ಧಾರವಾಡ; ಜೇಬಲ್ಲಿ ಹಣ ಬೇಡ, ಮೊಬೈಲ್ ಬಳಸಿ NWKRTC ಟಿಕೆಟ್ ಪಡೆಯಿರಿ

ಧಾರವಾಡ, ಫೆಬ್ರವರಿ 11: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಧಾರವಾಡ ಘಟಕ ಪ್ರಯಾಣಿಕರ ಅನುಕೂಲಕ್ಕಾಗಿ ಕ್ಯೂ. ಆರ್. ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಜೇಬಲ್ಲಿ ಹಣ ಬೇಡ, ಮೊಬೈಲ್ ಬಳಸಿ ಟಿಕೆಟ್ ಪಡೆಯಿರಿ.

ಈ ಕುರಿತು ವಾ.ಕ.ರ.ಸಾ.ಸಂಸ್ಥೆ.ಧಾರವಾಡ (ಗ್ರಾಮೀಣ) ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರು ಈ ಸೌಲಭ್ಯವನ್ನು ಉಪಯೋಗಿಸಿಕೊಂಡು ಟಿಕೆಟ್ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

NWKRTC Dharwad Division Introduce QR Code Ticketing In Bus

ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯುಪಿಐ ಮುಖಾಂತರ ಕ್ಯೂ. ಆರ್. ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಇದು ಪ್ರಾಯೋಗಿಕವಾಗಿದ್ದು, ಮುಂಬರುವ ದಿನಗಳಲ್ಲಿ ವಿಭಾಗದ ವ್ಯಾಪ್ತಿಯ ಘಟಕಗಳಾದ ಸವದತ್ತಿ, ರಾಮದುರ್ಗ, ಹಳಿಯಾಳ, ದಾಂಡೇಲಿಯಲ್ಲಿಯೂ ಸಹ ಈ ವ್ಯವಸ್ಥೆ ಜಾರಿಯಾಗುತ್ತದೆ. ಈ ವ್ಯವಸ್ಥೆ ಪ್ರಯಾಣಿಕ ಸ್ನೇಹಿಯಾಗಿದೆ, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಆರಂಭ; 2023ರ ಸೆಪ್ಟೆಂಬರ್‌ನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್‌ಗಳಲ್ಲಿ ಪ್ರಾಯೋಗಿಕವಾಗಿ ಕ್ಯೂ. ಆರ. ಕೋಡ್ ಬಳಕೆ ಮಾಡಿಕೊಂಡು ಟಿಕೆಟ್ ನೀಡುವ ವ್ಯವಸ್ಥೆ ಜಾರಿಗೆ ತಂದಿತು.

ಪ್ರಯಾಣಿಕರಿಂದಲೂ ಈ ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಟಿಕೆಟ್ ವಹಿವಾಟಿನ ಮೊತ್ತ 1.50 ಕೋಟಿ ದಾಟಿತು. ಬಳಿಕ ಸಂಸ್ಥೆಯ ಎಲ್ಲಾ ಬಸ್‌ಗಳಿಗೂ ಸಹ ಈ ಸೇವೆಯನ್ನು ಹಂತ ಹಂತವಾಗಿ ವಿಸ್ತರಣೆ ಮಾಡುತ್ತಾ ಬರಲಾಗಿದೆ.

ಇದಕ್ಕಾಗಿಯೇ ಬಸ್ ನಿರ್ವಾಹಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂ ಆರ್ ಕೋಡ್ ನೀಡಲಾಗಿದೆ. ಬಸ್ ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಸೇರಿದಂತೆ ವಿವಿಧ ಯುಪಿಐ ಅಪ್ಲಿಕೇಷನ್ ಬಳಕೆ ಮಾಡಿಕೊಂಡು ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಬಹುದು.

ಕ್ಯೂ. ಆರ್. ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿಯಿಂದ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಚಿಲ್ಲರೆಗಾಗಿ ನಡೆಯುವ ಜಟಾಪಟಿಗೆ ಕಡಿವಾಣ ಬೀಳಲಿದೆ. ಕೈಯಲ್ಲಿರುವ ಮೊಬೈಲ್ ಮೂಲಕ ಜನರು ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಬಹುದು.

ಹುಬ್ಬಳ್ಳಿಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೊಳಿಸಿದಾಗ 71,396 ವಹಿವಾಟು ನಡೆದಿತ್ತು. 1,50,26,815 ಕೋಟಿ ರೂ. ಸಂಗ್ರಹವಾಗಿತ್ತು. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಈ ವ್ಯವಸ್ಥೆಯನ್ನು ಇನ್ನೂ ಹಲವು ಮಾರ್ಗಗಳಿಗೆ ವಿಸ್ತರಣೆ ಮಾಡಲಾಯಿತು.

2024ರ ಜನವರಿ ಅಂತ್ಯದೊಳಗೆ ನಿಗಮದ ಎಲ್ಲಾ 4581 ಬಸ್‌ಗಳಲ್ಲಿ ಕ್ಯೂ. ಆರ್. ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಈಗ ಧಾರವಾಡ ಘಟವೂ ಸಹ ಕ್ಯೂ. ಆರ್. ಕೋಡ್ ವ್ಯವಸ್ಥೆ ಜಾರಿಗೊಳಿಸಿದೆ.

ನಮ್ಮ ಮೆಟ್ರೋ, ಕೆಎಸ್ಆರ್‌ಟಿಸಿ, ಬಿಎಂಟಿಸಿಯಲ್ಲಿ ಈಗಾಗಲೇ ಕ್ಯೂ. ಆರ್. ಕೋಡ್ ಬಳಸಿ ಟಿಕೆಟ್ ಖರೀದಿ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಸಹ ವ್ಯಕ್ತವಾಗಿದೆ. ಈಗ ಎಲ್ಲರ ಕೈಯಲ್ಲಿ ಸಹ ಮೊಬೈಲ್ ಇರುವುದರಿಂದ ಈ ವ್ಯವಸ್ಥೆ ಜನರಿಗೆ ಪ್ರಯಾಣದ ಸಂದರ್ಭದಲ್ಲಿ ಸಹಕಾರಿಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+