ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಹಿತಿ ಎಂ.ಎಂ.ಕಲಬುರ್ಗಿ ಮೇಲೆ ಗುಂಡಿನ ದಾಳಿ, ಸಾವು

|
Google Oneindia Kannada News

ಧಾರವಾಡ, ಆ.30 : ಹತ್ಯೆಗೀಡಾದ ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಅಂತಿಮ ದರ್ಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.

ಸಮಯ 11.30 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಕೊಲೆ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರವೀಂದ್ರ ಪ್ರಸಾದ್ ಹೇಳಿದ್ದಾರೆ. ಇಬ್ಬರು ಅಪರಿಚಿತರು ಬೈಕ್‌ನಲ್ಲಿ ಆಗಮಿಸಿದ್ದರು ಎಂಬ ಮಾಹಿತಿ ಪ್ರಾಥಮಿಕವಾಗಿ ಲಭ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಂಡಿನ ದಾಳಿಗೆ ಕಲಬುರ್ಗಿ ಬಲಿ : ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ.ಕಲಬುರ್ಗಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಭಾನುವಾರ ಬೆಳಗ್ಗೆ ಧಾರವಾಡದಲ್ಲಿ ಈ ಘಟನೆ ನಡೆಸಿದೆ.

ಧಾರವಾಡದ ಕಲ್ಯಾಣ ನಗರದಲ್ಲಿರುವ ಎಂ.ಎಂ.ಕಲಬುರ್ಗಿ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ 8.40ರ ಸುಮಾರಿಗೆ ಈ ಗುಂಡಿನ ದಾಳಿ ನಡೆದಿದೆ. ಅಪರಿಚಿತರು ಎರಡು ಸುತ್ತು ಗುಂಡು ಹಾರಿಸಿದ್ದು ಹಣೆ ಮತ್ತು ಎದೆಗೆ ಗುಂಡು ಹೊಕ್ಕಿದ ಕಲಬುರ್ಗಿ (77) ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. [ಕೊಡಗು ನುಡಿಹಬ್ಬಕ್ಕೆ ಡಾ.ಎಂಎಂ ಕಲಬುರ್ಗಿ ಅಧ್ಯಕ್ಷ]

mm kalburgi

ಬೆಳಗ್ಗೆ ತಿಂಡಿ ತಿನ್ನುವ ಸಮಯದಲ್ಲಿ ಮನೆಗೆ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಕಲಬುರ್ಗಿ ಅವರ ಮಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಕಲಬುರ್ಗಿ ಅವರನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಎಂ.ಎಂ.ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಆಗ ಅವರ ಮನೆಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.

ಮನೆಯ ಮೇಲೆ ದಾಳಿ ನಡೆದಿತ್ತು : 2014ರ ಜೂನ್‌ನಲ್ಲಿ ಕಲ್ಯಾಣನಗರದಲ್ಲಿನ ಕಲಬುರ್ಗಿ ಅವರ ಮನೆಯೆದುರು ರಾತ್ರಿ 10 ಗಂಟೆಯ ವೇಳೆ ಕುಡಿದ ಅಮಲಿನಲ್ಲಿದ್ದ ಗುಂಪೊಂದು 2 ಬೈಕುಗಳಲ್ಲಿ ಬಂದು ಅಶ್ಲೀಲ ಪದಗಳಿಂದ ನಿಂದಿಸಿ, ಕಲ್ಲುಗಳು ಮತ್ತು ನಾಲ್ಕಾರು ಖಾಲಿ ಬಿಯರ್ ಬಾಟಲಿಗಳನ್ನು ಮನೆಯ ಮೇಲೆ ಎಸೆದು ಪರಾರಿಯಾಗಿದ್ದರು.

English summary
In a shocking incident, prominent thinker and Kannada writer Prof. M M Kalburgi was shot dead by unidentified gunmen at his residence in Dharwad, Karnataka. Kalburgi was shot dead by unidentified gunmen at his residence on Sunday, August 30th morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X