಸಭೆ ಚುನಾವಣೆ ಪ್ರಣಾಳಿಕೆ ಸಿದ್ಧಪಡಿಸಲು ಜನರ ಅಭಿಪ್ರಾಯ ಸಂಗ್ರಹಿಸಲು ನಿಮ್ಮ ಧ್ವನಿ ನಮ್ಮ ಪ್ರಣಾಳಿಕೆ ಅರ್ಜಿಯ ಮುದ್ರಣವಾಗುತ್ತಿದೆ, ಇದನ್ನು ಸಾರ್ವನಿಕರಿಗೆ ವಿತರಿಸಲಾಗುವುದು. ಅರ್ಜಿಯ ಮೂಲಕ ಸಾರ್ವಜನಿಕರು ಪ್ರಣಾಳಿಕೆ ರಚನೆ ಕುರಿತು ಸಲಹೆ ನೀಡಬಹುದು ಎಂದು ಹೇಳಿದರು.

ಯಡಿಯೂರಪ್ಪ ಅವರಿಂದ ಬಲ ಬಂದಿದೆ : ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳಿರುವುದರಿಂದ ರಾಜ್ಯ ಬಿಜೆಪಿಗೆ ಹೆಚ್ಚಿನ ಬಲ ಬಂದಿದೆ ಎಂದು ಪಕ್ಷದ ರಾಷ್ಟ್ರೀಯ ನಾಯಕ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+